ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯುವ ಮೂಲಕ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್ ಮಾರ್ಗದರ್ಶನ ನೀಡಿದರು.
ಜಿಲ್ಲೆಯ ಹಿರಿಯೂರಿನ ತನ್ಯಾಸಿ ಗೌಂಡರ್ ಕಲ್ಯಾಣಮಂಟಪದಲ್ಲಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಶಾಖೆ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ʼತಾಲೂಕಿನ ಶಿಕ್ಷಕರಿಗೆ ಶೈಕ್ಷಣಿಕ ಕಾರ್ಯಾಗಾರ ಮತ್ತು ಶಿಕ್ಷಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರʼ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
“ಪ್ರಸಕ್ತ ವರ್ಷದಲ್ಲಿ ತಾಲೂಕಿನ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ 26 ಕೋಟಿ ರೂಪಾಯಿ ಅನುದಾನ ನೀಡಲಾಗುವುದು. ನನ್ನ ಅಧಿಕಾರದ ಅವಧಿಯಲ್ಲಿ ಕುಡಿಯುವ ನೀರು, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಶಿಕ್ಷಕರ ಸಂಘದ ಸೇವಾ ಕೇಂದ್ರ ನಿರ್ಮಾಣಕ್ಕೆ ಸಹಕಾರ ನೀಡಲಾಗುವುದು” ಎಂದು ತಿಳಿಸಿದರು.
ನಿವೃತ್ತ ನ್ಯಾಯಾಧೀಶ ಎಚ್ ಬಿಲ್ಲಪ್ಪ ಮಾತನಾಡಿ, “ಶಿಕ್ಷಣದ ಜೊತೆಗೆ ಮಕ್ಕಳಲ್ಲಿ ಉತ್ತಮ ಮಾನವೀಯ ಮೌಲ್ಯಗಳು ಹಾಗೂ ಉತ್ತಮ ಸಂಸ್ಕಾರ ಬೆಳೆಸಿ ಪೋಷಿಸಬೇಕು” ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ವಿಜಯನಗರ | ವೈದ್ಯರಿಲ್ಲದ ಆಸ್ಪತ್ರೆಗಳು; ಹಾವು ಕಚ್ಚಿದ ಇಬ್ಬರು ಮಹಿಳೆಯರ ಸಾವು
ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮಂಡಳಿಯ ನಿವೃತ್ತ ಅಧಿಕಾರಿ ಎಂ ರೇವಣಸಿದ್ದಪ್ಪ ಮಾತನಾಡಿ, “ಇಂದಿನ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದುಕೊಂಡು ಸಮಾಜದ ಪ್ರಜ್ಞಾವಂತ ಪ್ರಜೆಗಳಾಗಿ ಹೊರಹೊಮ್ಮಬೇಕು” ಎಂದು ಹೇಳಿದರು.
ಡಿಡಿಪಿಐ ರವಿಶಂಕರ್ ಯೋಜನಾಧಿಕಾರಿ, ಜಿಲ್ಲಾ ಯೋಜನಾಧಿಕಾರಿ ಶೈಲಜಾ, ಕ್ಷೇತ್ರ ಶಿಕ್ಷಣಾಧಿಕಾರಿ ನಾಗಭೂಷಣ್, ಡಿವೈಎಸ್‌ಪಿ ಚೈತ್ರಾ, ಮಾರುತೇಶ್, ಖಾದಿರ್, ರಮೇಶ್, ಕಂದೀಕೆರೆ ಸುರೇಶ್ ಬಾಬು, ಅಶೋಕ್, ಕಲ್ಲಟ್ಟಿ ಹರೀಶ್, ಕಾರ್ಯದರ್ಶಿ ಮಂಜುನಾಥ್, ಮಹೇಶ್ವರ ರೆಡ್ಡಿ, ಹನುಮಂತಪ್ಪ, ತಿಪ್ಪೇರುದ್ರಪ್ಪ, ಶಿವಕುಮಾರ್, ಹನುಮಂತರೆಡ್ಡಿ, ಶಿವಶಂಕರ್ ಸೇರಿದಂತೆ ಮುಖಂಡರು ಮತ್ತು ಶಿಕ್ಷಕರು ಇದ್ದರು.