ಬೆಳಗಾವಿ | ಜಾತಿ ನಿಂಧನೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಸಂಕೇಶ್ವರ ಪೋಲಿಸರು

Date:

Advertisements

ಕಳೆದ 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಸಂಕೇಶ್ವರ ಪೊಲೀಸರು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

01/05/1996 ರಂದು ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ 6 ಜನರ ವಿರುದ್ದ ಜಾತಿ ನಿಂಧನೆ ಮತ್ತು ಹಲ್ಲೆ ಪ್ರಕರಣ ದಾಖಲಾಗಿತ್ತು. ಆರೂ ಜನ ಆರೋಪಿಗಳನ್ನ ನ್ಯಾಯಲಯಕ್ಕೆ ಹಾಜರು ಪಡಿಸಿ ವಿಚಾರಣೆಯಲ್ಲಿದ್ದಾಗ ಪ್ರಕರಣದ 6 ನೇ ಆರೋಪಿ ನಿಯಾಜ ಅಹ್ಮದ ಸಾಹೇಬಲಾಲ ಪೀರಜಾದೆ ಎಂಬುವನು ಅಲ್ಲಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ.

ಆರೋಪಿ ಪತ್ತೆಗೆ ಗೋಕಾಕ್ ಡಿ.ಎಸ್.ಪಿ ರವಿ ಡಿ ನಾಯ್ಕ ಹಾಗೂ ಸಂಕೇಶ್ವರ ಪಿಐ ಎಸ್.ಎಮ್. ಅವಜಿ ಇವರ ಮಾರ್ಗದರ್ಶನದಲ್ಲಿ ಪಿಎಸ್‌ಐ ಯು.ಎಸ್ ಶೆಟ್ಟೆನ್ನವರ ಹಾಗೂ ಸಿಬ್ಬಂದಿಗಳಾದ ಎಸ್.ಆ‌ರ್ ಬೇವಿನಕಟ್ಟಿ, ಎಸ್‌. ಎಸ್. ಗಳತಗಿ. ಇವರನ್ನೊಳಗೊಂಡ ವಿಶೇಷ ತಂಡವನ್ನು ರಚಿಸಿಸಲಾಗಿತ್ತು. ಪೊಲೀಸ್‌ ಸಿಬ್ಬಂದಿಗಳ ಸತತ ಪ್ರಯತ್ನದಿಂದ 29 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ನಿಯಾಜ ಅಹ್ಮದ ಸಾಹೇಬಲಾಲ ಪೀರಜಾದೆಯನ್ನು ಸಂಕೇಶ್ವರ ಪೊಲೀಸರು ಪತ್ತೆ ಹಚ್ಚಿ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಶಿರೊಳ ತಾಲ್ಲೂಕಿನ ಔರವಾಡ ಗ್ರಾಮದಲ್ಲಿ ಗುರುವಾರದಂದು ಬಂಧಿಸಿ ಸಂಕೇಶ್ವರ ನ್ಯಾಯಾಲಯಕ್ಕೆ ಹಾಜರ ಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

Advertisements

ಕಾರ್ಯಾಚಾರಣೆಯಲ್ಲಿ ಪಾಲ್ಗೊಂಡ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯಕ್ಕೆ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ ಅವರು ಶ್ಲಾಘಿಸಿ ಪ್ರಶಂಸೆ ವ್ಯಕ್ತ ಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ: ಇಂದಿನ ಹವಾಮಾನ ವರದಿ – ಆಗಸ್ಟ್ 20, 2025

ಬೆಳಗಾವಿ ಜಿಲ್ಲೆಯ ಹಲವೆಡೆ ಬುಧವಾರ ದಿನ ಪೂರ್ತಿ ಮೋಡ ಮುಸುಕಿದ ಆಕಾಶ...

ಬೈಕ್ ಮತ್ತು ಬಸ್ ನಡುವೆ ಅಪಘಾತ ಗರ್ಭಿಣಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠ ರಸ್ತೆಯಲ್ಲಿ ಬಸ್ ಮತ್ತು ಬೈಕ್...

ಬೆಳಗಾವಿ : ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ...

ಬೆಳಗಾವಿ : ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿಯ ಬಿಮ್ಸ್ ಆವರಣದಲ್ಲಿರುವ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

Download Eedina App Android / iOS

X