ಮಂಡ್ಯ | ಮಾದಿಗರ ಕಿವಿಗೆ ಸರ್ಕಾರ ಹೂ ಮುಡಿಸಿದೆ : ಭಾಸ್ಕರ್ ಪ್ರಸಾದ್ ಕಿಡಿ

Date:

Advertisements

ಮಂಡ್ಯ ಜಿಲ್ಲೆ, ಮಳವಳ್ಳಿ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಒಳ ಮೀಸಲಾತಿ ಹೋರಾಟಗಾರ ಬಿ. ಆರ್. ಭಾಸ್ಕರ್ ಪ್ರಸಾದ್ ಮಾತನಾಡಿ ಒಳ ಮೀಸಲಾತಿ ಜಾರಿ ಮಾಡದೆ ಮಾದಿಗರ ಕಿವಿಗೆ ಸರ್ಕಾರ ಹೂ ಮುಡಿಸಿದೆ ಎಂದು ಕಿಡಿಕಾರಿದರು.

‘ ರಾಜ್ಯ ಸರ್ಕಾರ ಕೊಟ್ಟ ಮಾತಿನಂತೆ ಒಳ ಮೀಸಲಾತಿ ಜಾರಿ ಮಾಡಬೇಕು. ಒಂದು ವೇಳೆ ನಿರ್ಲಕ್ಷ್ಯ ವಹಿಸಿದರೆ ಹೋರಾಟದ ಗತಿ, ಸ್ವರೂಪ ಬದಲಾಯಿಸಬೇಕಾಗುತ್ತದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಬೇಕಾಗುತ್ತದೆ. ಇದುವರೆಗೆ ಸರ್ಕಾರ ಹೇಳಿದಂತೆ ನಡೆದುಕೊಂಡಿಲ್ಲ. ಈಗಲೂ ಸಹ ಮೀನಾಮೇಶ ಏಣಿಸುತ್ತಿದೆ ‘ ಎಂದು ಲೇವಡಿ ಮಾಡಿದರು.

ಮಾದಿಗ ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಒಳ ಮೀಸಲಾತಿ ಜಾರಿಯಾಗಬೇಕು. ಇದನ್ನೇ ಪ್ರತಿಭಟನೆ ಮೂಲಕ ಪ್ರಶ್ನೆ ಮಾಡುತ್ತಿರುವುದು ಹೊರತು ಯಾವುದೇ ಸಮುದಾಯವನ್ನು ಪ್ರಶ್ನೆ ಮಾಡುತಿಲ್ಲ ಎಂದರು.

Advertisements

ನ್ಯಾಯಮೂರ್ತಿ ಎ. ಜೆ ಸದಾಶಿವ ಆಯೋಗದ ವರದಿ, ಶಿಫಾರಸ್ಸು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕ್ರಾಂತಿಕಾರಿ ಅರೆಬೆತ್ತಲೆ, ಉರುಳು ಸೇವೆ, ಮೈ ಮೇಲೆ ಮಲ ಸುರಿದುಕೊಳ್ಳುವುದು ಸೇರಿದಂತೆ ವಿವಿಧ ರೀತಿಯಲ್ಲಿ ವಿನೂತನ ಪ್ರತಿಭಟನೆ ಮೂಲಕ ಸರ್ಕಾರವನ್ನು ಎಚ್ಚರಿಸಲಾಗುತ್ತಿದೆ.

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಮತ ಹಾಕಿದ ತಪ್ಪಿಗೆ ಚಡಿ ಏಟನ್ನು ಮೈ ತುಂಬ ನಾವೇ ಹೊಡೆದುಕೊಳ್ಳುತ್ತೇವೆ, ಒಳ ಮೀಸಲಾತಿ ಜಾರಿಯಾಗುವವರೆಗೂ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ. ನಿರಂತರ ಹೋರಾಟದಿಂದಾಗಿ ಕಾಂಗ್ರೆಸ್ ಸರ್ಕಾರ ಒಳ ಮೀಸಲಾತಿ ಜಾರಿ ಮಾಡುವ ಭರವಸೆ ನೀಡಿ ಜನಗಣತಿಗೆ ಅದೇಶಿಸಿದೆ. ಆದರೆ, ಈ ನಡುವೆ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್. ಸಿ. ಮಹದೇವಪ್ಪ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳು, ಬಡ್ತಿ ಮೀಸಲಾತಿ ಮತ್ತು ಬ್ಯಾಕ್ ಲಾಗ್ ಹುದ್ದೆಗಳನ್ನು ತುಂಬಲು ಮುಂದಾಗಿದ್ದಾರೆ.

ಇದು ಮಾದಿಗ ಸಮುದಾಯವನ್ನು ಸಮಾನತೆಯಿಂದ ವಂಚಿಸುವ ತಂತ್ರಗಾರಿಕೆ. ಒಳ ಮೀಸಲಾತಿ ಜಾರಿ ಮಾಡಿದ ನಂತರ ಯಾವುದೇ ಹುದ್ದೆಗಳನ್ನಾದರೂ ತುಂಬಿದರೂ ನಮ್ಮ ಅಭ್ಯಂತರವಿಲ್ಲ. ಒಳ ಮೀಸಲಾತಿ ಜಾರಿ ಮಾಡದೆ ಹೊಸ ನೇಮಕಾತಿ, ಬ್ಯಾಕ್ ಲಾಗ್ ಮತ್ತು ಬಡ್ತಿ ಮೀಸಲಾತಿ ಜಾರಿ ಮಾಡಿದಲ್ಲಿ ರಾಜ್ಯದ ಮಾದಿಗ ಸಮುದಾಯ ಉಗ್ರ ಹೋರಾಟ ನಡೆಸುತ್ತದೆ ಎಂದು ಎಚ್ಚರಿಸಿದರು.

ಒಳ ಮೀಸಲಾತಿ ಆಗ್ರಹಿಸಿ ಮೈಸೂರಿನ ಚಾಮುಂಡಿ ಬೆಟ್ಟದ ಮಹಿಷಾಸುರ ಪ್ರತಿಮೆ ಬಳಿಯಿಂದ ಬೆಂಗಳೂರುವರೆಗೆ ಹಮ್ಮಿಕೊಂಡಿರುವ ಅರೆಬೆತ್ತಲೆ ಪಾದಯಾತ್ರೆ ಮಳವಳ್ಳಿಗೆ ಆಗಮಿಸಿ ಡಾ. ಬಿ. ಆರ್. ಅಂಬೇಡ್ಕರ್ ಪ್ರತಿಮೆಗೆ ಕಾರ್ಯಕರ್ತರು ಮಾಲಾರ್ಪಣೆ ಮಾಡಿದರು.

ಇದೇ ಜೂನ್ 9 ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಲಕ್ಷಾಂತರ ಮಂದಿ ಹೋರಾಟಗಾರರು ಭಾಗವಹಿಸುವ ನಿರೀಕ್ಷೆ ಇದೆ. ಮಂಡ್ಯ ಜಿಲ್ಲೆಯಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಕೊಡಗು | ಪೊನ್ನಂಪೇಟೆ ಸಿಇಟಿ ಕಾಲೇಜು ಹಾಸ್ಟೆಲ್ ನಲ್ಲಿ ರಾಯಚೂರು ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆ

ಪತ್ರಿಕಾಗೋಷ್ಠಿಯಲ್ಲಿ ನಡಕಲಪುರ ಮಂಜುನಾಥ್, ಕೃಷ್ಣಮೂರ್ತಿ, ರಮೇಶ್, ಶಿವನಂದ್, ಶಾಂತಕುಮಾರ್, ಅರುಣ್ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X