ಭುಗಿಲೆದ್ದ ಹೇಮಾವತಿ ಕೆನಾಲ್‌ ವಿವಾದ; ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೊಲೀಸರು

Date:

Advertisements

ಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್‌ ಯೋಜನೆಗೆ ತುಮಕೂರು ಜಿಲ್ಲೆಯಾದ್ಯಂತ ವಿರೋಧ ಹೆಚ್ಚುತ್ತಿದೆ. ಕುಣಿಗಲ್ ಹೊರತು ಪಡಿಸಿ ಉಳಿದ ಭಾಗಗಳಲ್ಲಿ ಜನರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸರ್ಕಾರ ಯಾವುದೇ ಸಮಾಲೋಚನೆ ನಡೆಸದೇ ಕಾಮಗಾರಿ ಮುಂದುವರಿಸುತ್ತಿದ್ದು, ಪ್ರತಿಭಟನೆ ತಪ್ಪಿಸಲು ನಿಷೇಧಾಜ್ಞೆ ಜಾರಿಗೊಳಿಸಿದೆ. ಇದು ಪ್ರತಿಭಟನಾಕಾರರ ಆಕ್ರೋಶಕ್ಕೆ ಕಾರಣವಾಗಿದೆ.

ಗುಬ್ಬಿ ತಾಲೂಕಿನ ಸಂಕಾಪುರ, ಡಿ.ರಾಂಪುರ ಗ್ರಾಮಗಳ ಬಳಿ ಕಾಮಗಾರಿ ನಡೆಯುತ್ತಿದ್ದೆ. ಈ ಕಾಮಗಾರಿ ವಿರೋಧಿಸಿ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ನಿಟ್ಟೂರು ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸುತ್ತಲಿನ 10 ಕಿಮೀ ವ್ಯಾಪ್ತಿಗೆ ನಿಷೇಧಾಜ್ಞೆ ಜಾರಿ ಮಾಡಿ ಗುಬ್ಬಿ ತಹಶೀಲ್ದಾರ್‌ ಬಿ. ಆರತಿ ಆದೇಶಿಸಿದ್ದಾರೆ.

WhatsApp Image 2025 05 31 at 1.27.41 PM

ನಿಷೇಧಾಜ್ಞೆ, ಬಿಗಿ ಪೊಲೀಸ್‌ ಬಂದೋಬಸ್ತ್‌ ನಡುವೆಯೂ ಶಾಸಕರಾದ ಸುರೇಶ್‌ ಗೌಡ, ಜ್ಯೋತಿಗಣೇಶ್‌, ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ ಸೇರಿದಂತೆ ವಿವಿಧ ಮಠಗಳ ಸ್ವಾಮೀಜಿಗಳು ರಸ್ತೆ ತಡೆದು, ಟೈರ್‌ಗೆ ಬೆಂಕಿ ಹಂಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಬಿಜೆಪಿ ನಾಯಕರೂ ಸೇರಿ 10ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನ ಗುಬ್ಬಿ ರಾಷ್ಟ್ರೀಯ ಹೆದ್ದಾರಿಯಲ್ಲೇ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Advertisements

ಕೆನಾಲ್‌ ಯೋಜನೆ ಮೂಲಕ ರಾಮನಗರಕ್ಕೆ ನೀರು ಹರಿಸಲು ಡಿಸಿಎಂ ಡಿಕೆ ಶಿವಕುಮಾರ್‌ ಅವರು ಷಡ್ಯಂತ್ರ ರೂಪಿಸಿದ್ದು, ಇದರಿಂದ ತುಮಕೂರು ರೈತರಿಗೆ ಅನ್ಯಾಯವಾಗಲಿದೆ. ಇದ್ಯಾವುದನ್ನೂ ಪರಾಮರ್ಶಿಸದೇ ಸರ್ಕಾರ ಏಕಾಏಕಿ ಕಾಮಗಾರಿ ನಡೆಸುತ್ತಿದೆ. ಇದೊಂದು ಅವೈಜ್ಞಾನಿಕ ಕಾಮಗಾರಿ. ಕೂಡಲೇ ಕಾಮಗಾರಿಯ ಎಲ್ಲ ಕೆಲಸಗಳನ್ನು ಸ್ಥಗಿತಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಇದನ್ನೂ ಓದಿ: ತುಮಕೂರು | ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ಡಿ. 7 ರಂದು ಸಂಯುಕ್ತ ಕಿಸಾನ್ ಕರ್ನಾಟಕ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ಅಲ್ಲದೇ ಶಿವಮೊಗ್ಗ-ಬೆಂಗಳೂರು ಹೆದ್ದಾರಿಯಲ್ಲಿ ನಡೆದುಕೊಂಡೇ ನಾಲೆಯತ್ತ ರೈತರು ಹೊರಟಿದ್ದಾರೆ. ಪ್ರತಿಭಟನಾಕಾರರನ್ನ ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ.

WhatsApp Image 2025 05 31 at 1.28.10 PM
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಚಳ್ಳಕೆರೆ ನಗರದಲ್ಲಿ ರಸ್ತೆ ಗುಂಡಿಗಳ ಪೂಜೆ; ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನೂತನ ಪ್ರತಿಭಟನೆ

ಚಳ್ಳಕೆರೆ ನಗರದ ಬಹುತೇಕ ವಾರ್ಡುಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ, ಅಲ್ಲದೆ ತಾಲೂಕಿನ...

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

Download Eedina App Android / iOS

X