ಕೆಲಸ ಮಾಡದ ಸೋಮಾರಿ ಸಚಿವರನ್ನು ಕಿತ್ತು ಬಿಸಾಕಿ ಸಮರ್ಥರನ್ನು ತೆಗೆದುಕೊಳ್ಳಿ: ಸಿಎಂಗೆ ಆರ್‌ ಅಶೋಕ್ ಸಲಹೆ

Date:

Advertisements

“ಕೆಲಸ ಮಾಡದ ಸೋಮಾರಿ ಸಚಿವರನ್ನು ಸಂಪುಟದಿಂದ ಕಿತ್ತು ಬಿಸಾಕಿ ಸಮರ್ಥರನ್ನು ತೆಗೆದುಕೊಳ್ಳಿ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್ ಅವರು ಸಲಹೆ ನೀಡಿದ್ದಾರೆ. ಜೊತೆಗೆ, “ಇಷ್ಟಕ್ಕೂ ಸಚಿವ ಸಂಪುಟ ವಿಸ್ತರಣೆ ಮಾಡಬೇಕು ಎಂಬ ನಿಮ್ಮ ಬೇಡಿಕೆಗೆ ಹೈಕಮಾಂಡ್ ಯಾಕೆ ಸೊಪ್ಪು ಹಾಕುತ್ತಿಲ್ಲ” ಎಂದು ಪ್ರಶ್ನಿಸಿದ್ದಾರೆ.

ಶುಕ್ರವಾರ ಜಿಲ್ಲಾಧಿಕಾರಿಗಳು, ಇತರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ನಡೆಸಿದ್ದು ಹಲವು ವಿಚಾರಗಳಲ್ಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಇದು ಕಾಂಗ್ರೆಸ್‌ ಸರ್ಕಾರ ಅಲ್ಲ, ಸಮ್ಮಿಶ್ರ ಸರ್ಕಾರ; ಆರ್‌ ಅಶೋಕ್ ಟೀಕೆ

Advertisements

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಆರ್ ಅಶೋಕ್ ಅವರು, “ಔಟ್‌ಗೋಯಿಂಗ್(Outgoing) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸಿ, ಸಿಇಒಗಳ ಸಭೆಯಲ್ಲಿ ಅಧಿಕಾರಿಗಳಿಗೆ ತಮ್ಮ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನುವ ಸುದ್ದಿಯು ಕಾಂಗ್ರೆಸ್ ಸರ್ಕಾರದಲ್ಲಿ ಆಡಳಿತ ಯಂತ್ರ ಹೇಗೆ ಸಂಪೂರ್ಣವಾಗಿ ಹಳಿ ತಪ್ಪಿದೆ ಎನ್ನುವುದಕ್ಕೆ ಕನ್ನಡಿ ಹಿಡಿದಿದೆ” ಎಂದು ಹೇಳಿದ್ದಾರೆ.

“ಸ್ವಾಮಿ ಸಿಎಂ ಸಿದ್ದರಾಮಯ್ಯನವರೇ, ಬಡವನ ಕೋಪ ದವಡೆಗೆ ಮೂಲ ಎನ್ನುವಂತೆ ತಮ್ಮ ಕೋಪ-ತಾಪ, ರೋಷಾವೇಷ ಅಧಿಕಾರಿಗಳ ಮೇಲಲ್ಲ, ಸಚಿವ ಸಂಪುಟದ ಸದಸ್ಯರ ಮೇಲೆ ತೋರಿಸಿ. ನಿಮ್ಮ ಹತಾಶೆಯನ್ನು, ಅಸಹಾಯಕತೆಯನ್ನು ಅಧಿಕಾರಿಗಳ ಮೇಲಲ್ಲಾ ತಮ್ಮ ಮಾತಿಗೆ ನಯಾ ಪೈಸೆ ಬೆಲೆ ಕೊಡದ ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಕ್ಲಾಸ್ ತೆಗೆದುಕೊಂಡು ನಿಮ್ಮ ದಮ್ಮು ತಾಕತ್ತು ತೋರಿಸಿ” ಎಂದಿದ್ದಾರೆ.

ಹಾಗೆಯೇ “ತಾವು ಸಚಿವರಿಗೆ ನೀಡಿರುವ ನಿರ್ದೇಶನಗಳಲ್ಲಿ ಯಾವುದಾದರೂ ಒಂದಾದರೂ ಪಾಲನೆ ಆಗುತ್ತಿದೆಯಾ” ಎಂದು ಪ್ರಶ್ನಿಸಿರುವ ವಿಪಕ್ಷ ನಾಯಕರು ಯಾವೆಲ್ಲ ನಿರ್ದೇಶನಗಳು ಪಾಲನೆಯಾಗಿಲ್ಲ ಎಂಬುದನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

“ತಿಂಗಳಲ್ಲಿ ಒಂದು ದಿನ ಜನತಾದರ್ಶನ ಮಾಡಿ ಎಂದರೂ ಮಾಡುತ್ತಿಲ್ಲ. ಜಿಲ್ಲಾ ಪ್ರವಾಸ ಮಾಡಿ ಜನರ ಸಮಸ್ಯೆ ಕೇಳಿ ಎಂದರೂ ಮಾಡುತ್ತಿಲ್ಲ. ಕನಿಷ್ಟಪಕ್ಷ ವಾರದಲ್ಲಿ ಮೂರು ದಿನ ಕಚೇರಿಯಲ್ಲಿ ಕುಳಿತು ಕೆಲಸ ಮಾಡಿ ಎಂದರೂ ಗುರುವಾರದ ಸಂಪುಟ ಸಭೆಗೆ ಬಿಟ್ಟರೆ ಬಹುತೇಕ ಸಚಿವರು ವಿಧಾನಸೌಧದತ್ತ ತಲೆಯೂ ಹಾಕುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನಿವೃತ್ತ ಅಧಿಕಾರಿಗಳನ್ನು ಹೊರ ಗುತ್ತಿಗೆ ಸೇವೆಯಿಂದ ತಕ್ಷಣ ಬಿಡುಗಡೆ ಮಾಡಿ ಎಂದರೂ ಬಿಡುಗಡೆ ಮಾಡಲಿಲ್ಲ. ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ತಕ್ಷಣ ಪರಿಹಾರ ನೀಡಿ ಎಂದರೂ ಯಾರೂ ತಲೆ ಕೆಡಿಸಿಕೊಂಡಿಲ್ಲ. ಇನ್ನೂ ಅನೇಕ ಜಿಲ್ಲೆಗಳಲ್ಲಿ ಕಳೆದ ವರ್ಷದ ಪರಿಹಾರ ವಿತರಣೆಯೇ ಬಾಕಿ ಇದೆ. ಕೆರೆ ಒತ್ತುವರಿ ನಿರ್ದಾಕ್ಷಿಣ್ಯವಾಗಿ ತೆರವು ಮಾಡಿಸಿ ಎಂದು ಅಧಿಕಾರ ವಹಿಸಿಕೊಂಡ ಆರಂಭದಲ್ಲಿ ಹೇಳಿದ್ದನ್ನು ಯಾರೂ ಕೇರ್ ಮಾಡಿಲ್ಲ” ಎಂದಿದ್ದಾರೆ.

“ರಾಜಕಾಲುವೆ ಅಕ್ರಮ ಒತ್ತುವರಿ ತೆರವು ಮಾಡಿ ಎಂದು ನಗರ ಪ್ರದಕ್ಷಿಣೆ ಹಾಕಿ ಬಂದರೂ ಯಾರೂ ಕ್ಯಾರೆ ಅನ್ನುತ್ತಿಲ್ಲ. ಜನಸ್ಪಂದನ ಅರ್ಜಿ ವಿಲೇವಾರಿ ತ್ವರಿತವಾಗಿ ಆಗಬೇಕು ಎಂಬ ಸೂಚನೆ ಭಾಷಣಕ್ಕೆ ಸೀಮಿತವಾಗಿದೆ. ಮೈಕ್ರೋಫೈನಾನ್ಸ್ ದೌರ್ಜನ್ಯ ಪ್ರಕರಣಗಳ ಬಗ್ಗೆ ಕೆಡಿಪಿ ಸಭೆಗಳಲ್ಲಿ ಪರಿಶೀಲನೆ ನಡೆಸಿ ಎಂದರೂ ತಮ್ಮ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ನಿಮ್ಮ ಗಮನಕ್ಕೆ ಬಂದಿದೆಯೇ ಇಲ್ಲವೋ ಗೊತ್ತಿಲ್ಲ, ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ನಿನ್ನೆಯೂ ಕೊಡಗಿನಲ್ಲಿ ಒಂದು ಆತ್ಮಹತ್ಯೆ ಆಗಿದೆ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಬರ ಪರಿಹಾರ | ಹೇಳಿಕೆಗಳಲ್ಲೇ ಕಾಲಹರಣ ಮಾಡುತ್ತಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ: ಆರ್ ಅಶೋಕ್ ಟೀಕೆ

“ಡಿಸಿಎಂ ಸಾಹೇಬರು ನೋಡಿದರೆ ತಾವು ಮಾಡಿದ ಎಂಜಿನಿಯರ್‌ಗಳ ವರ್ಗಾವಣೆ ಆದೇಶಕ್ಕೆ ಸಡ್ಡು ಹೊಡೆದು ಮುಖ್ಯಕಾರ್ಯದರ್ಶಿಗಳಿಗೆ ಪತ್ರ ಬರೆದು ತಮ್ಮ ಅನುಮತಿ ಇಲ್ಲದೆ ಮಾಡುವಂತಿಲ್ಲ ಎಂದು ಧಮ್ಕಿ ಹಾಕುತ್ತಾರೆ. ನಿಮ್ಮ ಘನಂದಾರಿ ಕಾರ್ಯವೈಖರಿ ಬಗ್ಗೆ ಹೇಳುತ್ತಾ ಹೋದರೆ ಇನ್ನೂ ದೊಡ್ಡ ಪಟ್ಟಿಯೇ ಇದೆ” ಎಂದು ವಿಪಕ್ಷ ನಾಯಕರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

“ಮನೆಯ ಯಜಮಾನ ಸರಿ ಇಲ್ಲದೆ ಹೋದರೆ ಹೇಗೆ ಸಂಸಾರ ಬೀದಿಗೆ ಬರುತ್ತದೋ ಅದೇ ರೀತಿ ಒಂದು ಸರ್ಕಾರದಲ್ಲಿ ಮುಖ್ಯಮಂತ್ರಿಗೆ ಹಿಡಿತ ಇಲ್ಲದೆ ಹೋದರೆ ಆಡಳಿತ ಯಂತ್ರ ಹಳ್ಳ ಹಿಡಿಯುತ್ತದೆ. ಮುಖ್ಯಮಂತ್ರಿ ಮಾತಿಗೆ ಸಚಿವರೇ ಕಿಮ್ಮತ್ತು ಕೊಡುತ್ತಿಲ್ಲ ಎಂದರೆ ಆಡಳಿತಶಾಹಿಯಲ್ಲಿ ಗೊಂದಲ ಮೂಡಿಸುತ್ತದೆ” ಎಂದಿದ್ದಾರೆ.

“ಆದ್ದರಿಂದ ಮೊದಲು ನಿಮ್ಮ ಸಚಿವ ಸಂಪುಟ ಸಚಿವರಿಗೆ ನಿಮ್ಮ ಮಾತು, ಆದೇಶ ಪಾಲನೆ ಮಾಡುವಂತೆ ಕ್ಲಾಸ್ ತೆಗೆದುಕೊಂಡು ತಾಕೀತು ಮಾಡಿ. ಕೆಲಸ ಮಾಡದ ಸೋಮಾರಿ ಸಚಿವರನ್ನು ಸಂಪುಟದಿಂದ ಕಿತ್ತು ಬಿಸಾಕಿ ಸಮರ್ಥರನ್ನು ತೆಗೆದುಕೊಳ್ಳಿ. ಇಷ್ಟಕ್ಕೂ ಸಚಿವ ಸಂಪುಟ ವಿಸ್ತರಣೆ ಮಾಡಬೇಕು ಎಂಬ ನಿಮ್ಮ ಬೇಡಿಕೆಗೆ ಹೈಕಮಾಂಡ್ ಯಾಕೆ ಸೊಪ್ಪು ಹಾಕುತ್ತಿಲ್ಲ? ಇದು ತಾವು outgoing ಸಿಎಂ ಎಂಬುದಕ್ಕೆ ಪರೋಕ್ಷ ಸೂಚನೆಯೋ? ಅಥವಾ ಹೇಗಿದ್ದರೂ ಮುಖ್ಯಮಂತ್ರಿ ಬದಲಾವಣೆ ಆಗಲಿದೆ, ಈಗ ಸಂಪುಟ ವಿಸ್ತರಣೆ/ಪುನಾರಾಚನೆ ಯಾಕೆ ಎಂದು ಸುಮ್ಮನಿದ್ದಾರೋ” ಎಂದು ಪ್ರಶ್ನಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X