ಕರ್ನಾಟಕದಂತೆಯೇ ಉತ್ತರ ಪ್ರದೇಶದಲ್ಲೂ ಅತೀ ದೊಡ್ಡ ಲೈಂಗಿಕ ಹಗರಣ ಬೆಳಕಿಗೆ ಬಂದಿದ್ದು, ಮೈನ್ಪುರಿಯ ಬಿಜೆಪಿ ಸ್ಥಳೀಯ ಮಹಿಳಾ ಘಟಕದ ಅಧ್ಯಕ್ಷೆಯ ಪುತ್ರನ ನೂರಾರು ಅಶ್ಲೀಲ ವಿಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ.
ಈ ವಿಡಿಯೊಗಳನ್ನು ಹೋಟೆಲ್ಗಳು ಮತ್ತು ರೆಸ್ಟೋರೆಂಟ್ಗಳಲ್ಲಿ ಮಾಡಲಾಗಿದೆ. ವಿಡಿಯೋದಲ್ಲಿ ಕಾಣುವ ಸಂತ್ರಸ್ತ ಮಹಿಳೆ ಸ್ವತಃ ಮುಂದೆ ಬಂದು ಬಿಜೆಪಿ ನಾಯಕನ ಮಗನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಅಶ್ಲೀಲ ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದಂತೆ, ಪೊಲೀಸರು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಲು ಆರಂಭಿಸಿದ್ದು, ಆತ ನಾಪತ್ತೆಯಾಗಿದ್ದಾನೆ. ವಿಡಿಯೋ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು,ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದಾರೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಡಬಲ್ ಇಂಜಿನ್ ಸರ್ಕಾರದಲ್ಲೂ ಬಿಹಾರ ಬಸವಳಿದಿದೆ
ವೈರಲ್ ವಿಡಿಯೊದಲ್ಲಿ ಕಾಣುವ ಸಂತ್ರಸ್ತ ಮಹಿಳೆ ತನ್ನ ದೂರಿನಲ್ಲಿ ಬಿಜೆಪಿ ನಾಯಕನ ಮಗ ತನಗೆ ಮಾದಕ ವಸ್ತು ನೀಡಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಲ್ಲದೆ ಅದನ್ನು ವೈರಲ್ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ.
ಹಗರಣದ ಬಗ್ಗೆ ವಿರೋಧ ಪಕ್ಷಗಳಾದ ಎಸ್ಪಿ, ಬಿಎಸ್ಪಿ ಮತ್ತು ಕಾಂಗ್ರೆಸ್ ಬಿಜೆಪಿಯ ಮೇಲೆ ಆಕ್ರೋಶ ವ್ಯಕ್ತಪಡಿಸಿವೆ. ಈ ವಿಡಿಯೋ ಜೊತೆ ಇತರ ಬಿಜೆಪಿ ನಾಯಕರ ಲೈಂಗಿಕ ಹಗರಣಗಳನ್ನು ಒಟ್ಟುಗೂಡಿಸಿ ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.