ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಗಂಗಾವತಿಯ ಮುರಾರಿ ನಗರದಲ್ಲಿ ನಡೆದಿದೆ.
ಲಕ್ಷ್ಮಿ (34) ಮೃತಪಟ್ಟ ಮಹಿಳೆ. ಪತಿ ಭೀಮೇಶ ಕೊಲೆ ಮಾಡಿದ ಆರೋಪಿಯಾಗಿದ್ದಾನೆ.
ಗುರುವಾರ ರಾತ್ರಿ ಪತಿ ಮತ್ತು ಪತ್ನಿ ಮಧ್ಯೆ ಜಗಳ ವಿಕೋಪಕ್ಕೆ ಹೋಗಿ ಭೀಮೇಶ, ಲಕ್ಷ್ಮಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದಾನೆ. ನಗರ ಠಾಣೆ ಅಧಿಕಾರಿಗಳು ಘಟನಾ ಸ್ಥಳ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.