ಉಡುಪಿ | ಜಿಲ್ಲೆಯಲ್ಲಿ ಪ್ರವಾಹ, ಅತಿವೃಷ್ಠಿ ಹಾನಿಗಳಿಗೆ ತ್ವರಿತವಾಗಿ ಸ್ಪಂದಿಸಿ : ಸಚಿವೆ ಲಕ್ಷ್ಮಿ ಹೆಬ್ಬಾಳಕರ್

Date:

Advertisements

ಉಡುಪಿ ಜಿಲ್ಲೆಯಲ್ಲಿ ಅತಿವೃಷ್ಠಿಯಿಂದ ಉಂಟಾಗುವ ಪ್ರವಾಹ, ಅದರಿಂದಾಗುವ ಇತರೆ ಸಮಸ್ಯೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದರೊಂದಿಗೆ ತ್ವರಿತವಾಗಿ ಸ್ಪಂದಿಸಿ, ಯಾವುದೇ ಜನ, ಜಾನುವಾರುಗಳಿಗೆ ಹಾನಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳಕರ್ ಹೇಳಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಕೆಸ್ವಾನ್ ವೀಡಿಯೋ ಕಾನ್ಫ್ರೆನ್ಸ್ ಸಭಾಂಗಣದಲ್ಲಿ ಮಳೆಹಾನಿ ಬಗ್ಗೆ ಚರ್ಚಿಸಲು ಅಧಿಕಾರಿಗಳೊಂದಿಗೆ ಆನ್‌ಲೈನ್ ಮೂಲಕ ಸಭೆ ನಡೆಸಿ ಮಾತನಾಡುತ್ತಿದ್ದರು.

ಈ ಬಾರಿ ಅವಧಿಗೆ ಮುನ್ನವೇ ಜಿಲ್ಲೆಯಾದ್ಯಂತ ಪೂರ್ವ ಮುಂಗಾರು ಮಳೆ ನಿರೀಕ್ಷೆಗಿಂತ ಹೆಚ್ಚಾಗಿದೆ. ಜನವರಿಯಿಂದ ಈವರೆಗೆ ವಾಡಿಕೆಯಂತೆ 177.4 ಮಿ.ಮೀ ಮಳೆಯಾಗಬೇಕಿತ್ತು. ಆದರೆ, 801.7 ಮಿ.ಮೀ ಕ್ಕೂ ಮಳೆಯಾಗಿ, ಮೂರು ಪಟ್ಟು ಹೆಚ್ಚಾಗಿದೆ. ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳ ಮಳೆಗಾಲದಲ್ಲಿ ಉಂಟಾಗುವ ಪ್ರವಾಹ, ಅತಿವೃಷ್ಠಿ ಸಮಸ್ಯೆಗಳನ್ನು ಎದುರಿಸಲು ಅಗತ್ಯವಾಗಿರುವ ಎಲ್ಲಾ ರೀತಿಯ ಪರಿಕರಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇಟ್ಟುಕೊಂಡು ಸಮರ್ಪಕವಾಗಿ ಎದುರಿಸಲು ಸನ್ನದ್ಧರಾಗಿರಬೇಕು ಎಂದು ಸೂಚನೆ ನೀಡಿದರು.

Advertisements
1005600904


ಜಿಲ್ಲಾ ಹಾಗೂ ತಾಲೂಕು ಮಟ್ಟಗಳಲ್ಲಿ ಕಂಟ್ರೋಲ್ ರೂಂಗಳು 24*7 ಕಾರ್ಯನಿರ್ವಹಿಸಬೇಕು. ಯಾವುದೇ ಮಳೆಹಾನಿ ದೂರುಗಳು ಬಂದಲ್ಲಿ ಕೂಡಲೇ ಸ್ಪಂದಿಸಬೇಕು. ಅತಿವೃಷ್ಠಿಯಿಂದ ತೊಂದರೆಗೊಳಗಾದವರಿಗೆ ಪರಿಹಾರವನ್ನು ಸಹ ತ್ವರಿತವಾಗಿ ನೀಡಬೇಕು ಎಂದ ಅವರು, ವರಾಹಿ ಜಲಾಶಯದ ನೀರಿನ ಮಟ್ಟ ಹಾಗೂ ಒಳಹರಿವಿನ ಬಗ್ಗೆ ಮಾಹಿತಿ ಆಗಿಂದಾಗ್ಗೆ ಪಡೆಯುತ್ತಿರಬೇಕು. ಇದರಿಂದ ಸಾರ್ವಜನಿಕರಿಗೆ ಸಮಸ್ಯೆ ಉಂಟಾದಲ್ಲಿ ಮುಂಚಿತವಾಗಿಯೇ ತಿಳಿಸಿ, ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿರುವುದರಿಂದ ಕೃಷಿ ಚಟುವಟಿಕೆಗಳು ಗರಿಗೆದರುತ್ತಿವೆ. ರೈತರಿಗೆ ಅಗತ್ಯವಿರುವ ಭಿತ್ತನೆ ಬೀಜ, ರಸಗೊಬ್ಬರವನ್ನು ಸಮರ್ಪಕವಾಗಿ ವಿತರಿಸಬೇಕು. ಇದರಲ್ಲಿ ಯಾವುದೇ ಸಮಸ್ಯೆಗಳು ಉಂಟಾಗದAತೆ ನೋಡಿಕೊಳ್ಳಬೇಕು ಎಂದರು.
ಜಿಲ್ಲೆಗೆ ಹೊರಗಿನಿಂದ ಆಗಮಿಸುವ ಪ್ರವಾಸಿಗರಿಗೆ ಕಡಲ ತೀರದಲ್ಲಿ ಹಾಗೂ ಹಳ್ಳ, ಕೊಳ್ಳ, ಜಲಪಾತಗಳ ಬಗ್ಗೆ ಅರಿವಿಲ್ಲದೇ ಪ್ರಾಣಹಾನಿ ಪ್ರಕರಣಗಳು ಉಂಟಾಗುವ ಸಾಧ್ಯತೆಗಳು ಇವೆ. ಈ ಬಗ್ಗೆ ಸಾರ್ವನಿಕರಿಗೆ ಮುನ್ಸೂಚನೆ ನೀಡುವ ಫಲಕಗಳನ್ನು ಅಳವಡಿಸಬೇಕು. ಸಾಧ್ಯವಾದಲ್ಲಿ ಸಿಬ್ಬಂದಿಗಳ ನಿಯೋಜನೆಯನ್ನು ಮಾಡಬೇಕು ಎಂದು ಸೂಚನೆ ನೀಡಿದರು.

ನೆರೆಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧಿಕ ಪ್ರಕರಣಗಳು ಹೆಚ್ಚುತ್ತಿವೆ. ಜಿಲ್ಲೆಯ ಗಡಿಭಾಗದ ಸಮೀಪ ಸಹ ಸಣ್ಣ-ಪುಟ್ಟ ಪ್ರಕರಣಗಳು ಆಗಿರುವುದು ಕೇಳಿಬರುತ್ತಿದೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ವ್ಯವಸ್ಥಿತವಾಗಿರುವಂತೆ ಕ್ರಮ ವಹಿಸಬೇಕು. ಅನಗತ್ಯವಾಗಿ ಕಾನೂನು ಉಲ್ಲಂಘಿಸುವ ಘಟನೆಗಳು ಜರುಗದ ಹಾಗೆ ಎಚ್ಚರವಹಿಸಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸತ್ಯವತಿ ಜಿ ಮಾತನಾಡಿ, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕೇಂದ್ರಸ್ಥಾನಗಳಲಿದ್ದು, ಪ್ರಕೃತಿ ವಿಕೋಪ ನಿರ್ವಹಣೆ ಕಾರ್ಯಗಳನ್ನು ಶೀಘ್ರವಾಗಿ ಕೈಗೊಳ್ಳಲು ಕಾರ್ಯಪ್ರವೃತ್ತರಾಗಿರಬೇಕು. ಜನಸಾಮಾನ್ಯರಿಗೆ ಸ್ಪಂದಿಸಲು ಅನುಕೂಲವಾಗುವ ಹಾಗೆ ತಮ್ಮ ಮೊಬೈಲ್ ಅನ್ನು ದಿನದ ಇಪ್ಪತ್ತನಾಲ್ಕು ಗಂಟೆಯೂ ಸಕ್ರೀಯವಾಗಿ ಇಟ್ಟುಕೊಂಡು ದೂರು ಬಂದಾಗ ಕೂಡಲೇ ಸ್ಪಂದಿಸಬೇಕೆಂದರು.

ಕಂಟ್ರೋಲ್ ರೂಂಗಳ ನಂಬರ್‌ಗಳೂ ಸಹಜವಾಗಿ ಜನರ ಮನಸ್ಸಿನಲ್ಲಿ ಇರುವ ಹಾಗೆ ಸರಳವಾಗಿರಬೇಕು. ಅವುಗಳ ನಿರ್ವಹಣೆಯನ್ನು ವ್ಯವಸ್ಥಿತವಾಗಿ ನಿರ್ವಹಿಸುವುದರೊಂದಿಗೆ ಸ್ಪಂದಿಸಬೇಕು ಎಂದ ಅವರು, ಮಳೆಯಿಂದ ಉಂಟಾಗುವ ವಿದ್ಯುತ್‌ಚ್ಛಕ್ತಿ ಅವಘಡಗಳು ಆಗದಂತೆ ಎಚ್ಚರಿಕೆ ವಹಿಸಬೇಕು. ವಿದ್ಯುತ್‌ಚ್ಛಕ್ತಿ ಸೌಲಭ್ಯದ ಪುನರ್ ಕಾರ್ಯಗಳನ್ನು ಶೀಘ್ರವಾಗಿ ಕೈಗೊಳ್ಳಬೇಕು ಎಂದರು.

ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ಮಾತನಾಡಿ, ಜಿಲ್ಲೆಯಲ್ಲಿ ಈವರೆಗೆ ಆಗಿರುವ ಮಳೆ, ಹಾನಿ ಸೇರಿದಂತೆ ಮತ್ತಿತರ ವಿವರಗಳನ್ನು ಸವಿಸ್ತಾರವಾಗಿ ತಿಳಿಸುವುದರೊಂದಿಗೆ ಪ್ರಕೃತಿ ವಿಕೋಪ ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳಲು ತಯಾರಿ ಬಗ್ಗೆ ತಿಳಿಸಿದ ಅವರು, ಪ್ರವಾಸಿ ತಾಣಗಳಲ್ಲಿ ಜೂನ್ ಆರಂಭದಿಂದಲೇ ಮೂವತ್ತಕ್ಕೂ ಹೆಚ್ಚು ಗೃಹ ರಕ್ಷಕ ದಳದವರನ್ನು ನಿಯೋಜಿಸುವುದಾಗಿ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಡಿ.ಎಫ್.ಓ ಗಣಪತಿ, ಸಹಾಯಕ ಕಮೀಷನರ್ ರಶ್ಮಿ ಎಸ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ತಹಶೀಲ್ದಾರರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X