ಧಾರವಾಡ | ಕಟ್ಟಡ ಕಾರ್ಮಿಕರ ಆರೋಗ್ಯ ಚಿಕಿತ್ಸೆಗೆ 3 ಸಂಚಾರಿ ಆರೋಗ್ಯ ಕ್ಲಿನಿಕ್ ವಾಹನಗಳಿಗೆ ಸಂತೋಷ ಲಾಡ್ ಚಾಲನೆ

Date:

Advertisements

ಕಟ್ಟಡ ಕಾರ್ಮಿಕರಿಗಾಗಿ ಸಂಚಾರಿ ಆರೋಗ್ಯ ಕ್ಲಿನಿಕ್ ಯೋಜನೆಯ ವಾಹನಗಳನ್ನು ಬೆಂಗಳೂರಿನಲ್ಲಿ ಕಳೆದ ತಿಂಗಳು ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದರು. ಆ ಹಿನ್ನೆಲೆಯಲ್ಲಿ ಮೇ. 27ರಂದು ಧಾರವಾಡದ ಸಕ್ರ್ಯೂಟ್ ಹೌಸ್ ಆವರಣದಲ್ಲಿ ಸಂಚಾರಿ ಆರೋಗ್ಯ ಕ್ಲಿನಿಕ್ ಯೋಜನೆಯ 3 ವಾಹನಗಳನ್ನು ಕಾರ್ಮಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹಸಿರು ಬಾವುಟ ತೋರಿಸುವ ಮೂಲಕ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಕಟ್ಟಡ ಕಾರ್ಮಿಕರ ಆರೋಗ್ಯ, ಸುರಕ್ಷತೆ ಹಿನ್ನಲೆಯಲ್ಲಿ ರಾಜ್ಯ ಸರಕಾರದ ಕಾರ್ಮಿಕ ಇಲಾಖೆಯಿಂದ ಪ್ರತಿ ಜಿಲ್ಲೆಯಲ್ಲಿ ಆರೋಗ್ಯ ಕ್ಲೀನಿಕ್ ಸಂಚಾರಿ ವಾಹನಗಳನ್ನು ರೂಪಿಸಲಾಗಿದೆ. ಕಾರ್ಮಿಕರು ಮತ್ತು ಅವರ ಮಕ್ಕಳು ಆರೋಗ್ಯವಾಗಿ ಇರಬೇಕೆಂಬ ಹಿತದೃಷ್ಟಿಯಿಂದ ಜಿಲ್ಲೆಯಲ್ಲಿ ಕಟ್ಟಡ ನಿರ್ಮಾಣವಾಗುವ ಪ್ರದೇಶಕ್ಕೆ ಹೋಗಿ ಜ್ವರ, ಕೆಮ್ಮು, ಮಧುಮೇಹ, ರಕ್ತದೊತ್ತಡ, ರಕ್ತ ಪರೀಕ್ಷೆ ಸೇರಿದಂತೆ ಸುಮಾರು 20 ಪ್ಯಾರಾ ಮೀಟರ್‌ಗಳ ಅನ್ವಯ ಕಾರ್ಮಿಕರ ಹಾಗೂ ಅವರ ಸಂಭಂದಿಗಳ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ತಪಾಸಣೆ ಕುರಿತ ಅವರ ದಾಖಲೆಗಳು ಆನ್‌ಲೈನ ಮೂಲಕ ನೇರವಾಗಿ ಕಾರ್ಮಿಕ ಇಲಾಖೆಯ ಮುಖ್ಯ ಕಚೇರಿಗೆ ತಲುಪುತ್ತದೆ ಎಂದರು.

ಕಾರ್ಯಾದೇಶ ಪಡೆದಿರುವ ಸಂಸ್ಥೆಗಳು ಪ್ರತಿ ತಿಂಗಳು ಸಂಚಾರಿ ಆರೋಗ್ಯ ಕ್ಲಿನಿಕ್ ಸಂಚರಿಸುವ ಮಾರ್ಗ, ಸ್ಥಳದ ಬಗ್ಗೆ ರೂಟ್ ಮ್ಯಾಪ್‍ನ್ನು ಸಿದ್ಧಪಡಿಸಿ, ಖಾತರಿಪಡಿಸಿಕೊಳ್ಳಬೇಕು. ಪ್ರತಿ ತಿಂಗಳ ರೂಟ್ ಮ್ಯಾಪ್‍ಗಳನ್ನು ಕನಿಷ್ಠ 15 ದಿನಗಳ ಮುಂಚಿತವಾಗಿ ಸಿದ್ದಪಡಿಸಿ, ವಾಹನಗಳು ಸಂಚರಿಸುವ ಮಾರ್ಗದಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡಲು ಪ್ರಚಾರ ಮಾಡಬೇಕು. ರೂಟ್ ಮ್ಯಾಪ್ ತಯಾರಿಸುವಾಗ ಸಂಸ್ಥೆಯು ಎಲ್ಲಾ ತಾಲ್ಲೂಕುಗಳು ಮತ್ತು ತಾಲ್ಲೂಕಿನ ಎಲ್ಲಾ ಪ್ರದೇಶಗಳು (ಗ್ರಾಮ,ವಾರ್ಡ್,ಹೋಬಳಿ) ಒಳಪಡುವ ರೀತಿ ಕ್ರಮವಹಿಸಿ ಹಾಗೂ ಎಲ್ಲಾ ವಿಧಾನಸಭಾ ಕ್ಷೇತ್ರಗಳು ಒಳಪಡುವ ರೀತಿಯಲ್ಲಿ ರೂಟ್ ಮ್ಯಾಪ್‍ನ್ನು ಸಿದ್ದಪಡಿಸುತ್ತಾರೆ. ರೂಟ್ ಮ್ಯಾಪ್‍ನ್ನು ಸಿದ್ದಪಡಿಸುವಾಗ ಪ್ರಯಾಣದ ಸಮಯವು ಅತ್ಯಂತ ಕಡಿಮೆ ಇರುವಂತೆ ಹಾಗೂ ನಿಗಧಿತ ಸ್ಥಳದಲ್ಲಿ ಸಂಚಾರಿ ಆರೋಗ್ಯ ಘಟಕಗಳು ಕನಿಷ್ಠ 04 ಗಂಟೆಗಳಾದರೂ ಕಾರ್ಯನಿರ್ವಹಿಸುವುದನ್ನು ಖಾತರಿಪಡಿಸಿಕೊಳ್ಳಲಾಗುತ್ತದೆ ಎಂದು ಹೇಳಿದರು.

Advertisements
IMG 20250527 163502

ಹೆಚ್ಚಿನ ಸಂಖ್ಯೆಯ ನೋಂದಾಯಿತ ಕಾರ್ಮಿಕರಿಗೆ ಸೌಲಭ್ಯ ಸಿಗುವಂತಹ ಪ್ರದೇಶಗಳಿಗೆ ಹೋಗುವುದು. ಸಂಚಾರಿ ಆರೋಗ್ಯ ಘಟಕಗಳು ಕಾರ್ಯನಿರ್ವಹಿಸುವ ಸ್ಥಳಗಳಲ್ಲಿ ಶೌಚಾಲಯಗಳು ಇರುವುದನ್ನು ಖಾತರಿಪಡಿಸಿಕೊಳ್ಳುವುದು. ಸದರಿ ಸಂಚಾರಿ ಆರೋಗ್ಯ ಘಟಕಗಳಲ್ಲಿ 25 ವೈದ್ಯಕೀಯ ಉಪಕರಣಗಳು, 05 ಪ್ರಯೋಗಾಲಯದ ಉಪಕರಣಗಳು ಹಾಗೂ 37 ವಿವಿಧ ವೈದ್ಯಕೀಯ ಬಳಕೆ ವಸ್ತುಗಳು (bedsheets consumables) ಇರುತ್ತದೆ. ಈ ಕುರಿತು ಕಾರ್ಮಿಕ ಇಲಾಖೆ ಅಧಿಕಾರಿಗಳು ನಿಗಾ ವಹಿಸುತ್ತಾರೆ ಎಂದರು.

ಶಾಸಕ ಅರವಿಂದ ಬೆಲ್ಲದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಎನ್.ಎಚ್.ಕೋನರಡ್ಡಿ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಸಿಇಓ ಭುವನೇಶ ಪಾಟೀಲ, ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಎಂ. ಬ್ಯಾಕೋಡ್, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತ ಡಾ. ರುದ್ರೇಶ ಘಾಳಿ, ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕಿರ್ ಸನದಿ ಹಾಗೂ ಕಾರ್ಮಿಕ ಇಲಾಖೆ ಸಹಾಯಕ ಆಯುಕ್ತ ಸಚೀನ್, ಜಿಲ್ಲಾ ಕಾರ್ಮಿಕ ಅಧಿಕಾರಿಗಳು, ಹಿರಿಯ ಕಾರ್ಮಿಕ ನಿರೀಕ್ಷಕರು, ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X