ಮಳೆ ನೀರು ಸರಾಗವಾಗಿ ಹರಿಯಲು ಅಡ್ಡವಿರುವ ಕಟ್ಟಡ ತೆರವಿಗೆ ಸೂಚನೆ: ಡಿಸಿಎಂ ಡಿ ಕೆ ಶಿವಕುಮಾರ್

Date:

Advertisements

ಮಳೆ ನೀರು ಸರಾಗವಾಗಿ ಹರಿಯಲು ಅಡ್ಡವಿರುವ ಕಟ್ಟಡಗಳನ್ನು ವಿಪತ್ತು ನಿರ್ವಹಣೆ ಕಾಯ್ದೆ ಅಡಿ ತೆರವುಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಯಲಹಂಕದ ಮಾನ್ಯತಾ ಟೆಕ್ ಪಾರ್ಕ್ ಬಳಿ ಮಳೆ ಪ್ರವಾಹಕ್ಕೆ ಕಾರಣವಾದ ರಾಜಕಾಲುವೆ ಹಾಗೂ ನಾಲೆಗಳನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಗುರುವಾರ ಪರಿಶೀಲಿಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

“ನಾನು ಹಾಗೂ ಮುಖ್ಯಮಂತ್ರಿಗಳು ಈಗಾಗಲೇ ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದೇವೆ. ಇದು ಬಹಳ ಮುಖ್ಯವಾದ ಜಂಕ್ಷನ್. ಇಲ್ಲಿಂದ ಸಮಸ್ಯೆ ಆರಂಭವಾಗಿ ನಂತರ ಉಳಿದ ಪ್ರದೇಶಗಳಲ್ಲಿ ಸಮಸ್ಯೆಯಾಗುತ್ತಿದೆ. ಕೆಲವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದು ಅಡ್ಡಿಪಡಿಸುತ್ತಿದ್ದಾರೆ. ನಮ್ಮ ಅಧಿಕಾರಿಗಳಿಗೂ ಸಹಕಾರ ನೀಡುತ್ತಿರಲಿಲ್ಲ. ಹೀಗಾಗಿ ಸಮಸ್ಯೆಗೆ ಕಾರಣವಾಗಿರುವ ಪ್ರದೇಶಗಳಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಕಟ್ಟಡ ತೆರವುಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ” ಎಂದರು.

Advertisements

ಶಾಶ್ವತ ಪರಿಹಾರ ನೀಡಲಾಗುವುದು

“ನಮಗೆ ಯಾರ ಆಸ್ತಿಯನ್ನು ನಷ್ಟ ಮಾಡಲು ಇಷ್ಟವಿಲ್ಲ. ಯಾರಿಗೂ ಅನ್ಯಾಯ ಮಾಡಲು ಬಯಸುವುದಿಲ್ಲ. ನೀರು ಸರಾಗವಾಗಿ ಹರಿಯಬೇಕು. ಹೀಗಾಗಿ ನಾನೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಕಾಮಗಾರಿ ಮುಂದುವರಿಸಲು ನನ್ನ ಮುಂದೆ ಎಲ್ಲರೂ ಒಪ್ಪಿಕೊಂಡಿದ್ದಾರೆ. ಇದಕ್ಕೆ ಶಾಶ್ವತ ಪರಿಹಾರ ಕಂಡು ಹಿಡಿಯುವುದು ಮುಖ್ಯ” ಎಂದು ಹೇಳಿದರು.

ಆಯುಕ್ತರಿಗೆ ಅಧಿಕಾರ

“ಮಳೆ ನೀರು ಸರಾಗವಾಗಿ ಹರಿಯುವುದು ಇಲ್ಲಿ ಮುಖ್ಯವೇ ಹೊರತು ಇನ್ಯಾರೂ ಅಲ್ಲ. ನಾವು ಯಾವುದೇ ಕಟ್ಟಡಗಳಿಗೆ ಅಡಚಣೆ ಮಾಡಲು ಬಯಸುವುದಿಲ್ಲ. ನಾವು ಬೆಂಗಳೂರಿನ ಘನತೆ ಹಾಳಾಗಲು ಬಿಡುವುದಿಲ್ಲ. ಹೀಗಾಗಿ ಈ ಭಾಗದ ಭೂಮಾಲೀಕರಿಗೆ ಸಹಕಾರ ನೀಡುವಂತೆ ಮನವಿ ಮಾಡಿದ್ದೇವೆ. ತಾಂತ್ರಿಕ ಕಾರಣಗಳಿಂದಾಗಿ ತಪ್ಪಾಗಿದ್ದರೆ ನಾವು ಅದಕ್ಕೆ ಪರಿಹಾರ ನೀಡುತ್ತೇವೆ. ನಮಗೆ ಈ ವಿಚಾರವಾಗಿ ಶಾಶ್ವತ ಪರಿಹಾರ ಬೇಕಾಗಿದೆ. ಇದಕ್ಕೆ ಎಲ್ಲರೂ ಒಪ್ಪಿಗೆ ನೀಡಿದ್ದು, ನಾವು ನಮ್ಮ ಕೆಲಸ ಮುಂದುವರಿಸುತ್ತೇವೆ. ನಮ್ಮ ಪಾಲಿಕೆ ಆಯುಕ್ತರು ಹಾಗೂ ಕಾರ್ಯದರ್ಶಿಗಳಿಗೆ ಈ ವಿಚಾರದಲ್ಲಿ ಇರುವ ಅಡಚಣೆಗಳನ್ನು ತೆರವುಗೊಳಿಸಲು ಸಂಪೂರ್ಣ ಅಧಿಕಾರ ನೀಡಲಾಗಿದೆ” ಎಂದು ತಿಳಿಸಿದರು.

ಕಸದ ಸೆಸ್ ಕಡಿಮೆ ಮಾಡಬೇಕು ಎಂಬ ಬಿಜೆಪಿ ಆಗ್ರಹದ ಬಗ್ಗೆ ಕೇಳಿದಾಗ, “ಅವರ ಕಾಲದಲ್ಲಿ ತೆಗೆದುಕೊಂಡ ತೀರ್ಮಾನವನ್ನು ನಾವು ಅವರಿಗೆ ಮನವರಿಕೆ ಮಾಡಿಕೊಡುತ್ತೇನೆ. ಅವರು ಏನು ಪ್ರಸ್ತಾವನೆ ಸಲ್ಲಿಸಿದ್ದಾರೆ ಎಂದು ಪರಿಶೀಲಿಸಿ ನಂತರ ಅವರೊಂದಿಗೆ ಮಾತನಾಡುತ್ತೇನೆ. ಅವರ ಅಭಿಪ್ರಾಯಕ್ಕೂ ಗೌರವ ನೀಡುತ್ತೇನೆ” ಎಂದರು.‌

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇಸ್ರೇಲಿ ರಾಜದೂತೆಯ ಭೇಟಿಯಾಗಿ ಸಮ್ಮಾನಿಸಿದ ಡಿಕೆಶಿ ವರ್ತನೆ ಅನುಚಿತ ಅಕ್ಷಮ್ಯ

ನೀರಾವರಿ ಇಲಾಖೆಯಲ್ಲಿ ಹೆಚ್ಚು ಇಂಜಿನಿಯರ್‌ಗಳಿಲ್ಲ

ಜಲಸಂಪನ್ಮೂಲ ಇಲಾಖೆ ಇಂಜಿನಿಯರ್ ಗಳ ವರ್ಗಾವಣೆ ಕುರಿತು ಮುಖ್ಯ ಕಾರ್ಯದರ್ಶಿಗಳಿಗೆ ಬರೆದ ಪತ್ರದ ಬಗ್ಗೆ ಕೇಳಿದಾಗ “ಜಲಸಂಪನ್ಮೂಲ ಇಲಾಖೆಯಲ್ಲಿ ಹೆಚ್ಚು ಇಂಜಿನಿಯರ್ ಗಳಿಲ್ಲ. ನಮಗೆ ತುರ್ತಾಗಿ ಇಂಜಿನಿಯರ್ ಗಳು ಬೇಕು. ಹೀಗಾಗಿ ನಮ್ಮ ಇಲಾಖೆಯಿಂದ ಯಾರನ್ನೂ ಬೇರೆಡೆಗೆ ಕಳಿಸಬೇಡಿ ಎಂದು ಪತ್ರ ಬರೆದಿದ್ದೇನೆ. ನಮ್ಮ ಇಲಾಖೆಗೆ ಬಂದು ಬಡ್ತಿ ಪಡೆದು ನಂತರ ಲೋಕೋಪಯೋಗಿ, ಜಿಲ್ಲಾ ಪಂಚಾಯಿತಿ ಸೇರಿದಂತೆ ಇತರ ಇಲಾಖೆಗಳಿಗೆ ವರ್ಗಾವಣೆ ಪಡೆಯುತ್ತಾರೆ” ಎಂದು ಸ್ಪಷ್ಟನೆ ನೀಡಿದರು.

ನಿಮ್ಮ ಅನುಮತಿ ಇಲ್ಲದೆ ಯಾರು ವರ್ಗಾವಣೆ ಮಾಡಿದ್ದಾರೆ ಎಂದು ಕೇಳಿದಾಗ, “ಉನ್ನತ ಮಟ್ಟದಲ್ಲಿ ಈ ರೀತಿ ವರ್ಗಾವಣೆ ಮಾಡಲು ಅವಕಾಶ ಇದೆ. ಅನೇಕ ಶಾಸಕರು ತಮಗೆ ಬೇಕಾದವರನ್ನು ಬೇರೆ ಇಲಾಖೆಗೆ ಕಳಿಸಿಕೊಡಿ ಎಂದು ಒತ್ತಡ ಹಾಕುತ್ತಾರೆ. ನೀರಾವರಿ ಇಲಾಖೆಯಲ್ಲಿ ಕೆಲಸ ಮಾಡಲು ಇಂಜಿನಿಯರ್ ಗಳು ಮುಂದೆ ಬರುತ್ತಿಲ್ಲ. ಈ ದೃಷ್ಟಿಯಿಂದ ನನ್ನ ಗಮನಕ್ಕೆ ತರದೆ ಯಾರನ್ನೂ ವರ್ಗಾವಣೆ ಮಾಡಬೇಡಿ ಎಂದು ಹೇಳಿದ್ದೇನೆ” ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

ಬೆಂಗಳೂರು ಮೆಟ್ರೋ: ನಾಳೆ ಹಳದಿ ಮಾರ್ಗದಲ್ಲಿ ಬೆಳಿಗ್ಗೆ 5ಕ್ಕೆ ಸಂಚಾರ ಆರಂಭ

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್‌ ಲಿಮಿಟೆಡ್‌ (ಬಿಎಂಆರ್‌ಸಿಎಲ್‌) ಹಳದಿ ಮಾರ್ಗದಲ್ಲಿ ಸೋಮವಾರ...

Download Eedina App Android / iOS

X