‘ಆಪರೇಷನ್ ಸಿಂಧೂರ’ ಕುರಿತು ರಕ್ಷಣಾ ಸಚಿವಾಲಯವು ಪ್ರಬಂಧ ಸ್ಪರ್ಧೆಯನ್ನು ಘೋಷಿಸಿದೆ. ಜೂನ್ 1ರಿಂದ 30ರವರೆಗೆ ರಾಷ್ಟ್ರೀಯ ಪ್ರಬಂಧ ಸ್ಪರ್ಧೆ ನಡೆಯಲಿದೆ ಎಂದು ರಕ್ಷಣಾ ಸಚಿವಾಲಯ ಭಾನುವಾರ ಘೋಷಿಸಿದೆ. ಈ ಬಗ್ಗೆ ಸಚಿವಾಲಯ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.
ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕಾ ದಾಳಿ ನಡೆಸಿ 26 ಮಂದಿಯನ್ನು ಕೊಂದಿದೆ. ಇದಕ್ಕೆ ಪ್ರತೀಕಾರವಾಗಿ ಭಾರತ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿದೆ.
ಇದನ್ನು ಓದಿದ್ದೀರಾ? ‘ಆಪರೇಷನ್ ಸಿಂಧೂರ’ ಟೈಟಲ್ ನೋಂದಣಿಗೆ ಮುಗಿಬಿದ್ದ ಬಾಲಿವುಡ್ ನಿರ್ಮಾಪಕರು
ಮೇ 7ರಂದು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಒಂಬತ್ತು ಭಯೋತ್ಪಾದಕಾ ನೆಲೆಗಳ ಮೇಲೆ ದಾಳಿ ನಡೆಸಿ 100ಕ್ಕೂ ಅಧಿಕ ಉಗ್ರರನ್ನು ಹತ್ಯೆ ಮಾಡಿದೆ. ಅದಾದ ಬಳಿಕ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದ್ದು, ದಾಳಿ ಪ್ರತಿದಾಳಿ ನಡೆದಿದೆ. ಸದ್ಯ ಕದನ ವಿರಾಮ ಒಪ್ಪಂದ ಮಾಡಿಕೊಳ್ಳಲಾಗಿದೆ.
📢 Ministry of Defence invites young minds to make their voices heard! 🇮🇳✍️
— Ministry of Defence, Government of India (@SpokespersonMoD) June 1, 2025
Participate in the MoD & @mygovindia bilingual essay contest on#OperationSindoor – Redefining India’s Policy Against #Terrorism.
🏆 Top 3 winners will receive Rs 10,000 each and get an exclusive chance… pic.twitter.com/p2Kz0l3txG
ಆಪರೇಷನ್ ಸಿಂಧೂರ: ವಿಜೇತರಿಗೆ ಬಹುಮಾನವೇನು?
ಆಪರೇಷನ್ ಸಿಂಧೂರದ ಬಗ್ಗೆ ಪ್ರಬಂಧ ಸ್ಪರ್ಧೆಯನ್ನು ರಕ್ಷಣಾ ಸಚಿವಾಲಯ ಘೋಷಿಸಿದೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ. “ಅಗ್ರ ಮೂರು ವಿಜೇತರಿಗೆ ತಲಾ 10,000 ರೂ. ನಗದು ಬಹುಮಾನವನ್ನು ನೀಡಲಾಗುವುದು ಮತ್ತು ದೆಹಲಿಯ ಕೆಂಪು ಕೋಟೆಯಲ್ಲಿ ನಡೆಯುವ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಲು ವಿಶೇಷ ಅವಕಾಶವನ್ನು ನೀಡಲಾಗುವುದು” ಎಂದು ಸಚಿವಾಲಯ ತಿಳಿಸಿದೆ.
ದ್ವಿಭಾಷಾ ಪ್ರಬಂಧ ಸ್ಪರ್ಧೆ ಇದಾಗಿದೆ. ಹಿಂದಿ ಮತ್ತು ಇಂಗ್ಲೀಷ್‌ನಲ್ಲಿ ಪ್ರಬಂಧ ಬರೆಯಬಹುದಾಗಿದೆ. ಓರ್ವ ವ್ಯಕ್ತಿಯು ಹಿಂದಿ ಅಥವಾ ಇಂಗ್ಲೀಷ್- ಯಾವುದಾದರೂ ಒಂದು ಭಾಷೆಯಲ್ಲಿ ಮಾತ್ರ ಪ್ರಬಂಧ ಸ್ಪರ್ಧೆಯಲ್ಲಿ ಭಾಗಿಯಾಗಲು ಅವಕಾಶ ಪಡೆಯುತ್ತಾರೆ.
