“ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವಂತೆ, ತಮಿಳು ಭಾಷೆಯಿಂದ ಕನ್ನಡ ಭಾಷೆ ಹುಟ್ಟಿದೆ ಎಂಬ ತಪ್ಪು ಮತ್ತು ದುರುದ್ದೇಶಪೂರಿತ ಹೇಳಿಕೆ ಖಂಡನಿಯ. ನಟ ಕಮಲ್ ಹಾಸನ್ ತಪ್ಪನ್ನು ಒಪ್ಪಿ ಕ್ಷಮೆಯಚಿಸಬೇಕು” ಎಂದು ಕರವೇ ಕಾರ್ಯಕರ್ತರು ಅಗ್ರಹಿಸಿದರು.
ಹಾವೇರಿ ಪಟ್ಟಣದ ಸಿದ್ದಪ್ಪ ಕಂಬಳಿ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ನಟ ಕಮಲ ಹಾಸನ್ ಹೇಳಿಕೆ ಖಂಡಿಸಿ ಅವರ ಭಾವಚಿತ್ರ ಹರಿದು ಹಾಕಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಕರವೇ ಜಿಲ್ಲಾಧ್ಯಕ್ಷ ಗಿರೀಶ್ ಬಾರ್ಕಿ ಮಾತನಾಡಿ, “ನಟ-ರಾಜಕಾರಣಿ ಕಮಲ್ ಹಾಸನ್ ಅವರು ಸುಳ್ಳು ಮತ್ತು ಆಧಾರ ರಹಿತ ಹೇಳಿಕೆಯಾಗಿದೆ. ಕನ್ನಡ ಭಾಷೆಯ ಶ್ರೀಮಂತ ಇತಿಹಾಸ, ಸಂಸ್ಕೃತಿ ಮತ್ತು ಸ್ವಾಭಿಮಾನಕ್ಕೆ ತೀವ್ರ ಆಘಾತವನ್ನುಂಟು ಮಾಡಿದೆ. ಕನ್ನಡಿಗರಿಂದ ತೀವ್ರ ವಿರೋಧ ವ್ಯಕ್ತವಾದರೂ, ಕಮಲ್ ಹಾಸನ್ ಅವರು ತಮ್ಮ ತಪ್ಪನ್ನು ಒಪ್ಪಿಕೊಂಡು ಕ್ಷಮೆಯಾಚಿಸದೆ, ತಮ್ಮ ಹೇಳಿಕೆಗೆ ಬದ್ಧರಾಗಿರುವುದು ಕನ್ನಡಿಗರ ಆಕ್ರೋಶವನ್ನು ಮತ್ತಷ್ಟು ಹೆಚ್ಚಿಸಿದೆ” ಎಂದು ಕಿಡಿಕಾರಿದರು.
ಕರವೇ ರಾಜ್ಯ ಕಾರ್ಯದರ್ಶಿ ಕರಿಬಸಯ್ಯ ಎಸ್. ಬಿ. ಮಾತನಾಡಿ, “ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಗಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ರಕ್ಷಣಾ ವೇದಿಕೆಯು, ಕಮಲ್ ಹಾಸನ್ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತದೆ. ಈ ಹಿನ್ನೆಲೆಯಲ್ಲಿ, ಅವರ ಹೊಸ ಚಿತ್ರ “ತಗ್ ಲೈಫ್” (Thug Life), ಬಿಡುಗಡೆಯ ದಿನಾಂಕ 5 ಜೂನ್ 2025 ರಂದು ನಿಗದಿಯಾಗಿದೆ. ಕರ್ನಾಟಕದಲ್ಲಿ ಬಿಡುಗಡೆಯಾಗದಂತೆ ತಡೆಯುವ ನಿರ್ಧಾರವನ್ನು ನಾವು ಕೈಗೊಂಡಿದ್ದೇವೆ. ಈ ಚಿತ್ರದ ವಿತರಕರು ತಮ್ಮ ಹೂಡಿಕೆಯನ್ನು ರಕ್ಷಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಕರವೇ ಕಾರ್ಯಕರ್ತರು ಉಪಸ್ಥಿತರಿದ್ದರು.
