ಕೊರೊನಾ ಮತ್ತೆ ಆತಂಕ ಸೃಷ್ಟಿಸುತ್ತಿದ್ದು, ಬೆಳಗಾವಿಯಲ್ಲಿ ಕೊರೊನಾಗೆ ಮೊದಲ ಬಲಿಯಾಗಿದೆ. ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 70 ವರ್ಷದ ರೋಗಿಗೆ ನಿನ್ನೆಯಷ್ಟೇ ಕೋವಿಡ್ ಪಾಸಿಟಿವ್ ಎಂದು ಟೆಸ್ಟ್ ನಲ್ಲಿ ಪತ್ತೆಯಾಗಿತ್ತು. ತಡರಾತ್ರಿ ಚಿಕಿತ್ಸೆ ಫಲಿಸದೆ ರೋಗಿ ಸಾವನ್ನಪ್ಪಿದ್ದಾನೆ.
ಬೆಳಗಾವಿ ತಾಲೂಕಿನ ಬೆನಕನಹಳ್ಳಿ ಗ್ರಾಮದ ನಿವಾಸಿಯಾದ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಚಿಕಿತ್ಸೆಗೆ ಎಂದು ಬೀಮ್ಸ್ ಆಸ್ಪತ್ರೆಯಲ್ಲಿ ನಿನ್ನೆಯಷ್ಟೇ ದಾಖಲಾಗಿದ್ದರು. ವೃದ್ಧನಿಗೆ ಕೋವಿಡ್ ಪಾಸಿಟಿವ್ ಇದೆ ಎಂದು ಗೊತ್ತಾದ ತಕ್ಷಣವೇ ಕೋವಿಡ್ ವಾರ್ಡ್ ಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದ ಕಾರಣ ರೋಗಿ ಸಾವನ್ನಪ್ಪಿದ್ದಾನೆ.