ಬಂಗಾಳ ಉಪಸಾಗರದ ವಾಯುವ್ಯ ಭಾಗದ ಒರಿಸ್ಸಾದ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಇದರಿಂದ ಕರ್ನಾಟಕದಲ್ಲಿ ಮೇ 28 ರಿಂದ 30ರ ವರೆಗೆ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆ ಇದೆ.
ಮೇ 31 ರಿಂದ ಮಳೆ ತೀವ್ರತೆ ಕಡಿಮೆ ಆಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಮಳೆಯ ಅಲರ್ಟ್ ನೀಡಿ ಎಚ್ಚರಿಕೆ ನೀಡಲಾಗಿದೆ.
ಕರಾವಳಿ, ಮಲೆನಾಡಿನ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಿದ್ರೆ, ಇತ್ತ ಬೆಂಗಳೂರಿಗೆ ಇಂದು ಯಲ್ಲೋ ಅಲರ್ಟ್ ನೀಡಲಾಗಿದೆ.ಉತ್ತರಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗಿನ ಕೆಲವು ಕಡೆಗಳಲ್ಲಿ ಭಾರಿ ಮತ್ತು ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
