‘ರಾಮಾ ರಾಮಾ ರೇ’ ಖ್ಯಾತಿಯ ಡಿ ಸತ್ಯಪ್ರಕಾಶ್ ನಿರ್ಮಿಸಿ, ನಿರ್ದೇಶಿಸಿ, ನಟಿಸಿರುವ ಬಹು ನಿರೀಕ್ಷಿತ ‘X&Y’ ಸಿನಿಮಾಗೆ ಪ್ರಾದೇಶಿಕ ಸೆನ್ಸಾರ್ ಮಂಡಳಿ U/A ಪ್ರಮಾಣಪತ್ರ ನೀಡಿದೆ. ಜೂನ್ ತಿಂಗಳಲ್ಲೇ ಸಿನಿಮಾವನ್ನು ಪ್ರೇಕ್ಷಕರ ಮುಂದೆ ತರಲು ಚಿತ್ರತಂಡ ಸಿದ್ದತೆ ನಡೆಸುತ್ತಿದೆ.
ಈಗಾಗಲೇ, ಪೋಸ್ಟರ್ ಸೇರಿದಂತೆ ಕೆಲವು ಕಂಟೆಂಟ್ಗಳ ಮೂಲಕ ಸಿನಿಮಾ ತೀವ್ರ ಕುತೂಹಲ ಮೂಡಿಸಿದೆ. ಚಿತ್ರಕ್ಕೆ ನಿರ್ದೇಶಕ ಸತ್ಯಪ್ರಕಾಶ್ ಅವರೇ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಈ ಸಿನಿಮಾ ಸತ್ಯಪ್ರಕಾಶ್ ನಿರ್ದೇಶನದ ನಾಲ್ಕನೇ ಚಿತ್ರವಾಗಿದೆ.
ಸತ್ಯಪ್ರಕಾಶ್ ಅವರು ಅತ್ಯುತ್ತಮ ಕಥೆಯುಳ್ಳ ‘ರಾಮಾ ರಾಮಾ ರೇ’, ಒಂದಲ್ಲಾ ಎರಡಲ್ಲಾ’ ಹಾಗೂ ‘ಮ್ಯಾನ್ ಆಫ್ ದಿ ಮ್ಯಾಚ್’ ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. ಈ ಮೂರೂ ಚಿತ್ರಗಳನ್ನು ವಿಭಿನ್ನ ಕಥಾಹಂದರವನ್ನು ಹೊಂದಿದ್ದು, ಪ್ರೇಕ್ಷಕರ ಮನ ಗೆದ್ದಿವೆ. ಇದೀಗ, ‘X&Y’ ಮೇಲೆ ನಿರೀಕ್ಷೆ ಹೆಚ್ಚಾಗಿದೆ.
ಸಿನಿಮಾವನ್ನು ಸತ್ಯ ಪಿಕ್ಚರ್ಸ್ ನಿರ್ಮಾಣ ಮಾಡಿದೆ. ಚಿತ್ರದಲ್ಲಿ ಲವಿತ್ ಛಾಯಾಗ್ರಹಣ, ಬಿ.ಎಸ್.ಕೆಂಪರಾಜು, ಕೌಶಿಕ್ ಹರ್ಷ ಸಂಗೀತ ನಿರ್ದೇಶನ ಹಾಗೂ ವರದರಾಜ್ ಕಾಮತ್ ಅವರ ಕಲಾ ನಿರ್ದೇಶನವಿದೆ. ಬೃಂದಾ ಆಚಾರ್ಯ, ಡಿ.ಸತ್ಯಪ್ರಕಾಶ್, ಅಯಾನ, ಅಥರ್ವ ಪ್ರಕಾಶ್, ದೊಡ್ಡಣ್ಣ, ವೀಣಾ ಸುಂದರ್, ಸುಂದರ್ ವೀಣಾ, ಹರಿಣಿ, ಧರ್ಮಣ್ಣ ಕಡೂರ್, ತೇನಪ್ಪನ್ ಮುಂತಾದ ತಾರಾ ಬಳಗ ಅಭಿನಯಿಸಿದೆ.