ನಮ್ಮ ಸಮಸ್ಯೆಗಳನ್ನು ಸರ್ಕಾರದ ಮುಂದೆ ಇಟ್ಟು ಒತ್ತಡ ಹಾಕದೇ ಇದ್ದರೆ ಸರ್ಕಾರ ನಮ್ಮ ಕಡೆ ಗಮನ ಕೊಡುವುದಿಲ್ಲ ಎಂದು ಅಂಗನವಾಡಿ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಂದಾ ಹೇಳಿದರು.
ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ಉಡುಪಿ ಜಿಲ್ಲಾ ಸಮಿತಿ ನೇತ್ರತ್ವದಲ್ಲಿ ಬನ್ನಂಜೆ ಶ್ರೀ ನಾರಾಯಣ ಗುರು ಸಭಾಂಗಣದಲ್ಲಿ ಉಡುಪಿ, ಕಾಪು, ಬ್ರಹ್ಮಾವಾರ, ಕುಂದಾಪುರ ತಾಲೂಕುಗಳ ಜಂಟಿ ಸಮಾವೇಶವನ್ನು ಉದ್ಘಾಟಿಸಿ ರಾಜ್ಯ ಅಂಗನವಾಡಿ ನೌಕರರ ಸಮಸ್ಯೆಗಳ ಬಗ್ಗೆ ಮಾತನಾಡಿದರು.
ಅಂಗನವಾಡಿ ನೌಕರರು ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಿದ್ದ ಹಾಗೆ ನಮ್ಮ ಹುದ್ದೆ ಉಳಿಸಿಕೊಳ್ಳುವ ಕೆಲಸವನ್ನೂ ಮಾಡಬೇಕು ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಕೋಲಾರ | 106 ಅಕ್ರಮ ವೈದ್ಯಕೀಯ ಕ್ಲಿನಿಕ್‌ಗಳು ಪತ್ತೆ; ಕೂಡಲೇ ತೆರವುಗೊಳಿಸಲು ಜಿಲ್ಲಾಧಿಕಾರಿ ಆದೇಶ
ಸಂಘದ ಜಿಲ್ಲಾ ಅಧ್ಯಕ್ಷೆ ಭಾರತಿ, ಜಿಲ್ಲಾ ಕಾರ್ಯದರ್ಶಿ ಸುಶೀಲಾ ನಾಡ, ಜಿಲ್ಲಾ ಖಜಾಂಚಿ ಯಶೋಧ ಕೆ, ಬ್ರಹ್ಮಾವರ ತಾಲೂಕು ಮುಖಂಡರುಗಳಾದ ಜಯಲಕ್ಷ್ಮಿ, ಸರೋಜ, ಸರೋಜಿನಿ, ಉಡುಪಿ ಮುಖಂಡರುಗಳಾದ ಪುಷ್ಪ, ಪ್ರಮೀಳಾ, ಕುಂದಾಪುರ ಮುಖಂಡರುಗಳಾದ ಆಶಾ ಶೆಟ್ಟಿ, ಶಾಂತ, ಭಾಗ್ಯ, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಕವಿರಾಜ್ ಎಸ್, ಜಿಲ್ಲಾ ಖಜಾಂಚಿ ಶಶಿಧರ ಗೊಲ್ಲ ಉಪಸ್ಥಿತರಿದ್ದರು.