ಇಂಡಿಯನ್ ಪ್ರೀಮಿಯರ್ ಲೀಗ್‌ನ ಲೀಗ್ ಹಂತದ ಪಂದ್ಯಗಳು ಮುಗಿದಿವೆ. ಈಗ ಇನ್ನು ನಾಲ್ಕು ಪಂದ್ಯಗಳು ಮಾತ್ರ ಬಾಕಿ ಉಳಿದಿವೆ. ಲೀಗ್ ಹಂತದ ಕೊನೆಯ ಪಂದ್ಯದವರೆಗೂ ಅಂಕಪಟ್ಟಿಯಲ್ಲಿ ಹಾವು ಏಣಿ ಆಟ ನಡೆಯಿತು. ಮಂಗಳವಾರ ನಡೆದ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಆರ್‌ಸಿಬಿ, ಎಲ್‌ಎಸ್‌ಜಿ ತಂಡವನ್ನು ಮಣಿಸಿ ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಪಡೆದಿದೆ. ಈ ಮೂಲಕ ಕ್ವಾಲಿಫೈಯರ್‌ಗೆ ಅರ್ಹತೆ ಪಡೆದಿದೆ.
18ನೇ ಆವೃತ್ತಿಯ ಐಪಿಎಲ್‌ನಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿರುವ ಆರ್‌ಸಿಬಿ ಅಬ್ಬರಿಸಿದೆ. ಮಂಗಳವಾರ ನಡೆದ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಎಲ್‌ಎಸ್‌ಜಿ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆಕ 227 ರನ್ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಆರ್‌ಸಿಬಿ 18.4 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 230 ರನ್ ಸಿಡಿಸಿ ಅಬ್ಬರಿಸಿತು. ಈ ಗೆಲುವಿನ ಮೂಲಕ ಎರಡು ಅಂಕಗಳನ್ನು ಕಲೆ ಹಾಕಿದ ಆರ್‌ಸಿಬಿ 19 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಬಡ್ತಿ ಪಡೆದಿದೆ.
ಮುಂಬೈ ತಂಡವನ್ನು ಸೋಲಿಸಿದ್ದ ಪಂಜಾಬ್ ಕಿಂಗ್ಸ್ 19 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ಬಡ್ತಿ ಪಡೆಯಿತು. ಆರ್‌ಸಿಬಿ ಟೂರ್ನಿಯ ಲೀಗ್ ಹಂತದ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದೆ. ತವರಿನಾಚೆ ಆಡಿದ ಏಳು ಪಂದ್ಯಗಳನ್ನು ಗೆದ್ದು ಇತಿಹಾಸ ನಿರ್ಮಿಸಿದೆ. ಈ ಮೂಲಕ 19 ಅಂಕಗಳನ್ನು ಕಲೆ ಹಾಕಿದೆ. ರನ್ ರೇಟ್‌ನಲ್ಲಿ ಪಂಜಾಬ್‌ಗಿಂತಲೂ ಆರ್‌ಸಿಬಿ ಕೊಂಚ ಹಿಂದೆ ಇದ್ದು, ಎರಡನೇ ಸ್ಥಾನ ಪಡೆದುಕೊಂಡಿದೆ.
ಇದನ್ನು ಓದಿದ್ದೀರಾ? BREAKING NEWS | ಭಾರತ ಟೆಸ್ಟ್ ತಂಡದ ನಾಯಕನಾಗಿ ಶುಭಮನ್ ಗಿಲ್ ಆಯ್ಕೆ
ಕ್ವಾಲಿಫೈಯರ್ 1 ಅಂಕ ಪಟ್ಟಿಯಲ್ಲಿ ಮೊದಲೆರೆಡು ಸ್ಥಾನಗಳನ್ನು ಪಡೆದ ತಂಡಗಳು ಮೇ 29 ರಂದು ಕ್ವಾಲಿಫೈಯರ್ 1ರಲ್ಲಿ ಕಾದಾಟ ನಡೆಸಲಿವೆ. ಈ ಪಂದ್ಯಕ್ಕೆ ಮುಲ್ಲನ್‌ಪುರ ಅಂಗಳ ಸಾಕ್ಷಿಯಾಗಲಿದೆ. ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿರುವ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕ್ವಾಲಿಫೈಯರ್ 1ರಲ್ಲಿ ಹೋರಾಟ ನಡೆಸಲಿವೆ. ಈ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಅಹಮದಾಬಾದ್‌ನಲ್ಲಿ ಜೂನ್ 3ರಂದು ನಡೆಯಲಿರುವ ಫೈನಲ್‌ಗೆ ಅರ್ಹತೆ ಪಡೆಯುತ್ತದೆ. ಸೋತ ತಂಡಕ್ಕೆ ಮತ್ತೊಂದು ಅವಕಾಶ ಸಿಗುತ್ತದೆ.
ಐಪಿಎಲ್‌ನ ಅಂಕ ಪಟ್ಟಿಯಲ್ಲಿ ಮೂರು ಹಾಗೂ ನಾಲ್ಕನೇ ಸ್ಥಾನ ಪಡೆದ ತಂಡಗಳು ಎಲಿಮಿನೇಟರ್‌ನಲ್ಲಿ ಕಾದಾಟ ನಡೆಸಲಿವೆ. ಮೇ 30 ರಂದು ನಡೆಯುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಸ್ಪರ್ಧೆ ನಡೆಸಲಿವೆ. ಈ ಪಂದ್ಯಕ್ಕೂ ಮುಲ್ಲನ್‌ಪುರ ಅಂಗಳ ಸಾಕ್ಷಿಯಾಗಲಿದೆ. ಈ ಪಂದ್ಯದಲ್ಲಿ ಸೋತ ತಂಡ ಮನೆಯ ಹಾದಿ ಹಿಡಿದರೆ, ಗೆದ್ದ ತಂಡ ಕ್ವಾಲಿಫೈಯರ್ 2ರಲ್ಲಿ ಕಾದಾಟ ನಡೆಸಲಿದೆ.
ಕ್ವಾಲಿಫೈಯರ್ 1ರಲ್ಲಿ ಸೋತಿರುವ ತಂಡ ಹಾಗೂ ಎಲಿಮಿನೇಟರ್ ನಲ್ಲಿ ಗೆದ್ದಿರುವ ತಂಡಗಳು ಜೂನ್ 1 ರಂದು ಕ್ವಾಲಿಫೈಯರ್ 2ರಲ್ಲಿ ಸ್ಪರ್ಧೆ ನಡೆಸಲಿವೆ. ಈ ಪಂದ್ಯದಲ್ಲಿ ಜಯ ಸಾಧಿಸಿದ ತಂಡ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯಲಿದೆ.
