ಮುಂಗಾರು ಆರಂಭವಾಗುತ್ತಿದ್ದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿದೆ. ಅವೈಜ್ಞಾನಿಕ ಕಾಮಗಾರಿಯಿಂದಾಗಿ ಅಲ್ಲಲ್ಲಿ ರಸ್ತೆಗಳು ಜಲಾವೃತಗೊಂಡಿದೆ. ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿಯಿಡೀ ಎಡೆಬಿಡದೆ ಸುರಿದ ಮಳೆಯಿಂದಾಗಿ ಒಟ್ಟು ಎಂಟು ಮಂದಿ ಸಾವನ್ನಪ್ಪಿದ್ದಾರೆ. ಭಾರೀ ಮಳೆ ಹಿನ್ನೆಲೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಮೇ 30ರಂದು ಜಿಲ್ಲಾಡಳಿತ ರಜೆ ಘೋಷಿಸಿದೆ. ಜೊತೆಗೆ ಪಿಯು ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ.
