ಕಲಬುರಗಿ | ಸರ್ಕಾರಿ ಶಾಲಾ ಮಕ್ಕಳಿಗೆ ಗುಣಮಟ್ಟ ಶಿಕ್ಷಣ, ಅಗತ್ಯ ಸೌಕರ್ಯ ಒದಗಿಸಿ : ಎಐಡಿಎಸ್‌ಒ

Date:

Advertisements

ಕಲಬುರಗಿಯ ಸ್ಟೇಷನ್ ಸಾವಳಗಿ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಗುಣಮಟ್ಟ ಶಿಕ್ಷಣ, ಮೂಲಭೂತ ಸೌಕರ್ಯ ನೀಡುವಂತೆ ಒತ್ತಾಯಿಸಿ ಎಐಡಿಎಸ್ಒ ವತಿಯಿಂದ ಪ್ರತಿಭಟನೆ ನಡೆಸಿ ಕ್ಷೇತ್ರ ಶಿಕ್ಷಣಾಧಿಕಾರಿ ವಿಜಯಕುಮಾರ್ ಜಮಖಂಡಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಪ್ರತಿಭಟನೆ ಉದ್ದೇಶಿಸಿ ಎಐಡಿಎಸ್ಓ ರಾಜ್ಯ ಉಪಾಧ್ಯಕ್ಷ ಹಣಮಂತ ಎಸ್.ಹೆಚ್. ಮಾತನಾಡಿ, ʼಮಕ್ಕಳಲ್ಲಿ ಮಾನವೀಯ ಮೌಲ್ಯಗಳ ಜೊತೆಗೆ ಗುಣಮಟ್ಟ ಶಿಕ್ಷಣ ತುಂಬುವುದು ಶಿಕ್ಷಣ ಇಲಾಖೆಯ ಕರ್ತವ್ಯ. ಕೆಲ ಶಾಲೆಗಳಲ್ಲಿ ಮಕ್ಕಳಿಗೆ ಓದಲು ಸರ್ಕಾರಿ ಶಾಲೆಗಳಲ್ಲಿ ಅಗತ್ಯ ಸೌಕರ್ಯಗಳಿಲ್ಲʼ ಎಂದು ದೂರಿದರು.

ಕಲಬುರಗಿ ತಾಲೂಕಿನ ಸ್ಟೇಷನ್ ಸಾವಳಗಿ ಗ್ರಾಮದಲ್ಲಿ ಹೆಚ್ಚು ದಿನಗೂಲಿ ನೌಕರರು, ರೈತ ಕಾರ್ಮಿಕರು ಹಾಗೂ ವಲಸೆ ಕಾರ್ಮಿಕರು ವಾಸವಾಗಿದ್ದಾರೆ. ಕೂಲಿಕಾರ್ಮಿಕರೇ ಅಧಿಕ ಸಂಖ್ಯೆಯಲ್ಲಿ ಓದುವ ಇಲ್ಲಿನ ಶಾಲೆಯಲ್ಲಿ ಕನಿಷ್ಠ ಮೂಲಭೂತ ಸೌಕರ್ಯಗಳಾದ ಶುದ್ಧ ಕುಡಿಯುವ ನೀರು, ಶೌಚಾಲಯ, ವಿದ್ಯುತ್ ಸಂಪರ್ಕ ಇಲ್ಲ. ಇದರಿಂದ ಪೋಷಕರು ತಮ್ಮ ಮಕ್ಕಳನ್ನು ಸೇರಿಸಲು ಹಿಂದೇಟು ಹಾಕುತ್ತಿದ್ದಾರೆ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮಕೈಗೊಂಡಿಲ್ಲʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

ಎಐಡಿಎಸ್ಓ ಕಲಬುರಗಿ ಜಿಲ್ಲಾ ಉಪಾಧ್ಯಕ್ಷೆ ಪ್ರೀತಿ ದೊಡ್ಡಮನಿ ಮಾತನಾಡಿ, ʼರಾಜ್ಯ ಸರ್ಕಾರ ಸರಕಾರಿ ಶಾಲೆಗಳಿಗೆ ಕನಿಷ್ಠ ಮೂಲಭೂತ ಸೌಕರ್ಯ ಮತ್ತು ಅಗತ್ಯ ಶಿಕ್ಷಕರನ್ನು ನೇಮಿಸುತ್ತಿಲ್ಲ. ಬಡ ವಿದ್ಯಾರ್ಥಿಗಳಿಂದ ಶಿಕ್ಷಣ ಕಸಿದುಕೊಳ್ಳುತ್ತಿರುವ ಸರ್ಕಾರ, ಇನ್ನೊಂದೆಡೆ ಶಿಕ್ಷಣವನ್ನು ಖಾಸಗೀಕರಣ ಮಾಡಲು ಹೊರಟಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಶಾಲೆಗೆ ಅಗತ್ಯ ಸೌಲಭ್ಯ ಒದಗಿಸಬೇಕುʼ ಎಂದು ಒತ್ತಾಯಿಸಿದರು .

ಪ್ರತಿಭಟನೆ ಸ್ಥಳಕ್ಕೆ ಕಲಬುರಗಿ ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ವಿಜಯಕುಮಾರ್ ಜಮಖಂಡಿ ಅವರು ಮನವಿ ಸ್ವೀಕರಿಸಿ ಮಾತನಾಡಿ, ʼಇಲ್ಲಿನ ಮಕ್ಕಳಿಗೆ ಉತ್ತಮ ಗುಣಮಟ್ಟದ ಬೋಧನೆ ನೀಡುವುದಾಗಿ ಭರವಸೆ ನೀಡಿದ ಅವರು, ಶೀಘ್ರದಲ್ಲೇ ಶುದ್ದ ಕುಡಿಯುವ ನೀರು, ವಿದ್ಯುತ್ ವ್ಯವಸ್ಥೆ ಕಲ್ಪಿಸುವುದಾಗಿ ಭರವಸೆ ನೀಡಿದರು.

ಇದನ್ನೂ ಓದಿ : ಬಿಜೆಪಿಯವರು ಕಲಬುರಗಿಗೆ ಮಣಿಕಂಠ, ಛಲವಾದಿ ನಾರಾಯಣಸ್ವಾಮಿ ಎಂಬ ಎರಡು ವೈರಸ್ ಬಿಟ್ಟಿದ್ದಾರೆ

ಸಂಘಟನೆಯ ರಾಜ್ಯ ಕಾರ್ಯದರ್ಶಿ ಅಜಯ ಕಾಮತ್, ಜಿಲ್ಲಾ ಕಾರ್ಯದರ್ಶಿ ತುಳಜರಾಮ ಎನ್.ಕೆ, ಜಿಲ್ಲಾ ಸಮಿತಿ ಸದಸ್ಯರಾದ ಸ್ಪೂರ್ತಿ, ರಾಹುಲ್, ಯುವರಾಜ್ ಹಾಗೂ ಗ್ರಾಮಸ್ಥರಾದ ಶಾಂತಕುಮಾರ್ ಬಂಡಿ ವಡ್ಡರ, ವಿನೋದಕುಮಾರಿ ಗುತ್ತೇದಾರ್, ಚಾಂದ್ ಪಟೇಲ್ ಗೌರಮ್ಮ ಉಮ್ಮರಗಿ ಶ್ರೀಮಂತ ಕುರ್ಲೆ ಶರಣಮ್ಮ ದುದನಿ ಶಾಂತಾಬಾಯಿ, ಹನುಮಂತ ಚಟ್ಟಿ ಪೀರಪ್ಪ ಜಮಾದಾರ್ ಕಾಂತಕುಮಾರ್ ಕುರ್ಲೆ ಸೇರಿ ಹಲವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X