ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಮೇ 30ರಂದು ಜಿಲ್ಲಾಡಳಿತ ರಜೆ ಘೋಷಿಸಿದೆ. ಗುರುವಾರ ರಾತ್ರಿಯಿಂದ ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿದೆ. ಜಿಲ್ಲೆಯ ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಮನೆಗಳಿಗೆ ನೀರು ನುಗ್ಗಿದ್ದು ಹಲವು ಕುಟುಂಬಗಳನ್ನು ಸ್ಥಳಾಂತರ ಮಾಡಲಾಗಿದೆ.
