ಧಾರವಾಡ | ನೀರಿಗಾಗಿ ವಿದ್ಯಾರ್ಥಿಗಳ ಪರದಾಟ

Date:

Advertisements

ಧಾರವಾಡದಲ್ಲಿ ನೀರಿನ ಅಭಾವ ಎದುರಾಗಿದೆ. ಕಳೆದ ಒಂದು ವಾರದಿಂದ ಕುಡಿಯುವ ನೀರಿಗಾಗಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿದ್ದಾರೆ. ನೀರು ಪೂರೈಕೆಗಾಗಿ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಈದಿನ.ಕಾಮ್ ಜೊತೆ ಮಾತನಾಡಿದ ಮಾರುತಿ ಗೊಲ್ಲರ, “ಒಂದು ವಾರದಿಂದ ನಮಗೆ ಕುಡಿಯುವ ನೀರು ಪೂರೈಕೆಯಾಗಿಲ್ಲ. ನನ್ನಂತೆ ದೂರದಿಂದ ಓದಲು ಬಂದು ಬಾಡಿಗೆ ರೂಮ್‌ಗಳಲ್ಲಿ ವಾಸವಿರುವ ವಿದ್ಯಾರ್ಥಿಗಳು ಪರದಾಡುವಂತಾಗಿದೆ” ಎಂದರು.

“ಕುಡಿಯಲು ನೀರಿಲ್ಲದ ಕಾರಣ ಜಿಲ್ಲಾಧಿಕಾರಿ ಕಚೇರಿ ಹತ್ತಿರವಿರುವ ನೀರು ಸರಬರಾಜು ಕೇಂದ್ರದಿಂದ ನೀರು ಹೊತ್ತು ತಂದು ಕುಡಿಯುವಂತಾಗಿದೆ. ಗುರುವಾರ ರಾತ್ರಿ (ಜುಲೈ 13) ಕೇಂದ್ರ ಅಂಚೆ ಕಚೇರಿಯಿಂದ ಕೊಡಗಳಿಂದ ನೀರು ಹೊತ್ತು ತಂದಿದ್ದೇವೆ” ಎಂದು ತಮ್ಮ ಕಷ್ಟವನ್ನು ಹೇಳಿಕೊಂಡದರು.

Advertisements

ವಿದ್ಯಾರ್ಥಿ ಮಹಾಂತೇಶ ಚಿಕ್ಕಣ್ಣವರ ಮಾತನಾಡಿ, “ಧಾರವಾಡದಲ್ಲಿ ನೀರಿನ ತೀವ್ರವಾಗಿ ಕಾಡುತ್ತಿದೆ. ಇಲ್ಲಿನ ಜನರು ನೀರಿಗಾಗಿ ಪರದಾಡುತ್ತಿದ್ದಾರೆ. ಮನುಷ್ಯನಿಗೆ ಮೂಲಭೂತವಾಗಿ ಬೇಕಿರುವುದು ನೀರು. ಅಂತಹ ನೀರಿನ ಕೊರತೆ ಉಂಟಾದರೆ ಸಮಸ್ಯೆಗಳ ಮಹಾಪೂರವೆ ಬೆಳೆಯುತ್ತದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಶೀಘ್ರ ಕ್ರಮಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X