ಕಾಂಗ್ರೆಸ್‌ನ ಹಿರಿಯ ರಾಜಕಾರಣಿ, ಮಾಜಿ ಸಚಿವ ಎಸ್ ಆರ್ ಪಾಟೀಲ್ ಮತ್ತು ಜೆಡಿಎಸ್‌ನ ವಿಧಾನ ಪರಿಷತ್ ಮಾಜಿ ಸದಸ್ಯ ಕೆ ಟಿ ಶ್ರೀಕಂಠೇಗೌಡ ಅವರಿಗೆ ವಿಧಾನ ಪರಿಷತ್‌ನ ಅತ್ಯುತ್ತಮ ಶಾಸಕ ಪ್ರಶಸ್ತಿ ಘೋಷಣೆಯಾಗಿದೆ.
ಎಸ್ ಆರ್ ಪಾಟೀಲ್ ಅವರಿಗೆ 2021ನೇ ಸಾಲಿನ ಮತ್ತು ಕೆ ಟಿ ಶ್ರೀಕಂಠೇಗೌಡ ಅವರಿಗೆ 2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿ ಲಭಿಸಿದೆ.
ಜು. 18ರಂದು ಸಂಜೆ 6 ಗಂಟೆಗೆ ವಿಧಾನಸೌಧದ 3ನೇ ಮಹಡಿಯಲ್ಲಿನ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನೆರವೇರಲಿದೆ. ಪ್ರಶಸ್ತಿ ಸ್ವೀಕರಿಸಲು ಈ ಇಬ್ಬರೂ ಸದಸ್ಯರಿಗೂ ಆಹ್ವಾನ ನೀಡಿ ವಿಧಾನ ಪರಿಷತ್ ಕಾರ್ಯದರ್ಶಿ ಮೀನಾ ನಾಯಕ್ ಪತ್ರ ಬರೆದಿದ್ದಾರೆ.
