ಮಂಗಳೂರು | ಸುದ್ದಿಗೋಷ್ಠಿ ವೇಳೆ ಸಚಿವ ಗುಂಡೂರಾವ್ ಜೊತೆಗೆ ವಾಗ್ವಾದಕ್ಕಿಳಿದ ಖಾದರ್ ಆಪ್ತ!

Date:

Advertisements

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವಾಗ ಸ್ಪೀಕರ್ ಯು ಟಿ ಖಾದರ್ ಆಪ್ತನೊಬ್ಬ ಮಾತಿಗೆ ಅಡ್ಡಿಪಡಿಸುವ ಪ್ರಯತ್ನ ಮಾಡಿದ ಪ್ರಸಂಗ ನಡೆಯಿತು.

ಮಂಗಳೂರಿನ ಸರ್ಕ್ಯೂಟ್ ಹೌಸ್‌ನಲ್ಲಿ ನಡೆಯುತ್ತಿದ್ದ ಪತ್ರಿಕಾಗೋಷ್ಠಿ ವೇಳೆ ಈ ಬೆಳವಣಿಗೆ ನಡೆದಿದೆ. ಸಚಿವರ ಹಿಂದೆಯೇ ನಿಂತಿದ್ದ ಕಾಂಗ್ರೆಸ್ ಮುಖಂಡ ಉಸ್ಮಾನ್ ಕಲ್ಲಾಪು, ಸಚಿವರು ಪ್ರಚೋದನಕಾರಿ ಭಾಷಣಗಳಿಗೆ ಬ್ರೇಕ್ ಹಾಕುವ ಬಗ್ಗೆ ಮಾತಾಡುತ್ತಿದ್ದ ವೇಳೆ ಕಾಂಗ್ರೆಸ್ ಮುಸ್ಲಿಂ ಮುಖಂಡ, ಸಚಿವರ ವಿರುದ್ಧ ಸಿಡಿದೆದ್ದಿದ್ದಾರೆ.

ಸಚಿವರು ಮಾತಾಡುತ್ತಿದ್ದ ವೇಳೆ ಮುಸ್ಲಿಂ ಮುಖಂಡ ಮಧ್ಯೆ ಪ್ರವೇಶ ಮಾಡಿ, “ಮೊನ್ನೆ ನಡೆದ ಅಬ್ದುಲ್ ರಹ್ಮಾನ್ ಕೊಲೆ ಕೂಡ ಪ್ರಚೋದನಕಾರಿ ಭಾಷಣದಿಂದಲೇ ಆಗಿದೆ ಎಂದು ಹೇಳಿದ್ದಾರೆ. ಮಾತಿನ ಮಧ್ಯೆ ಬಂದ ಮುಸ್ಲಿಂ ಮುಖಂಡನ ವಿರುದ್ಧ ದಿನೇಶ್​ ಗುಂಡೂರಾವ್​ ಕೋಪಗೊಂಡು, “ಇದು ಪತ್ರಿಕಾಗೋಷ್ಠಿ, ಸುಮ್ನಿರಿ’ ಎಂದು ತಿಳಿಸಿದರು.

Advertisements

ಮತ್ತೊಮ್ಮೆ ಅಡಚಣೆಯಿಂದ ಸಿಡಿಮಿಡಿಗೊಂಡ ಸಚಿವರು, ತಾಳ್ಮೆ ಕಳೆದುಕೊಂಡ ದಿನೇಶ್ ಗುಂಡೂರಾವ್ ಯುವಕನನ್ನು ಅಲ್ಲಿಂದ ಹೊರಗೆ ಹಾಕಿ ಎಂದು ಹೇಳುತ್ತಾರೆ. ಅವರ ಪಕ್ಕದಲ್ಲಿ ಕುಳಿತಿದ್ದ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ಯುವಕನಿಗೆ ಸಮಾಧಾನ ಹೇಳುತ್ತಿರುವುದು ಕಂಡು ಬಂತು.

ಇದನ್ನು ಓದಿದ್ದೀರಾ? ಮಂಗಳೂರು | ತನ್ನ ವರ್ಗಾವಣೆ ಆದೇಶಕ್ಕೂ ಮುನ್ನ ಏಳು ಪೊಲೀಸರನ್ನು ಬೇರೆ ಠಾಣೆಗಳಿಗೆ ವರ್ಗಾಯಿಸಿದ್ದ ಕಮಿಷನರ್ ಅಗರ್ವಾಲ್!

ಹೊರಗಡೆ ಮಾಧ್ಯಮಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ಮುಖಂಡ ಉಸ್ಮಾನ್ ಕಲ್ಲಾಪು, “ಕೋಮು ಪ್ರಚೋದನೆಯಿಂದಲೇ ಅಮಾಯಕರ ಹತ್ಯೆಗಳು ಆಗಿವೆ,. ಯಾರೇ ಆಗಲಿ ಕ್ರಮ ಕೈಗೊಳ್ಳಿ. ಈ ವಿಚಾರದಲ್ಲಿ ಸರ್ಕಾರದ ಮೃದು ಧೋರಣೆ ಯಾಕೆ” ಎಂದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

ಪಕ್ಷಕ್ಕೆ ರಾಜೀನಾಮೆ ಕೊಡುವವರ ಬಗ್ಗೆ ನಾನು ಮಾತಾಡಲ್ಲ: ಗುಂಡೂರಾವ್

ಅಬ್ದುಲ್ ರಹ್ಮಾನ್ ಹತ್ಯೆ ಖಂಡಿಸಿ ಕಾಂಗ್ರೆಸ್ ಮುಸ್ಲಿಂ ಮುಖಂಡರ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ದಿನೇಶ್ ಗುಂಡೂರಾವ್​, “ನನ್ನ ಬಳಿ ಯಾವ ರಾಜೀನಾಮೆಯ ವಿಚಾರವೂ ಬರಲಿಲ್ಲ. ಪಕ್ಷಕ್ಕೆ ರಾಜೀನಾಮೆ ಕೊಡೋದು, ಬಿಡುವುದರ ಬಗ್ಗೆ ನಾನು ಮಾತನಾಡಲ್ಲ” ಎಂದಿದ್ದಾರೆ.

“ನಾನು ಸರಕಾರದ ಪ್ರತಿನಿಧಿಯಾಗಿ ಇಲ್ಲಿ ಬಂದಿದ್ದೇನೆ. ರಾಜೀನಾಮೆ ವಿಚಾರ ನನಗೆ ನೇರವಾಗಿ ಬರುವುದಿಲ್ಲ. ಸರಕಾರ ಎಂದ ಮೇಲೆ ನಮಗೆ ಎಲ್ಲ ಧರ್ಮ, ಪಕ್ಷ ಸಂಘಟನೆಯವರೂ ಒಂದೇ. ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವುದು ನನ್ನ ಜವಾಬ್ದಾರಿ. ದ್ವೇಷ ಹರಡುವವರಿಗೆ ಸುಲಭವಾಗಿ ಬೇಲ್ ಸಿಗದಂತಹ ಕಾನೂನು ತರುತ್ತೇವೆ. ಗಲಭೆ, ಹತ್ಯೆಗಳನ್ನ ನಿಲ್ಲಿಸುವುದು ನನ್ನ ಮುಖ್ಯ ಕೆಲಸ. ಘಟನೆ ನಡೆದಾಗ ನಾವು ಯಾವಾಗ ಬರಬೇಕು ಬರಬಾರದು ಅನ್ನುವುದನ್ನು ಸಮಯ ನೋಡಿ ತೀರ್ಮಾನ ಮಾಡುತ್ತೇವೆ. ಜನರ ಆಕ್ರೋಶವನ್ನು ಕೆಲವರು ರಾಜಕೀಯ ಬಂಡವಾಳ ಮಾಡುತ್ತಿದ್ದಾರೆ” ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X