ರಾಯಚೂರು | ಎಚ್‌ಎಎಲ್‌ ರಾಜ್ಯದ ಕೈಗಾರಿಕಾ ಪರಂಪರೆಯ ಸಂಕೇತ: ಜಿ ಕುಮಾರ್‌ ನಾಯಕ್‌

Date:

Advertisements

ಭಾರತಕ್ಕೆ ಸ್ವಾತಂತ್ರ್ಯ ಸಿಗುವುದಕ್ಕಿಂತ ಬಹಳ ಮೊದಲೇ ಅಂದರೆ, 1940ರ ಡಿಸೆಂಬರ್‌ನಲ್ಲಿ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್(ಎಚ್‌ಎಎಲ್) ಬೆಂಗಳೂರಿನಲ್ಲಿ ಸ್ಥಾಪನೆಯಾಗಿತ್ತು. ಕಾಲಾ‌ನಂತರದಲ್ಲಿ ಪಕ್ಷ ಭೇದ ಬದಿಗೊತ್ತಿ ಕೇಂದ್ರ‌ ಹಾಗೂ ರಾಜ್ಯ ಸರ್ಕಾರಗಳು ಸಂಸ್ಥೆಯ ವ್ಯವಸ್ಥಿತ ಬೆಳವಣಿಗೆಗೆ ತಮ್ಮ ಕೊಡುಗೆಗಳನ್ನು ನೀಡಿವೆ ಎಂದು ಕಾಂಗ್ರೆಸ್ ಸಂಸದ ಜಿ ಕುಮಾರ್‌ ನಾಯಕ್‌ ತಿಳಿಸಿದ್ದಾರೆ.

ಈ ಕುರಿತು ತಮ್ಮ ‘X’ ಖಾತೆಯಲ್ಲಿ ಬರೆದುಕೊಂಡಿರುವ ಅವರು, “ಇಂದು, ಎಚ್‌ಎಎಲ್‌ನ ಮುಖ್ಯ ಕಚೇರಿ ಬೆಂಗಳೂರಿನಲ್ಲಿದೆ ಮತ್ತು ಇದು 2,100 ಎಕರೆಗಿಂತಲೂ ಹೆಚ್ಚು ಪ್ರದೇಶ ವ್ಯಾಪ್ತಿಯನ್ನು ಹೊಂದಿದೆ. ಕರ್ನಾಟಕವು ಭಾರತದ ಏರೋಸ್ಪೇಸ್ ಮತ್ತು ರಕ್ಷಣಾ ಕ್ಷೇತ್ರದಲ್ಲಿ ವಿಶ್ವದ ಗಮನ ಸೆಳೆದಿದೆ. ದೇಶದ ರಕ್ಷಣಾ ಉತ್ಪಾದನೆಯ ಶೇ.65ರಷ್ಟು ಕೊಡುಗೆ ನೀಡುವ ಜತೆಗೆ ವಿಶ್ವದ ಏರೋಸ್ಪೇಸ್ ಕ್ಷೇತ್ರದಲ್ಲಿ 3ನೇ ಸ್ಥಾನದಲ್ಲಿದೆ” ಎಂದರು.

“ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು, ಕರ್ನಾಟಕದಿಂದ ಎಚ್‌ಎಎಲ್‌ನ ಒಂದು ಘಟಕವನ್ನು ಆಂಧ್ರಪ್ರದೇಶಕ್ಕೆ ಸ್ಥಳಾಂತರಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. ಇದು ನಿಜವಾದರೆ, ತೀವ್ರ ಆತಂಕಕಾರಿಯಾಗಿದೆ” ಎಂದು ಕಳವಳ ವ್ಯಕ್ತಪಡಿಸಿದರು.

Advertisements

“ಎಚ್‌ಎಎಲ್ ಕೇವಲ ಒಂದು ಸಂಸ್ಥೆಯಲ್ಲ. ಇದು ಕರ್ನಾಟಕದ ಕೈಗಾರಿಕಾ ಪರಂಪರೆಯ ಸಂಕೇತ ಮತ್ತು ರಾಷ್ಟ್ರೀಯ ರಕ್ಷಣಾ ಕಾರ್ಯತಂತ್ರದ ಆಸ್ತಿಯಾಗಿದೆ. ಇದನ್ನು ಸ್ಥಳಾಂತರಿಸುವ ಪ್ರಯತ್ನವನ್ನು ಕನ್ನಡಿಗರು ಒಗ್ಗಟ್ಟಿನಿಂದ ವಿರೋಧಿಸುತ್ತಾರೆ. ನಮ್ಮ ರಾಜ್ಯವನ್ನು ದುರ್ಬಲಗೊಳಿಸುವ ಮತ್ತು ಭಾರತದ ಏರೋಸ್ಪೇಸ್ ಮತ್ತು ರಕ್ಷಣಾ ಸಾಮರ್ಥ್ಯಗಳನ್ನು ಕುಂಠಿತಗೊಳಿಸುವ ಯಾವುದೇ ಏಕಪಕ್ಷೀಯ ಕ್ರಮವನ್ನು ನಾವು ಸಹಿಸುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಏನಿದು ಘಟನೆ?

ಆಂಧ್ರಪ್ರದೇಶದ ಮುಖ್ಯಮಂತ್ರಿ ಮತ್ತು NDA ಮಹತ್ವದ ಮಿತ್ರಪಕ್ಷವಾಗಿರುವ ಎನ್‌ ಚಂದ್ರಬಾಬು ನಾಯ್ಡು, ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್(HAL)ನ ಅಡ್ವಾನ್ಸ್ಡ್ ಮೀಡಿಯಂ ಕಾಂಬ್ಯಾಟ್ ಏರ್‌ಕ್ರಾಫ್ಟ್(AMCA) ಮತ್ತು ಲೈಟ್ ಕಾಂಬ್ಯಾಟ್ ಏರ್‌ಕ್ರಾಫ್ಟ್(LCA)ಗಳ ಉತ್ಪಾದನಾ ಸೌಲಭ್ಯಗಳನ್ನು ಕರ್ನಾಟಕದಿಂದ ಆಂಧ್ರಪ್ರದೇಶಕ್ಕೆ ಸ್ಥಳಾಂತರಿಸಲು ಪ್ರಸ್ತಾಪಿಸಿದ್ದಾರೆ. HALನ AMCA ಉತ್ಪಾದನಾ ಸೌಲಭ್ಯವನ್ನು ಸ್ಥಾಪಿಸಲು ಬೆಂಗಳೂರು ವಿಮಾನ ನಿಲ್ದಾಣದಿಂದ ಒಂದು ಗಂಟೆ ದೂರದಲ್ಲಿರುವ ಲೇಪಾಕ್ಷಿ-ಮಡಕಶಿರ ಕೇಂದ್ರದಲ್ಲಿ 10,000 ಎಕರೆಗಳನ್ನು ಅವರು ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X