ನಟ ಕಮಲ್ ಹಾಸನ್ ಅವರ ʼತಮಿಳಿನಿಂದಲೇ ಕನ್ನಡ ಹುಟ್ಟಿದ್ದುʼ ಎಂಬ ಹೇಳಿಕೆ ರಾಜ್ಯದಲ್ಲಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ. ಈ ಹಿನ್ನೆಲೆ ಕಮಲ್ ಹಾಸನ್ ಭಾವಚಿತ್ರಕ್ಕೆ ಬೆಂಕಿ ಹಂಚಿ ಆಕ್ರೋಶ ಹೊರಹಾಕಿದ್ದ ಕನ್ನಡಪರ ಸಂಘಟನೆಯ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಕಮಲ್ ಹೇಳಿಕೆ ಖಂಡಿಸಿ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ಬಸವೇಶ್ವರ ನಗರದ ಪವಿತ್ರ ಪ್ಯಾರಡೈಸ್ ಬಳಿ ನಟನ ಭಾವಚಿತ್ರಕ್ಕೆ ಬೆಂಕಿ ಹಾಕಿ ಪ್ರತಿಭಟನೆ ನಡೆಸಿದ್ದರು. ಪೊಲೀಸರ ಅನುಮತಿ ಪಡೆಯದೇ ರಸ್ತೆಯಲ್ಲಿ ಬೆಂಕಿ ಹಾಕಿದ ಆರೋಪದಡಿ ರವಿಕುಮಾರ್ ಹಾಗೂ ಬಸವೇಶ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸದ್ಯ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು, ನೋಟಿಸ್ ಕೊಟ್ಟು ಕಳುಹಿಸಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ಬೆಂಗಳೂರು | ‘ಮೆಟ್ರೋ ಚಿಕ್ಸ್’ ಹೆಸರಲ್ಲಿ ಮಹಿಳೆಯರ ರಹಸ್ಯ ವಿಡಿಯೋ: ಆರೋಪಿ ಯುವಕನ ಬಂಧನ