ಗೌರಿ ಲಂಕೇಶ್ ಪ್ರಕರಣದ ಸಾಕ್ಷಿದಾರರಿಗೆ ಬೆದರಿಕೆ ಕರೆ; ದೂರು ದಾಖಲು

Date:

Advertisements
ಕೋರ್ಟಿಗೆ ವಿಚಾರಣೆಗೆ ಬಂದ ಸಾಕ್ಷಿಯೊಬ್ಬರು ತನಗೆ ಪ್ರಾಸಿಕ್ಯೂಷನ್‌ಗೆ ವಿರುದ್ಧವಾಗಿ ಹೇಳಿಕೆ ನೀಡುವಂತೆ ಬೆದರಿಕೆ ಕರೆ ಬಂದಿತೆಂದು ದೂರು ಕೊಟ್ಟಿದ್ದಾರೆ

ದಿಟ್ಟ ಪತ್ರಕರ್ತೆ, ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಸಾಕ್ಷಿದಾರರಿಗೆ ಬೆದರಿಕೆ ಹಾಕಿರುವುದು ಬೆಳಕಿಗೆ ಬಂದಿದೆ. ಪ್ರಕರಣದ ಸಾಕ್ಷಿದಾರರೊಬ್ಬರಿಗೆ ಬುಧವಾರದಂದು ಕರೆ ಬಂದಿದ್ದು, ಆರೋಪಿಗಳ ವಿರುದ್ಧ ಹೇಳಿಕೆ ನೀಡದಂತೆ ಭಯಪಡಿಸಲು ಯತ್ನಿಸಲಾಗಿದೆ.

ಕೋರ್ಟಿಗೆ ವಿಚಾರಣೆಗೆ ಬಂದ ಸಾಕ್ಷಿಯೊಬ್ಬರು ತನಗೆ ಪ್ರಾಸಿಕ್ಯೂಷನ್‌ಗೆ ವಿರುದ್ಧವಾಗಿ ಹೇಳಿಕೆ ನೀಡುವಂತೆ ಬೆದರಿಕೆ ಕರೆ ಬಂದಿತೆಂದು ದೂರು ಕೊಟ್ಟಿದ್ದಾರೆ.

ಗೌರಿ ಲಂಕೇಶ್ ಪ್ರಕರಣವನ್ನು ನಿಭಾಯಿಸುತ್ತಿರುವ ಹಿರಿಯ ವಕೀಲ ಎಸ್.ಬಾಲನ್ ಅವರು ಈ ವಿಚಾರವನ್ನು ಕೋರ್ಟಿನ ಗಮನಕ್ಕೆ ತಂದಿರುವುದಾಗಿ ತಿಳಿದು ಬಂದಿದೆ.

Advertisements

ಸಾಕ್ಷಿದಾರರು ಕೋರ್ಟ್‌ಗೆ ಕೊಟ್ಟ ದೂರಿನಲ್ಲಿ, “ನಿನ್ನೆ ಬಸ್ಸಿನಲ್ಲಿ ಬರುವಾಗ ಒಂದು ಫೋನ್‌ ಬಂದಿದೆ. ನೀನು ಕೋರ್ಟ್‌ಗೆ ಹೋದಾಗ ನಿನ್ನ ಮುಂದೆ ನಾಲ್ಕು ಮಂದಿ ಇರುತ್ತಾರೆ. ಅವರಿಗೆ ನನಗೆ ಗುರುತು ಇಲ್ಲ ಎಂದು ಹೇಳುವಂತೆ ಫೋನ್‌ ಬಂದಿದೆ” ಎಂದು ಉಲ್ಲೇಖಿಸಿದ್ದಾರೆ.

ಮತೀಯವಾದಿಗಳ ದ್ವೇಷ ಅಭಿಯಾನಕ್ಕೆ ಗುರಿಯಾಗಿದ್ದ ಗೌರಿ ಲಂಕೇಶ್ 2017ರ ಸೆ.5ರಂದು ಬೆಂಗಳೂರಿನ ಆರ್.ಆರ್.ನಗರದಲ್ಲಿರುವ ತಮ್ಮ ನಿವಾಸದಲ್ಲಿ ಕೊಲೆಯಾದರು.

ಮೋಟಾರ್ ಬೈಕ್‍ನಲ್ಲಿ ಬಂದ ದುಷ್ಕರ್ಮಿಗಳು ಗೌರಿ ಲಂಕೇಶ್ ಅವರಿಗೆ ಗುಂಡಿಕ್ಕಿ ಹತ್ಯೆ ಮಾಡಿದ್ದರು. ಈ ಹತ್ಯೆ ಪ್ರಕರಣದಲ್ಲಿ ಇಲ್ಲಿಯವರೆಗೂ ಸುಮಾರು 17 ಆರೋಪಿಗಳನ್ನು ಗುರುತಿಸಲಾಗಿದೆ. ಪ್ರಕರಣ ಸಂಬಂಧ 2024ರ ಅಕ್ಟೋಬರ್ ತಿಂಗಳಲ್ಲಿ ಅಮೂಲ್ ಕಾಳೆ, ರಾಜೇಶ್ ಡಿ ಬಂಗೇರಾ, ವಾಸುದೇವ್ ಸೂರ್ಯವಂಶಿ, ರುಷಿಕೇಶ್ ದೇವ್ಡೇಕರ್, ಪರಶುರಾಮ್ ವಾಗ್ಮೋರೆ, ಗಣೇಶ್ ಮಿಸ್ಕಿನ್, ಅಮಿತ್ ರಾಮಚಂದ್ರ ಬುಡ್ಡಿ ಮತ್ತು ಮನೋಹರ್ ದುಂಡೀಪ ಯಡವೆಗೆ ಬೆಂಗಳೂರಿನ ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.

ಇದನ್ನೂ ಓದಿರಿ: Ground Report | ಗೂಂಡಾಗಳಿಂದ ದಲಿತರ ಮನೆ, ದೇವಾಲಯ ಧ್ವಂಸವಾದರೂ ಬೇಗೂರು ಪೊಲೀಸರು ನಿರ್ಲಕ್ಷ್ಯ ತಾಳಿದ್ದೇಕೆ?

ಅಲ್ಲದೆ, ಆರೋಪಿಗಳಾದ ಭರತ್ ಕುರಾನೆ, ಶ್ರೀಕಾಂತ್ ಪಂಗರ್ಕರ್, ಸುಜಿತ್ ಕುಮಾರ್ ಮತ್ತು ಸುಧನ್ವಗೆ 2024ರ ಸೆ.4ರಂದು, 11ನೇ ಆರೋಪಿ ಎನ್.ಮೋಹನ್ ನಾಯಕ್ ಅಲಿಯಾಸ್ ಸಂಪಜೆ ಎಂಬುವರಿಗೆ 2023ರ ಡಿಸೆಂಬರ್ 7ರಂದು, ಅಮಿತ್ ದಿಗ್ವೇಕರ್, ಕೆ.ಟಿ.ನವೀನ್ ಕುಮಾರ್ ಮತ್ತು ಸುರೇಶ್ ಹೆಚ್.ಎಲ್ ಅವರಿಗೆ ಜುಲೈ 16ರಂದು ಹೈಕೋರ್ಟ್ ಜಾಮೀನು ಮಂಜೂರು ಮಾಡಿ ಆದೇಶಿಸಿತ್ತು. 2025ರ ಜನವರಿ ವೇಳೆಗೆ ಈ ಎಲ್ಲ 17 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ.

ಕೊಲೆ ಆರೋಪಿಗಳು ಜೈಲಿನಿಂದ ಬಿಡುಗಡೆಯಾದ ಸಂದರ್ಭದಲ್ಲಿ ಸಂಭ್ರಮಾಚರಣೆ ಮಾಡುವ ವಿಕೃತಿಯೂ ಜರುಗಿತ್ತು. ಈಗ ಸಾಕ್ಷಿಗಳಿಗೆ ಬೆದರಿಕೆಗಳು ಬರುತ್ತಿರುವುದು ಆಘಾತಕಾರಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X