ಅಮಾಯಕರ ಕೊಲೆ | ದ್ವೇಷ ಭಾಷಣ ಮಾಡುವವರಿಗೆ ಸರ್ಕಾರ ಅಂಕುಶ ಹಾಕುವುದು ಯಾವಾಗ?

Date:

Advertisements

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆಗಳು ನಡೆಯುತ್ತಿವೆ. ಈ ಹತ್ಯೆಗಳಿಗೆ ಪ್ರತೀಕಾರ ಎಂಬ ಹೆಸರನ್ನ ಇಡುತ್ತಿದ್ದಾರೆ. ಇವರ ಪ್ರತೀಕಾರಗಳಿಗೆ ಅಮಾಯಕ ಜನರ ಜೀವವನ್ನ ಬಲಿ ಪಡೆಯುತ್ತಿದ್ದಾರೆ. ಹೌದು, ಮಂಗಳೂರಿನ ಹೊರವಲಯದ, ಬಂಟ್ವಾಳ ತಾಲೂಕು ವ್ಯಾಪ್ತಿಗೆ ಬರುವ ಕೊಳ್ತಮಜಲು ಬಳಿ ಮತ್ತೊಂದು ಯುವಕನ ಕೊಲೆಯಾಗಿದೆ. ದುಡಿಮೆಗೆ ಹೊರಟಿದ್ದ ಅಮಾಯಕ ಪಿಕಪ್ ಚಾಲಕ ಅಬ್ದುಲ್ ರಹೀಂ ದುಷ್ಕರ್ಮಿಗಳ ಕೊಲೆಗಡುಕರ ವಿಚಾರದಲ್ಲಿ ಧರ್ಮ, ಜಾತಿ ನೋಡುವ ಪ್ರಶ್ನೆಯೇ ಇಲ್ಲ: ಸಚಿವ ದಿನೇಶ್ ಗುಂಡೂರಾವ್ ಏಟಿಗೆ ಬಲಿಯಾಗಿದ್ದಾನೆ.

ಸದ್ಯ ಈ ಘಟನೆಗೆ ಇಡೀ ಕರ್ನಾಟಕವೇ ಆತಂಕಗೊಂಡಿದೆ. ದ್ವೇಷದ ಭಾಷಣಗಳಿಗೆ ಇಡೀ ಕರಾವಳಿಯೇ ಸ್ಮಶಾನವಾಗುತ್ತಿದೆ. ಬಂಟ್ವಾಳದಲ್ಲಿ ಇಬ್ಬರು ಯುವಕರ ಮೇಲೆ ನಡೆದ ಭೀಕರ ಹಲ್ಲೆಯಿಂದಾಗಿ ಒಬ್ಬ ಅಮಾಯಕ ಮೃತನಾಗಿದ್ದಾನೆ. ಇನ್ನೊಬ್ಬ ಯುವಕ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ದ್ವೇಷದ ರಾಜಕಾರಣಕ್ಕೆ ಯುವಕರು ಬಲಿಯಾಗುತ್ತಿರುವುದಕ್ಕೆ ಇದು ಮತ್ತೊಂದು ನಿದರ್ಶನವಾಗಿದೆ.

ಮಂಗಳೂರಿನ ಕೊಳತ್ತಮಜಲು ಎಂಬಲ್ಲಿ ಪಿಕಪ್ ಚಾಲಕನಾಗಿದ್ದ ಅಮಾಯಕ ಅಬ್ದುಲ್ ರಹಿಮಾನ್ ಎಂಬವರನ್ನು ದುಷ್ಕರ್ಮಿಗಳ ಗುಂಪು ತಲವಾರಿನಿಂದ ದಾಳಿ ನಡೆಸಿ ಹತ್ಯೆ ಮಾಡಿದೆ. ಘಟನೆಯಲ್ಲಿ ರಹೀಂ ಅವರೊಂದಿಗೆ ಇದ್ದ ಇನ್ನೋರ್ವ ಯುವಕ ಕಲಂದರ್ ಶಾಫಿ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಫಳ್ನೀರ್‌ನಲ್ಲಿರುವ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆಯ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಮೇ 30ರವರೆಗೆ ನೂತನ ಭಾರತೀಯ ನ್ಯಾಯ ಸುರಕ್ಷಾ ಸಂಹಿತೆಯ 163ನೇ ಕಲಂ ಅಡಿ ನಿಷೇಧಾಜ್ಞೆ ಜಾರಿಗೊಳಿಸಿದೆ.

Advertisements

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಮೇ 27ರಂದು ನಡೆದಿದ್ದು, ಘಟನೆಯ ಸಂಬಂಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. 15 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಈ ತಂಡದಲ್ಲಿ ಇಬ್ಬರು ಸ್ಥಳೀಯರೇ ಆದ ದೀಪಕ್ ಮತ್ತು ಸುಮಿತ್ ಕೂಡ ಇದ್ದ ಬಗ್ಗೆ ಉಲ್ಲೇಖಿಸಲಾಗಿದೆ.

ಅಬ್ದುಲ್ ರಹಿಮಾನ್ ಮತ್ತು ಕಲಂದರ್ ಶಾಫಿ ಅವರು ಹೊಳೆ ಬದಿಯಿಂದ ಪಿಕ್ ಅಪ್ ವಾಹನದಲ್ಲಿ ಮರಳು ಲೋಡ್ ಮಾಡಿ ಕುರಿಯಾಳ ಗ್ರಾಮದ ಈರಾ ಕೋಡಿಯ ಮನೆ ಬಳಿ ಇಳಿಸುವ ಸಮಯ ಪರಿಚಯಸ್ಥರಾದ ದೀಪಕ್, ಸುಮಿತ್ ಮತ್ತು 15 ಮಂದಿ ಏಕಾಏಕಿ ಚಾಲಕನ ಸೀಟಿನಲ್ಲಿದ್ದ ಅಬ್ದುಲ್ ರಹಿಮಾನ್ ಅವರನ್ನು ಹೊರಗೆ ಎಳೆದು ತಲವಾರು, ಚೂರಿ, ರಾಡ್ ಗಳೊಂದಿಗೆ ಯದ್ವಾ- ತದ್ಬಾ ತಿವಿದು ಕಡಿದಿದ್ದಾರೆ. ಆಗ ಪಕ್ಕದಲ್ಲಿದ್ದ ನಾನು ತಡೆಯಲು ಹೋದಾಗ ಚೂರಿಯಿಂದ ಎದೆಗೆ, ಬೆನ್ನಿಗೆ, ಕೈಗೆ, ತಿವಿದು ತಲವಾರಿನಿಂದ ಕಡಿದಿದ್ದಾರೆ. ಈ ವೇಳೆ ಅಲ್ಲಿದ್ದವರು ಬೊಬ್ಬೆ ಹಾಕಿದ್ದರಿಂದ ಹಲ್ಲೆ ಮಾಡಿದ ಆರೋಪಿಗಳು ಮಾರಕಾಸ್ತ್ರಗಳೊಂದಿಗೆ ಪರಾರಿಯಾಗಿದ್ದಾರೆ. ಹಲ್ಲೆಗೈದವರ ಪೈಕಿ ಇಬ್ಬರು ಪರಿಚಯಸ್ಥರು ಎಂದು ಹಲ್ಲೆಗೊಳಗಾಗಿ ಆಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಕಲಂದರ್ ಶಾಫಿ ಮಾಹಿತಿ ನೀಡಿದ್ದಾರೆ ಎಂದು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದ ಮುಹಮ್ಮದ್ ನಿಸಾರ್ ಎಂಬವರು ಬಂಟ್ಬಾಳ ಗ್ರಾಮೀಣ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಮೃತ ಅಬ್ದುಲ್ ರಹಿಮಾನ್ ಅವರು ಕೊಳ್ತಮಜಲು ಜುಮ್ಮಾ ಮಸೀದಿಯ ಕಾರ್ಯದರ್ಶಿಯಾಗಿದ್ದು ತೀವ್ರವಾಗಿ ಗಾಯಗೊಂಡ ಕಲಂದರ್ ಶಾಫಿ ಅವರು ಕೂಲಿ ಕೆಲಸ ಮಾಡಿಕೊಂಡಿದ್ದರು. ಊರಿನ ಜನರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು.

ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯ ಬೆನ್ನಲ್ಲೇ ಕುಡುಪು ಸಮೀಪ ಕೇರಳದ ಅಮಾಯಕ ಯುವಕ ಅಶ್ರಫ್‌ ಎಂಬಾತನನ್ನು ಸಂಘಪರಿವಾರದ ಗುಂಪು ಥಳಿಸಿ, ಹತ್ಯೆ ಮಾಡಿತ್ತು. ಈ ಸಂಬಂಧ ಈಗಾಗಲೇ 20ಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿತ್ತು. ಈ ಘಟನೆಯ ಬಳಿಕ ಅಂದರೆ ಮೇ 1ರಂದು ರಾತ್ರಿ ಸುರತ್ಕಲ್‌ನ ಮೊಹಮ್ಮದ್ ಫಾಝಿಲ್ ಕೊಲೆ ಪ್ರಕರಣದ ಆರೋಪಿ, ರೌಡಿಶೀಟರ್, ಸಂಘಪರಿವಾರದ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಹತ್ಯೆ ನಡೆದಿತ್ತು. ಆ ಬಳಿಕ ಜಿಲ್ಲೆಯಲ್ಲಿ ಕೋಮುದ್ವೇಷ ಭಾಷಣ ಮಾಡುವವರ ಸಂಖ್ಯೆಯೂ ಹೆಚ್ಚಳವಾಗಿತ್ತು.

bjp2

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ದ್ವೇಷ ಪ್ರೇರಿತ ಕೊಲೆ ಹಲ್ಲೆಗಳು ಪುನರಾವರ್ತನೆಯಾಗುತ್ತಿವೆ. ದ್ವೇಷ ಭಾಷಣಕಾರರು ಯುವಕರಲ್ಲಿ ಕೋಮು ದ್ವೇಷದ ಭಾಷಣಗಳನ್ನ ಮಾಡಿ ಪ್ರೇರೇಪಿಸುತ್ತಿದ್ದಾರೆ. ತಮ್ಮ ದ್ವೇಷ ಭಾಷಣಗಳಿಂದ ಯುವಕರನ್ನು ತಪ್ಪುದಾರಿಗೆ ತಳ್ಳುತ್ತಿದ್ದಾರೆ.

ಸಂಘಪರಿವಾರದ ಮುಖಂಡರಾದ ಶರಣ್ ಪಂಪ್‌ವೆಲ್, ಭರತ್ ಕುಮ್ದೇಲು, ಶ್ರೀಕಾಂತ್ ನಂಥವರು ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರ ತೀರಿಸುತ್ತೇವೆ ಎಂದು ಬಹಿರಂಗವಾಗಿ ದ್ವೇಷ ಭಾಷಣ ಮಾಡುತ್ತಾರೆ. ಆದರೆ, ಇವರ ಮೇಲೆ ಯಾವುದೇ ಕ್ರಮವಿಲ್ಲ. ಇವರ ಮೇಲೆ ಕೇವಲ ಎಫ್ ಐ ಆರ್ ಆಗಿ ಮರುದಿನವೇ ಬಿಡುಗಡೆಯಾಗುತ್ತದೆ. ಇವರ ಮೇಲೆ ಯಾವುದೇ ಕಾನೂನು ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಇವರುಗಳು ಆರಾಮವಾಗಿ ಹೊರಗಡೆ ಓಡಾಡಿಕೊಂಡು ಮತ್ತಷ್ಟು ದ್ವೇಷ ಭಾಷಣ ಉಗುಳುತ್ತಿದ್ದಾರೆ. ಇವರಷ್ಟೇ ಅಲ್ಲ, ಬಿಜೆಪಿ ಹಲವು ನಾಯಕರು ದ್ವೇಷ ಭಾಷಣ ಮಾಡುತ್ತಾರೆ.

ಹಿಂದೂ ಯುವಕನ ಹತ್ಯೆಯಾದಾಗ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬರುವ ಬಿಜೆಪಿ ನಾಯಕರು, ಮುಸ್ಲಿಂ ಯುವಕರನ ಹತ್ಯೆಯಾದಾಗ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಯಾದಾಗ ಈ ವಿಚಾರ ಎಷ್ಟು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಸರ್ಕಾರ ಈ ಬಗ್ಗೆ ಪ್ರತಿಕ್ರಿಯೆ ನೀಡಿತ್ತು. ಹಾಗೇಯೇ, ಬಿಜೆಪಿ ನಾಯಕರು ಸ್ವತಃ ಘಟನಾ ಸ್ಥಳಕ್ಕೆ ತೆರಳಿ ಪೊಲಿಸರಿಂದ ಮಾಹಿತಿ ಪಡೆದಿದ್ದರು. ಸುಹಾಸ್ ಶೆಟ್ಟಿ ಕುಟುಂಬಕ್ಕೆ 25 ಲಕ್ಷ ಪರಿಹಾರವನ್ನು ಕೂಡ ನೀಡಿದ್ದರು. ಆದರೆ, ಅದೇ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾಬ್ ಲಿಂಚಿಂಗ್ ನಡೆದಾಗ ಯಾವುದೇ ಪ್ರತಿಕ್ರಿಯೆ ಇಲ್ಲ. ಮಾಬ್ ಲಿಂಚಿಂಗ್ ನಂತಹ ಘಟನೆ ನಮ್ಮ ಕರ್ನಾಟಕದಲ್ಲಿ ನಡೆದಿರುವುದು ಇದು ಇಡೀ ರಾಜ್ಯಕ್ಕೆ ದೊಡ್ಡ ಅವಮಾನ. ಮಾಬ್ ಲಿಂಚಿಂಗ್ ಪ್ರಕರಣದಲ್ಲಿ ಪ್ರಮುಖ ಆರೋಪಿಗಳ ಮೇಲೆ ಕಾನೂನು ಕ್ರಮ ಜರುಗಿಸದೇ ಇರುವುದು ಸಹ ಈ ಕ್ರಿಮಿನಲ್ ಕೆಲಸಗಳಿಗೆ ಕುಮ್ಮಕ್ಕು ನೀಡಿದಂತಾಗಿದೆ.

ಕಳೆದ ಎರಡು ವರ್ಷದಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ಆದರೆ, ಕೋಮು ಸಾಮರಸ್ಯ ಕದಡುವವರನ್ನು ತಡೆಯುವ ಯಾವುದೇ ಕೆಲಸವನ್ನ ಸರ್ಕಾರ ಇಲ್ಲಿಯವರೆಗೂ ಮಾಡಿಲ್ಲ. ದ್ವೇಷ ಭಾಷಣ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ. ಸರಣಿ ಹತ್ಯೆಗಳಿಗೆ, ಧರ್ಮ ದ್ವೇಷದ, ಪ್ರತಿಕಾರದ ಭಾಷಣಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಕೊಲೆಗಳು ನಡೆಯುತ್ತಿವೆ. ಇದಕ್ಕೆ ಕಾನೂನು ಸುವ್ಯವಸ್ಥೆಯ ವೈಫಲ್ಯವೇ ನೇರ ಕಾರಣ ಎಂದರೇ ತಪ್ಪಾಗುವುದಿಲ್ಲ.

ಸಾಲು ಸಾಲು ಪ್ರತೀಕಾರದ ಭಾಷಣಗಳು, ಬಹಿಷ್ಕಾರದ ಕರೆಗಳು ಈ ಅವಧಿಯಲ್ಲಿ ಬಹಿರಂಗವಾಗಿಯೆ ಬಂದಿದೆ. ಬಜ್ಪೆಯಲ್ಲಿ ಸಂಘಪರಿವಾರ ಆಯೋಜಿಸಿದ ಪ್ರತಿಭಟನಾ ಸಭೆಯಲ್ಲಿ ಶ್ರೀಕಾಂತ್ ಶೆಟ್ಟಿ ಎಂಬ ಜಾಗರಣಾ ವೇದಿಕೆಯ ಭಾಷಣಕಾರ “ಪ್ರತೀಕಾರ ನಡೆಸಿಯೇ ಸಿದ್ದ” ಎಂದು ಘೋಷಿಸುವಾಗ ದ.ಕ. ಜಿಲ್ಲೆಯ ಬಹುತೇಕ ಬಿಜೆಪಿ ಶಾಸಕರು ವೇದಿಕೆಯ ಮುಂಭಾಗದಲ್ಲೇ ಕುಳಿತು ಆ ಪ್ರತಿಜ್ಞೆಗೆ ಅಂಗೀಕಾರ ಒದಗಿಸಿದ್ದರು ಎಂಬುದನ್ನು ಇಲ್ಲಿ ಸ್ಮರಿಸಲೇಬೇಕು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಈ ರೀತಿಯ ಘಟನೆಗಳ ಹೊಣೆಯನ್ನ ಹೊತ್ತುಕೊಳ್ಳುವವರು ಯಾರು? ಸರ್ಕಾರದ ವೈಫಲ್ಯದ ಫಲವಾಗಿ ಇಂದು ಅಮಾಯಕ ಜನರ ಜೀವ ಹೋಗುತ್ತಿದೆ. ಅವರ ಕುಟುಂಬಗಳು ದಿಕ್ಕಿಲ್ಲದೇ, ಬೀದಿಪಾಲಾಗುತ್ತಿವೆ. ತಮ್ಮವರನ್ನ ಕಳೆದುಕೊಂಡ ಕುಟುಂಬಗಳು ಜೀವನಪೂರ್ತಿ ಕಣ್ಣೀರಲ್ಲೇ ಕೈ ತೊಳಿಯುವಂತಹ ಸ್ಥಿತಿ ನಿರ್ಮಾಣವಾಗುತ್ತಿದೆ. ಹಾಗಾಗಿ, ಇಂತಹ ಕೋಮು ದ್ವೇಷ ಭಾಷಣ ಮಾಡುವವರನ್ನ ಪೊಲೀಸರು ಗುರುತಿಸಿ ತಕ್ಷಣ ಬಂಧಿಸಬೇಕು. ಇಂತಹ ಕೃತ್ಯ ಪುನಾರವರ್ತಿಸದಂತೆ ಕಠಿಣ ಕಾನೂನು ಕ್ರಮ ಜರುಗಿಸಬೇಕು.

ಇದನ್ನು ಓದಿದ್ದೀರಾ? ಕೊಲೆಗಡುಕರ ವಿಚಾರದಲ್ಲಿ ಧರ್ಮ, ಜಾತಿ ನೋಡುವ ಪ್ರಶ್ನೆಯೇ ಇಲ್ಲ: ಸಚಿವ ದಿನೇಶ್ ಗುಂಡೂರಾವ್

ಒಂದು ವೇಳೆ ರಾಜ್ಯ ಸರ್ಕಾರ, ಗೃಹ ಇಲಾಖೆ, ಪೊಲೀಸ್ ವ್ಯವಸ್ಥೆಯು ನಕಾರಾತ್ಮಕವಾಗಿಯೆ ಇದನ್ನು ಮುಂದುವರಿಯಲು ಬಿಟ್ಟರೆ, ಈ ಸಮಸ್ಯೆಯು ಕೇವಲ ಕರಾವಳಿಯ ಸಮಸ್ಯೆಯಾಗಿ ಮಾತ್ರ ಉಳಿಯುವುದಿಲ್ಲ. ಇಡೀ ರಾಜ್ಯದ ರಾಜಕಾರಣವನ್ನು ಬಲಿ ಪಡೆಯುವ ಕಾಡ್ಗಿಚ್ಚಾಗುತ್ತದೆ. ಹಾಗಾಗಿ, ಸರ್ಕಾರ ಕೂಡಲೇ ದ್ವೇಷ ಹರಡುವವರನ್ನು ಮಟ್ಟ ಹಾಕಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

Download Eedina App Android / iOS

X