ಧಾರವಾಡ ಶಹರದ ಸಪ್ತಾಪೂರ ರಸ್ತೆಯಲ್ಲಿರುವ ಮಿಲಿಟರಿ ಬಾಲಕಿಯರ ವಸತಿ ನಿಲಯದಲ್ಲಿ 2025-26ನೇ ಸಾಲಿಗೆ ಧಾರವಾಡ, ಗದಗ, ಹಾವೇರಿ, ಮತ್ತು ಬಳ್ಳಾರಿ ಜಿಲ್ಲೆಗಳ ಗ್ರಾಮಾಂತರ ಪ್ರದೇಶ, ಹಾಗೂ ರಾಜ್ಯದ ಇತರ ಜಿಲ್ಲೆಗಳಲ್ಲಿರುವ ಯುದ್ದದಲ್ಲಿ ಮಡಿದ ಯೋಧರ ಮತ್ತು ಮಾಜಿ ಸೈನಿಕರ ಹೆಣ್ಣು ಮಕ್ಕಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ 5 ನೇ ತರಗತಿಯಿಂದ ಪಿಯುಸಿ-2 ರ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುತ್ತದೆ. ವಸತಿ ನಿಲಯದಲ್ಲಿ ವಾಸ್ತವ್ಯ ಮತ್ತು ಊಟೋಪಚಾರಗಳು ಉಚಿತವಾಗಿದ್ದು, ಮಾಜಿ ಸೈನಿಕರ ಹೆಣ್ಣು ಮಕ್ಕಳು ಈ ಸೌಲಭ್ಯದ ಉಪಯೋಗ ಪಡೆಯಬಹುದಾಗಿರುತ್ತದೆ. ವಸತಿ ನಿಲಯದಲ್ಲಿ ಧಾರವಾಡ ನಗರದಲ್ಲಿರುವ ವಿದ್ಯಾ ಸಂಸ್ಥೆಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿನಿಯರಿಗೆ ಮಾತ್ರ ನಿಲಯದಲ್ಲಿ ಪ್ರವೇಶ ನೀಡಲಾಗುವದು.
ಇದನ್ನು ಓದಿದ್ದೀರಾ? ಧಾರವಾಡ | ಕಟ್ಟಡ ಕಾರ್ಮಿಕರ ಆರೋಗ್ಯ ಚಿಕಿತ್ಸೆಗೆ 3 ಸಂಚಾರಿ ಆರೋಗ್ಯ ಕ್ಲಿನಿಕ್ ವಾಹನಗಳಿಗೆ ಸಂತೋಷ ಲಾಡ್ ಚಾಲನೆ
ಆಸಕ್ತ ವಿದ್ಯಾರ್ಥಿನಿಯರು 2025 ಮೇ. 31ರ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ದೂರವಾಣಿ ಸಂಖ್ಯೆ:0836-2440176 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.