ಕನ್ನಡ ಭಾಷೆಗೆ ಬಹಳ ದೀರ್ಘ ಇತಿಹಾಸವಿದೆ. ಆದರೆ ನಟ ಕಮಲ್ ಹಾಸನ್ ಅವರಿಗೆ ಕನ್ನಡದ ಇತಿಹಾಸ ಹೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.
ನಟ ಕಮಲ್ ಹಾಸನ್ ಅವರು ಇತ್ತೀಚೆಗೆ ಚೆನ್ನೈನಲ್ಲಿ ನಡೆದ ತಮ್ಮ ಮುಂಬರುವ ಚಿತ್ರ ‘ಥಗ್ ಲೈಫ್’ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ತಮಿಳಿನಿಂದ ಕನ್ನಡ ಹುಟ್ಟಿದೆ ಎಂದು ಹೇಳಿದ್ದು, ಇದಕ್ಕೆ ಕನ್ನಡಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ನಗರದಲ್ಲಿ ಕಮಲ್ ಹಾಸನ್ ಹೇಳಿಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, “ಕನ್ನಡ ಭಾಷೆಗೆ ಬಹಳ ದೀರ್ಘ ಇತಿಹಾಸವಿದೆ…. ಅವರಿಗೆ(ಕಮಲ್ ಹಾಸನ್) ಗೊತ್ತಿಲ್ಲ” ಎಂದು ತಿರುಗೇಟು ನೀಡಿದರು.
ಬೆಂಗಳೂರು, ಬೆಳಗಾವಿ, ಮೈಸೂರು ಹುಬ್ಬಳ್ಳಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ನಟ ಕಮಲ್ ಹಾಸನ್ ಹೇಳಿಕೆ ಖಂಡಿಸಿ ಹಲವಾರು ಕನ್ನಡ ಪರ ಸಂಘಟನೆಗಳ ಪ್ರತಿಭಟನೆ ನಡೆಸುತ್ತಿವೆ.
ನಟ-ರಾಜಕಾರಣಿ ಕಮಲ್ ಹಾಸನ್ ಅವರು ರಾಜ್ಯದ ಜನರಲ್ಲಿ ಕ್ಷಮೆಯಾಚಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಅಲ್ಲದೆ ಕ್ಷಮೆಯಾಚಿಸಲು ವಿಫಲವಾದರೆ, ಅವರ ‘ಥಗ್ ಲೈಫ್’ ಚಿತ್ರ ಪ್ರದರ್ಶನವನ್ನು ತಡೆಯುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಕನ್ನಡದ ಬಗ್ಗೆ ಕಮಲ್ ಹಾಸನ್ ನೀಡಿರುವ ಹೇಳಿಕೆಗೆ ಕಾಂಗ್ರೆಸ್, ಬಿಜೆಪಿ ಸೇರಿದಂತೆ ಕನ್ನಡಪರ ಸಂಘಟನೆಗಳು ಆಕ್ರೋಶ ಹೊರಹಾಕಿವೆ. ಜತೆಗೆ ಸಾಮಾಜಿಕ ಜಾಲತಾಣಗಳಲ್ಲೂ ತೀವ್ರ ವಿರೋಧ ವ್ಯಕ್ತವಾಗಿದೆ.
ಇದನ್ನು ಓದಿದ್ದೀರಾ? ಕನ್ನಡ ತಮಿಳಿನಿಂದ ಹುಟ್ಟಿದೆ: ನಟ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ
ಈಚೆಗೆ ಚೆನ್ನೈನಲ್ಲಿ ನಡೆದ ‘ಥಗ್ ಲೈಫ್’ ಚಿತ್ರದ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮದಲ್ಲಿ ಕಮಲ್ ಹಾಸನ್ ಅವರು ಮಾತನಾಡಿದ್ದರು. ಇದೇ ವೇಳೆ ಕನ್ನಡ ತಮಿಳಿನಿಂದ ಹುಟ್ಟಿರುವುದು ಎಂದು ಹೇಳಿದ್ದರು.
ಚಿತ್ರರಂಗಕ್ಕೆ ರಾಜ್‌ಕುಮಾರ್ ಕುಟುಂಬ, ಶಿವರಾಜ್ ಕುಮಾರ್ ಕೊಡುಗೆಗಳನ್ನು ಶ್ಲಾಘಿಸಿದ್ದ ಕಮಲ್ ಹಾಸನ್, ರಾಜ್‌ಕುಮಾರ್ ಕುಟುಂಬದ ಜತೆಗಿನ ಒಡನಾಟವನ್ನು ನೆನಪಿಸಿಕೊಂಡಿದ್ದರು. ನಟ ಶಿವರಾಜ್ ಕುಮಾರ್ ಕೂಡ ಆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಅವರ ಎದುರೇ ಕನ್ನಡವನ್ನು ತಮಿಳಿನೊಂದಿಗೆ ಹೋಲಿಸಿರುವುದು ವಿವಾದಕ್ಕೆ ಗುರಿಯಾಗಿದೆ.
ಮಣಿರತ್ನಂ ನಿರ್ದೇಶನದಲ್ಲಿ ಕಮಲ್ ಹಾಸನ್ ನಟನೆಯ ‘ಥಗ್ ಲೈಫ್’ ಸಿನಿಮಾ ಜೂನ್ 5ರಂದು ತೆರೆ ಕಾಣುತ್ತಿದೆ. ಅದರ ಪ್ರಚಾರ ಕಾರ್ಯಕ್ಕಾಗಿ ಕಮಲ್ ಹಾಸನ್ ಮತ್ತು ಚಿತ್ರತಂಡ ಮಂಗಳವಾರ ಬೆಂಗಳೂರಿಗೆ ಬಂದಿತ್ತು, ಇದರ ಬೆನ್ನಲ್ಲೇ ಅವರು ಶನಿವಾರ ಮಾತನಾಡಿದ ವಿಡಿಯೊ ಹರಿದಾಡಿದ್ದು, ವಿವಾದ ಸೃಷ್ಟಿಯಾಗಿದೆ.
Bengaluru | On actor Kamal Haasan's reported statement, 'Kannada is born out of Tamil', Karnataka CM Siddaramaiah says "Kannada has a long-standing history. Poor Kamal Haasan, he is unaware of it." pic.twitter.com/POI4YtKOTk
— ANI (@ANI) May 28, 2025