ರಾಯಚೂರು | ಬಿತ್ತನೆ ಬೀಜ ಗುಣಮಟ್ಟ ಪರೀಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Date:

Advertisements

ರಾಯಚೂರು ಮತ್ತು ದೇವದುರ್ಗ ತಾಲೂಕಗಳಲ್ಲಿ ಹತ್ತಿ ಬೆಳೆ ಕುಂಠಿತವಾಗಲು ಕಳಪೆ ಬೀಜ ಕಾರಣವೆಂದು ರೈತರು ಆರೋಪಿಸಿದ್ದಾರೆ. ಬಿತ್ತನೆ ಬೀಜಗಳ ಗುಣಮಟ್ಟದ ಪರೀಕ್ಷೆ ನಡೆಸಿ, ಕಳಪೆ ಬೀಜಗಳನ್ನು ಮಾರಾಟ ಮಾಡಿದ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ರಾಯಚೂರು ಜಿಲ್ಲಾಧಿಕಾರಿ ಎಲ್ ಚಂದ್ರಶೇಖರ ನಾಯಕ ಸೂಚಿಸಿದರು.

ರಾಯಚೂರಿನಲ್ಲಿ ವಿವಿಧ ರೈತ ಸಂಘಟನೆಗಳ ಮುಖಂಡರು ಮತ್ತು ಕೃಷಿ ಇಲಾಖೆ ಅಧಿಕಾರಗಳ ಜೊತೆ ಶುಕ್ರವಾರ ಅವರು ಸಭೆ ನಡೆಸಿದ್ದು, ಕೃಷಿ ಸಂಬಂಧಿತ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು. “ಹತ್ತಿ ಬೀಜವು ದುಬಾರಿ ಬೆಲೆಗೆ ಮಾರಾಟ ಮಾಡಲಾಗುತ್ತಿದೆ ಎಂಬ ದೂರುಗಳು ಬಂದಿವೆ. ಬೀಜ ಮಾರಾಟಗಾರರು ಕಡ್ಡಾಯವಾಗಿ ಬೀಜ ದರ ಪಟ್ಟಿ ನಮೂದಿಸುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು” ಎಂದು ಸೂಚಿಸಿದರು.

ಸಭೆಯಲ್ಲಿ ಮಾತನಾಡಿದ ರೈತ ನಾಯಕ ಚಾಮರಸ ಮಾಲಿ ಪಾಟೀಲ್, “ಹತ್ತಿ ಬೀಜ ಕಳಪೆಯಾಗಿದ್ದರಿಂದ ಬೆಳೆ ಕೆಂಪುರೋಗಕ್ಕೆ ತುತ್ತಾಗಿ ಇಳುವರಿ ಕುಸಿತವಾಗಿದೆ. ಬೆಳೆ ನಷ್ಟವಾಗಿದ್ದು, ರೈತರು ಸಂಕಷ್ಟ ಎದುರಿಸುತ್ತಿದ್ದಾರೆ” ಎಂದು ರೈತ ಮುಖಂಡ ಚಾಮರಸ ಮಾಲಿಪಾಟೀಲ್ ಹೇಳಿದರು.

Advertisements

ಕೃಷಿ ಜಂಟಿ ನಿರ್ದೆಶಕಿ ದೇವಿಕಾ ಮಾತನಾಡಿ, “ಈಗಾಗಲೇ ಕೃಷಿ ಇಲಾಖೆ ಹಾಗೂ ಕೃಷಿವಿಜ್ಞಾನಿಗಳು ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಳೆ ಕುಂಠಿತವಾಗಲು ಬೀಜ ಕಾರಣವಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೂ, ಇಲಾಖೆಯಿಂದ ರೈತರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಅಲ್ಲದೆ, ರೈತ ಸಂಪರ್ಕ ಕೇಂದ್ರಗಳಲ್ಲಿ ಅಧಿಕಾರಿಗಳ ನಿಯುಕ್ತಿಗೊಳಿಸಿ ಹತ್ತಿ ಬೀಜ ಮಾರಾಟದ ಮೇಲೆ ನಿಗಾವಹಿಸಲಾಗುತ್ತಿದೆ” ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ದುರಗೇಶ, ಪ್ರೊಬೆಷನರಿ ಐಎಎಸ್ ಅಧಿಕಾರಿ ಸಾಹಿತ್ಯ ಆಲದಕಟ್ಟಿ, ಕೃಷಿ ಇಲಾಖೆ ಸಹಾಯಕ ನಿರ್ದೇಶಕರು, ರೈತ ಸಂಘಗಳ ಮುಖಂಡರಾದ ಪ್ರಭಾಕರ ಪಾಟೀಲ್, ಬೂದೆಯ್ಯಸ್ವಾಮಿ, ಶರಣಪ್ಪ ಮರಳಿ,ಸೂಗುರಯ್ಯ ಸ್ವಾಮಿ ಮಠದ, ದೇವರಾಜ ನಾಯಕ, ಶರಣಪ್ಪ ಮರಳಿ, ರಾಮುಲು ಸೇರಿದಂತೆ ಹಲವರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X