ವಸತಿ ಶಿಕ್ಷಣ ನಿರ್ದೇಶನಾಲಯ ಸ್ಥಾಪನೆ, ಜ್ಯೋತಿ ಸಂಜೀವಿನಿ ಅನುಷ್ಠಾನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ವಸತಿ ಶಾಲೆಗಳ ನೌಕರರ ಸಂಘದ ವತಿಯಿಂದ ಮೌನ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ನಗರದ ಅಂಬೇಡ್ಕರ್ ವೃತ್ತದಿಂದ ನೂತನ ಜಿಲ್ಲಾ ಧಿಕಾರಿ ಕಚೇರಿವರೆಗೆ ಮೆರವಣಿಗೆ ಮೂಲಕ ತೆರಳಿ ಸ್ಥಾನಿಕ ಅಧಿಕಾರಿ ಮೂಲಕ ಮುಖ್ಯಮಂತ್ರಿ ಗಳಿಗೆ ಮನವಿ ಸಲ್ಲಿಸಿದರು.
ವಸತಿ ಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ನೌಕರರಿಗೆ ಮರಣ ಮತ್ತು ನಿವೃತ್ತಿ ಉಪದಾನ ಸೌಲಭ್ಯ ಗಳನ್ನು ಒದಗಿಸಿಕೊಡಬೇಕು, ಮನೆ ಬಾಡಿಗೆ ಕಡಿತದಿಂದ ವಿನಾಯಿತಿ ನೀಡಬೇಕು, ಶೇ.10 ರಷ್ಟು ವಿಶೇಷ ಭತ್ಯೆ ಮಂಜೂರಾತಿ ನೀಡಬೇಕು ಎಂದು ಆಗ್ರಹಿಸಿದರು.ಮೇ.26 ರಿಂದ 28 ರವರೆಗೆ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಗಿದೆ ಎಂದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಮೈಮೇಲೆ ಕೆಸರು ಸಿಡಿದಕ್ಕೆ ಬಸ್ ಚಾಲಕ,ನಿರ್ವಾಹಕ ಜೊತೆ ಯುವಕನೋರ್ವ ವಾಗ್ವಾದ : ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ
29 ರಂದು ಎಲ್ಲಾ ವಸತಿ ಶಾಲೆಗಳಲ್ಲಿ ಕಪ್ಪು ಪಟ್ಟಿ ದರಿಸಿ ಕರ್ತವ್ಯ ನಿರ್ವಹಿಸಲಾಗಿದೆ, ನಿನ್ನೆ ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಲಾಯಿತು.ಇಂದು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಬೇಡಿಕೆ ಈಡೇರಿಕೆಗೆ ಸ್ಪಂದಿಸದಿದ್ದರೆ ಜೂ.2 ರಿಂದ ಜಿಲ್ಲಾಧಿಕಾರಿ ಕಚೇರಿ ಹಾಗೂ ವಸತಿ ಶಾಲೆಗಳ ಮುಂದೆ ಧರಣಿ ಸತ್ಯಾಗ್ರಹ ನಡೆಸಲಾಗುತ್ತದೆ ಎಂದು ಮನವಿಯಲ್ಲಿ ಎಚ್ಚರಿಸಿದ್ದಾರೆ.
ಈ ಸಂದರ್ಭದಲ್ಲಿ ಅಧ್ಯಕ್ಷ ಶೈಲ ನಾಯಕ, ಉಪಾಧ್ಯಕ್ಷ ರುದ್ರೇಶ, ಪ್ರಧಾನ ಕಾರ್ಯದರ್ಶಿ ಸಾಬುಗೌಡ, ಸಹ ಕಾರ್ಯದರ್ಶಿ ಪ್ರಕಾಶ ರಾಂಪೂರ, ಸಂಘಟನಾ ಕಾರ್ಯದರ್ಶಿ ಶಶಿಧರ, ಖಜಾಂಚಿ ಲಾಲ್ ಅಹ್ಮದ್ ಸೇರಿದಂತೆ ಶಿಕ್ಷಕರು ಇದ್ದರು.