ದ.ಕ ಜಿಲ್ಲೆಯ ಇತ್ತೀಚಿನ ಬೆಳವಣಿಗೆ ಮತ್ತು ರಾಜ್ಯ ಸರ್ಕಾರದ ಗೃಹ ಇಲಾಖೆಯ ವೈಫಲ್ಯಕ್ಕೆ ಮನನೊಂದು ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರು ಕರೆದಿದ್ದ ಸಭೆಯಲ್ಲಿ ಕೋಲಾಹಲ ಉಂಟಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕವು ಮೇ 29ರ ಮಧ್ಯಾಹ್ನ ನಗರದ ಬೋಳಾರದಲ್ಲಿರುವ ಶಾದಿಮಹಲ್‌ನ ಸಭಾಂಗಣದಲ್ಲಿ ಸಭೆ ಕರೆದು, ಸಾಮೂಹಿಕ ರಾಜೀನಾಮೆ ನೀಡುವ ನಿರ್ಧಾರವನ್ನು ಪ್ರಕಟಿಸುವುದಾಗಿ ತಿಳಿಸಿತ್ತು. ಆದರೆ ಈ ಸಭೆಯಲ್ಲಿ ರಾಜೀನಾಮೆ ನಿರ್ಧಾರದಿಂದ ಒಂದು ವಾರ ಹಿಂದೆ ಸರಿಯುವ ಸೂಚನೆ ಸಿಗುತ್ತಿದ್ದಂತೆಯೇ ನೆರೆದಿದ್ದ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.
“ನಾವು ಯಾವ ತೀರ್ಮಾನ ಮಾಡಿಕೊಂಡು ಬಂದಿದ್ದೇವೆಯೋ ಅದೇ ತೀರ್ಮಾನಕ್ಕೆ ಬದ್ಧ” ಎಂದು ಕಾಂಗ್ರೆಸ್ ಕಾರ್ಯಕರ್ತರು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಮಂಗಳೂರು | ಸಾಮೂಹಿಕ ರಾಜೀನಾಮೆಯಿಂದ ಹಿಂದೆ ಸರಿಯುವಂತೆ ದ.ಕ. ಅಲ್ಪಸಂಖ್ಯಾತ ಮುಖಂಡರಿಗೆ ಸಿಎಂ ಕರೆ
ಸಭೆಯಲ್ಲಿ ದ.ಕ ಕನ್ನಡ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕೆ.ಕೆ ಶಾಹುಲ್ ಹಮೀದ್ ವೇದಿಕೆಯಲ್ಲಿ ಮಾತನಾಡುತ್ತಿರುವಾಗಲೇ ಈ ಬೆಳವಣಿಗೆ ನಡೆದಿದೆ.