ವಿಜಯಪುರ | ಮೂರನೇ ದಿನಕ್ಕೆ ಕಾಲಿಟ್ಟ ಅನಿರ್ದಿಷ್ಟಾವಧಿ ಮುಷ್ಕರ

Date:

Advertisements

ಕರ್ನಾಟಕ ರಾಜ್ಯ ಪೌರ ನೌಕರರ ಸಂಘ ವತಿಯಿಂದ ವಿಜಯಪುರ ಜಿಲ್ಲೆಯ ತಾಳಿಕೋಟೆ ಕಾರ್ಮಿಕರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದೆ.

ಕರ್ನಾಟಕ ನಾಗರಿಕ ಸೇವಾ ನಿಯಮ ಅಧಿನಿಯಮ 1978ನ್ನು ಕರ್ನಾಟಕ ಪೌರ ಸೇವಾ ನಾಗರಿಕರಿಗೆ ಅನ್ವಯಿಸುವ ಹಾಗೆ, ಪಂಚಾಯತ್ ರಾಜ್ಯ ಇಲಾಖೆ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸಿರುವ ಮಾದರಿಯಲ್ಲಿಯೇ, ರಾಜ್ಯದ ನಗರ ಸ್ಥಳೀಯ ಸಂಸ್ಥೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ಜಿಪಿಎಫ್, ಕೆಜಿಐಡಿ ಸೇರಿದಂತೆ ಸರ್ಕಾರಿ ನೌಕರರು ಪಡೆಯುವ ಎಲ್ಲಾ ಸೌಲಭ್ಯಗಳನ್ನು ವಿಸ್ತರಿಸಬೇಕು. ಹೊರಗುತ್ತಿಗೆ ಆಧಾರದ ಮೇಲೆ ನೀರು ಸರಬರಾಜು ಸಹಾಯಕರು, ವಾಹನ ಚಾಲಕರು, ಬೀದಿ ದೀಪ ಸಹಾಯಕ ಲೋಡರ್ಸ್, ಪಾರ್ಕ್ ಗಾರ್ಡನರ್, ಕಾವಲುಗಾರ, ಸ್ಯಾನಿಟರಿ ಸೂಪರ್ವೈಸರ್ ಸೇರಿದಂತೆ ವಿವಿಧ ವೃಂದಗಳಲ್ಲಿ ಹೊರಗುತ್ತಿಗೆ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರನ್ನು ನೇರ ಪಾವತಿಗೆ ಒಳಪಡಿಸಬೇಕು. ಏಳನೇ ವೇತನ ಹಾಗೂ 2023-2024ನೇ ಸಾಲಿನಲ್ಲಿ ನೇಮಕಾತಿಯಲ್ಲಿ ಪೌರಕಾರ್ಮಿಕರು, ಲೋಡರ್ಸ್, ಕ್ಲೀನರ್ಸ್, ಲ್ಯಾಬ್ ಟೆಕ್ನಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅವಕಾಶ ಕಲ್ಪಿಸಿದ್ದು, ಈ ಹುದ್ದೆಗಳು ನಗರ ಸ್ಥಳೀಯ ಸಂಸ್ಥೆಗಳ ಕುಡಿಯುವ ನೀರಿನ ಗುಣಮಟ್ಟ ನಿರ್ವಹಣೆಗೆ ಅತ್ಯಂತ ಅವಶ್ಯಕವಾಗಿದೆ. ಆದರೆ ಈ ಹುದ್ದೆಗಳಿಗೆ ಇಲ್ಲಿವರೆಗೂ ನೇಮಕಾತಿ ಮಾಡಿಕೊಂಡಿಲ್ಲ. ಈ ಹುದ್ದೆಗಳನ್ನು ಶೀಘ್ರ ನೇರ ನೇಮಕಾತಿ ಮಾಡಿಕೊಳ್ಳಬೇಕು ಎಂದು ಪುನರ್‌ ಒತ್ತಾಯಿಸಿದರು.

ಇದನ್ನೂ ಓದಿ: ವಿಜಯಪುರ | ನಿಖರತೆ, ಸ್ಪಷ್ಟತೆಯಿರುವ ಬರವಣಿಗೆಯೇ ಜನರ ವಿಶ್ವಾಸ ಗಳಿಸುತ್ತದೆ: ಪ್ರೊ. ಪಿ ಜಿ ತಡಸದ

Advertisements

ಈ ಮುಷ್ಕರದಲ್ಲಿ ಪೌರಕಾರ್ಮಿಕ ಸಂಘಟನೆಯ ಮುಖಂಡ ಶ್ರೀಪಾದ ಜೋಶಿ, ಶಂಕರಗೌಡ ಶಿವಾಜಿ, ಸಿದ್ದಲಿಂಗಯ್ಯ ಚೋಂಡಿ ಪಾಟೀಲ, ಸಿದ್ದು ಕೊಳ್ಳಿ, ಇಬ್ರಾಹಿಂ ಶಾಂತಿ ಮಖಂದಾರ್, ಪ್ರಭು ನಾಲತವಾಡ, ಪ್ರದೀಪ ಶಿವಶರಣ, ಎಸ್ ಡಿ ಪಾಟೀಲ, ಡಿ ಬಿ ಜಾನವೇಕರ್ ಹಾಗೂ ಈ ಹೋರಾಟಕ್ಕೆ ಬೆಂಬಲ ಸೂಚಿಸಿರುವ ಅಂಬೇಡ್ಕರ್ ಸೇನೆ ತಾಳಿಕೋಟಿ ಅಧ್ಯಕ್ಷ ಗೋಪಾಲ ಕಟ್ಟಿಮನಿ, ವಾಹನ ಚಾಲಕರು ಇತರರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X