ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 18ನೇ ಆವೃತ್ತಿಯ ಕೊನೆಯ ಲೀಗ್ ಪಂದ್ಯದಲ್ಲಿ ಲಕ್ನೋ ವಿರುದ್ಧ ರೋಚಕ ಜಯದ ಮೂಲಕ ಅಂಕಪಟ್ಟಿಯಲ್ಲಿ 2ನೇ ಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಲಕ್ನೋದ ಏಕನಾ ಸ್ಟೇಡಿಯಂನಲ್ಲಿ ನಡೆದ 18ನೇ ಐಪಿಎಲ್ ಸೀಸನ್‌ನ ಕೊನೆಯ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಲಕ್ನೋ, ನಾಯಕ ರಿಷಭ್ ಪಂತ್ ಅವರ ಭರ್ಜರಿ ಶತಕದ ನೆರವಿನಿಂದ 228 ರನ್‌ಗಳ ಬೃಹತ್ ಗುರಿಯನ್ನು ನೀಡಿತ್ತು.
ಈ ಗುರಿಯನ್ನು ಬೆನ್ನಟ್ಟಿದ್ದ ಆರ್‌ಸಿಬಿ, ಹಂಗಾಮಿ ನಾಯಕ ಜಿತೇಶ್ ಶರ್ಮಾ ಅವರ ಸ್ಫೋಟಕ ಅರ್ಧಶತಕ ಹಾಗೂ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿಯವರ ಅರ್ಧಶತಕದ ನೆರವಿನಿಂದ ಆರು ವಿಕೆಟ್‌ಗಳ ಅಂತರದಿಂದ ಗೆದ್ದುಕೊಂಡಿದ್ದಲ್ಲದೇ, ಅಂಕಪಟ್ಟಿಯಲ್ಲಿ ನಂ.2ನೇ ಸ್ಥಾನವನ್ನು ಪಡೆಯುವಲ್ಲಿ ಸಫಲವಾಯಿತು.
ಅಂಕಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಕಾಯ್ದುಕೊಂಡಿದ್ದ ಪಂಜಾಬ್ ಕಿಂಗ್ಸ್ ತಂಡವನ್ನು ಮೇ 29 ಆರ್‌ಸಿಬಿ ತಂಡವು ಕ್ವಾಲಿಫೈಯರ್‌ನ ಮೊದಲ ಪಂದ್ಯದಲ್ಲಿ ಎದುರಿಸಲಿದೆ.
