ಬಾಗಲಕೋಟೆ | ವಕ್ಫ್‌ ತಿದ್ದುಪಡಿ ವಿರೋಧಿಸಿ ಬೃಹತ್ ಪ್ರತಿಭಟನೆ

Date:

Advertisements

ವೈವಿಧ್ಯತೆಯಲ್ಲಿ ಏಕತೆಯನ್ನು ಪ್ರತಿಪಾದಿಸಿಕೊಂಡಿರುವ ವಿಶ್ವದ ಅತಿ ದೊಡ್ಡ ಪ್ರಜಾ ಪಭುತ್ವ ರಾಷ್ಟ್ರ ಭಾರತ. ಇಂತಹ ದೇಶದಲ್ಲಿ 2014 ರಿಂದ ಕೇಂದ್ರದಲ್ಲಿ ಅಸ್ತಿತ್ವಕ್ಕೆ ಬಂದಿರುವ ಭಾರತೀಯ ಜನತಾ ಪಕ್ಷ ಸರ್ಕಾರ ಒಂದು ನಿರ್ದಿಷ್ಟವಾದ ಸಮುದಾಯದ ಆಚರಣೆ, ಧಾರ್ಮಿಕ ವ್ಯವಸ್ಥೆಯ ಮೇಲೆ ಸಂವಿಧಾನದ ಆಶಯಕ್ಕೆ ವಿರೋಧವಾಗಿ ಧರ್ಮದ ಜನರನ್ನು ಹತ್ತಿಕ್ಕಲು ಹಾಗೂ ಅವರ ಹಕ್ಕುಗಳನ್ನು ಕಸಿದುಕೊಳ್ಳಲು ನಿರಂತರವಾಗಿ ಪಯತ್ನ ಮಾಡುತ್ತಲೆ ಇದೆ. ಈ ಕಾರ್ಯಸೂಚಿಯ ಮುಂದುವರೆದ ಭಾಗವೇ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತಂದಿರುವುದು ಎಂದು ಮೌಲಾನಾ ದಾವೂದ್ ಖಾಜಿ ಹೇಳಿದರು.

ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್, ಕರ್ನಾಟಕ ಮುಸ್ಲಿಂ ಯುನಿಟಿ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕು ಸಮಿತಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಪ್ರತಿಭಟನೆ ಉದ್ದೇಶಿಸಿ ದಲಿತ ಮುಖಂಡ ಮಹದೇವ ಹಾದಿಮನಿ, ನ್ಯಾಯವಾದಿ ಸಂತೋಷ ಬಗಲಿ ಕೂಡ ಮಾತನಾಡಿದರು.

ಪ್ರತಿಭಟನಾ ರ್ಯಾಲಿಯು ಅಂಜುಮನ್ ಶಾದಿ ಮಹಲದಿಂದಾ ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತ, ಟಿಪ್ಪು ಸುಲ್ತಾನ್ ವೃತ್ತ ಹಾಗೂ ಗಾಂಧಿ ವೃತ್ತದ ಮಾರ್ಗದ ಮೂಲಕ ಘೋಷಣೆಗಳನ್ನು ಕೂಗುತ್ತ ತಹಶೀಲ್ದಾರ್ ಕಚೇರಿವರೆಗೆ ನಡೆಯಿತು.

Advertisements
WhatsApp Image 2025 05 29 at 12.04.53 PM

“ಸಂವಿಧಾನವನ್ನು ಅನುಸರಣೆ ಮಾಡಿಕೊಂಡು ಜಾತ್ಯತೀತ ಮನೋಭಾವನೆಯಲ್ಲಿ ಗಟ್ಟಿಯಾದ ಸಾಮಾಜಿಕ ತಳಹದಿಯನ್ನು ಹೊಂದಿರುವ ಏಕೈಕ ರಾಷ್ಟ್ರ ಭಾರತವಾಗಿದೆ” ಎಂದು ದಲಿತ ಮುಖಂಡ ಮಹಾದೇವ ಹಾದಿಮನಿ ಹೇಳಿದರು.

“ನಮ್ಮ ದೇಶದ ವಕ್ಫ್ ಕಾಯ್ದೆಗೆ ಶತಮಾನದ ಇತಿಹಾಸ ಇದೆ. ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಕಾಯ್ದೆಯ ತಿದ್ದುಪಡಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಇಡೀ ವಕ್ಫ್ ಆಸ್ತಿಯನ್ನು ಸರ್ಕಾರದ ಹಿಡಿತಕ್ಕೆ ತೆಗೆದುಕೊಳ್ಳುವ ವ್ಯವಸ್ಥಿತವಾದ ಪಿತೂರಿ ನಡೆಸಿದೆ.‌ ಕಳೆದ ಹತ್ತು ವರ್ಷಗಳಲ್ಲಿ ದೇಶದ ಮುಸ್ಲಿಮರ ಸಾಮಾಜಿಕ ಅಭಿವೃದ್ಧಿಗೆ ಚಿಂತಿಸದ ಕೇಂದ್ರ ಸರ್ಕಾರ ಪೌರತ್ವ ಕಾಯಿದೆ, ವಿಶೇಷ ಸ್ಥಾನಮಾನ ರದ್ದತಿ, ಹಿಜಾಬ್, ಹಲಾಲ್ ಹೆಸರಿನಲ್ಲಿ ಮುಸ್ಲಿಮರನ್ನು ಸಮಾಜದ ಮುಖ್ಯ ವಾಹಿನಿಯಿಂದ ದೂರ ತಳ್ಳುವ ಪ್ರಯತ್ನ ಮಾಡುತ್ತಿದೆ. ಈಗ ಸಂಸತ್ತಿನಲ್ಲಿ ಅಂಗೀಕಾರವಾಗಿರುವ ವಕ್ಫ್ ತಿದ್ದುಪಡಿ ಮಸೂದೆ ಸಂವಿಧಾನದ 15,‌ 25, 26ನೇ ವಿಧಿ ಮತ್ತು ಧಾರ್ಮಿಕ ದತ್ತಿ ಕಾಯ್ದೆಗೆ ವಿರುದ್ಧವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಬಾಗಲಕೋಟೆ | ರೈತರಿಗೆ ಬಿತ್ತನೆಬೀಜ, ಗೊಬ್ಬರ, ಕೀಟನಾಶಕಗಳನ್ನು ವಿತರಿಸಿ: ಮಹಾಂತೇಶ ಹಟ್ಟಿ

ಪ್ರತಿಭಟನೆಯಲ್ಲಿ ಅಬುಷಮಾ ಖಾಜಿ, ಕಾಸಿಮಲಿ ಗೋಟೆ, ಚಿನ್ನಪ್ಪ ಬಂಡಿವಡ್ಡರ,ದಾವೂದ್ ಖಾಜಿ, ಹಾಸಿಂಪಿರ್ ಮುಜಾವರ್, ಸಂತೋಷ್ ಬಗಲಿ, ಮೌಲಾನಾ ಅಬ್ದುಲವಹಾಬ್ ಖಾಜಿ,ಇರ್ಫಾನ್ ಅಥಣಿ, ಅಜೀಜ್ ಬಾಯಿಸರ್ಕಾರ್, ಸಾದಿಕ್ ಬಾಗವಾನ್ ಹಾಗೂ ಅಪಾರ ಸಂಖ್ಯೆಯಲ್ಲಿ ಅಲ್ಪಸಂಖ್ಯಾತರು, ದಲಿತರು ಹಾಗೂ ಹಿಂದುಳಿದವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X