ಸಾವರ್ಕರ್‌ ಹೆಸರಿನ ದುರ್ಬಳಕೆ: ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

Date:

Advertisements

ವಿನಾಯಕ ದಾಮೋದರ್ ಸಾವರ್ಕರ್ ಅವರ ಹೆಸರನ್ನು ಲಾಂಛನಗಳು ಮತ್ತು ಹೆಸರುಗಳು (ಅನುಚಿತ ಬಳಕೆ ತಡೆಗಟ್ಟುವಿಕೆ) ಕಾಯ್ದೆ, 1950ರ ಅಡಿಯಲ್ಲಿ ಪಟ್ಟಿ ಮಾಡಲು ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜೊತೆಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತನ್ನ ಮೂಲಭೂತ ಕರ್ತವ್ಯಗಳಿಗೆ ಅಡ್ಡಿಪಡಿಸುತ್ತಿದ್ದಾರೆ ಎಂಬುದನ್ನೂ ಸುಪ್ರೀಂ ನಿರಾಕರಿಸಿದೆ.

ವೃತ್ತಿಪರ ಮತ್ತು ವಾಣಿಜ್ಯ ಉದ್ದೇಶಗಳಿಗಾಗಿ ಲಾಂಛನಗಳು ಮತ್ತು ಹೆಸರುಗಳ ಅನುಚಿತ ಬಳಕೆಯನ್ನು ಲಾಂಛನಗಳು ಮತ್ತು ಹೆಸರುಗಳು (ಅನುಚಿತ ಬಳಕೆ ತಡೆಗಟ್ಟುವಿಕೆ) ಕಾಯ್ದೆ, 1950 ತಡೆಯುತ್ತದೆ. ಇದರಡಿಯಲ್ಲಿ ಸಾವರ್ಕರ್ ಹೆಸರು ಸೇರಿಸಬೇಕು ಎಂಬುದು ಅರ್ಜಿದಾದ ಸಂಶೋಧನಕಾರ ಡಾ. ಪಂಕಜ್ ಕುಮುದ್‌ ಚಂದ್ರ ಫಡ್ನಿಸ್ ಮನವಿ.

ಇದನ್ನು ಓದಿದ್ದೀರಾ? ರಾಹುಲ್ ಗಾಂಧಿ ಸಂಸತ್ತಿನಿಂದ ಅನರ್ಹ | ಹತ್ತು ಗಂಭೀರ ಪ್ರಶ್ನೆಗಳು

Advertisements

ಜೊತೆಗೆ ಸಾವರ್ಕರ್ ವಿರುದ್ಧ ಆರೋಪ ಹೊರಿಸುವ ಹೇಳಿಕೆಗಳನ್ನು ನೀಡುವ ಮೂಲಕ ರಾಹುಲ್ ಗಾಂಧಿಯವರು ತಮ್ಮ ಮೂಲಭೂತ ಕರ್ತವ್ಯಗಳನ್ನು ಉಲ್ಲಂಘಿಸುತ್ತಿದ್ದಾರೆ ಎಂದೂ ಫಡ್ನಿಸ್ ಆರೋಪಿಸಿದ್ದಾರೆ.

“ಕಳೆದ 30 ವರ್ಷಗಳಿಂದ ನಾನು ಸಾವರ್ಕರ್ ಬಗ್ಗೆ ಸಂಶೋಧನೆ ಮಾಡುತ್ತಿದ್ದೇನೆ. ಆದ್ದರಿಂದ ಲಾಂಛನಗಳು ಮತ್ತು ಹೆಸರುಗಳು (ಅನುಚಿತ ಬಳಕೆ ತಡೆಗಟ್ಟುವಿಕೆ) ಕಾಯ್ದೆ, 1950ರ ಅಡಿಯಲ್ಲಿ ಸಾವರ್ಕರ್ ಹೆಸರು ಪಟ್ಟಿ ಮಾಡಬೇಕು” ಎಂದು ಕೋರಿದ್ದಾರೆ.

ಈ ಅರ್ಜಿಯ ವಿಚಾರಣೆಯನ್ನು ನಡೆಸಿದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಆಗಸ್ಟೀನ್ ಜಾರ್ಜ್ ಮಸಿಹ್ ನೇತೃತ್ವದ ದ್ವಿಸದಸ್ಯ ಪೀಠವು ಯಾವುದೇ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿಲ್ಲ. ಈ ರೀತಿಯ ರಿಟ್‌ಗಳ ವಿಚಾರಣೆ ಮಾಡಲ್ಲ ಎಂದು ಹೇಳಿದೆ.

“ಈ ವಿಚಾರದಲ್ಲಿ ನಾವು ಮಧ್ಯಪ್ರವೇಶಿಸಬೇಕಾದ ಯಾವುದೇ ಕಾರಣ ನಮಗೆ ಕಂಡುಬರುತ್ತಿಲ್ಲ. ಅರ್ಜಿದಾರರ ಯಾವುದೇ ಮೂಲಭೂತ ಹಕ್ಕಿನ ಮೇಲೆ ಪರಿಣಾಮ ಬೀರುವುದಿಲ್ಲ” ಎಂದು ಹೇಳಿ ಸುಪ್ರೀಂ ಕೋರ್ಟ್ ಮನವಿಯನ್ನು ತಿರಸ್ಕರಿಸಿದೆ.

ಇದನ್ನು ಓದಿದ್ದೀರಾ? ರಾಹುಲ್‌ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ | ಪೂರ್ಣೇಶ್‌ ಮೋದಿಗೆ ಸುಪ್ರೀಂ ಕೋರ್ಟ್‌ ನೋಟಿಸ್

ಇನ್ನು ಅರ್ಜಿದಾರರು ರಾಹುಲ್ ಗಾಂಧಿ ಅವರು ಸಾವರ್ಕರ್ ವಿರುದ್ಧ ಮಾಡಿರುವ ಆರೋಪಗಳಿಗೆ ಶಿಕ್ಷೆಯಾಗಿ ಸಮುದಾಯ ಸೇವೆ ಮಾಡಲು ನಿರ್ದೇಶಿಸಬೇಕು ಎಂದೂ ಕೋರಿದ್ದರು.

“ಸಾವರ್ಕರ್ ಅವರು ಬ್ರಿಟಿಷರ ಸಹಯೋಗಿಯಾಗಿದ್ದು, ಬ್ರಿಟಿಷರಿಂದ ಪಿಂಚಣಿ ಪಡೆದಿದ್ದರು” ಎಂದು ಇತ್ತೀಚೆಗೆ ರಾಹುಲ್ ಗಾಂಧಿ ಹೇಳಿದ್ದರು. ಇದಕ್ಕೆ ಸುಪ್ರೀಂ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿತ್ತು. ಈ ರೀತ ಹೇಳಿಕೆ ನೀಡಿದರೆ ಸ್ವಯಂಪ್ರೇರಿತ ಕ್ರಮ ಕೈಗೊಳ್ಳಲಾಗುವುದು ಎಂದು ನ್ಯಾಯಮೂರ್ತಿಗಳಾದ ದೀಪಂಕರ್ ದತ್ತ ಮತ್ತು ಮನಮೋಹನ್ ಅವರಿದ್ದ ಪೀಠ ಹೇಳಿತ್ತು. ಆದರೆ ಅವರ ವಿರುದ್ಧ ಹೂಡಲಾದ ಕ್ರಿಮಿನಲ್ ಪ್ರಕರಣದಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನೀಡಿದ್ದ ಸಮನ್ಸ್‌ಗೆ ಪೀಠವು ತಡೆ ನೀಡಿತ್ತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. Success of Democracy very much depends on media. So please be honest to journalism, honest to nation, honest to subscribers.
    Wish you good luck.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X