ಯುವತಿ ಮೇಲೆ ಬಸ್​ ಹತ್ತಿಸಲು ಯತ್ನಿಸಿದ ಬಿಎಂಟಿಸಿ ಬಸ್​ ಚಾಲಕ ಅಮಾನತು

Date:

Advertisements

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಚಾಲಕ ಯುವತಿ ಮೇಲೆ ಬಸ್​ ಹತ್ತಿಸಲು ಯತ್ನಿಸಿರುವ ಘಟನೆ ಕಸ್ತೂರ್‌ಬಾ ರಸ್ತೆಯ ಕ್ಷೀನ್ಸ್​ ಜಂಕ್ಷನ್​ (ಎಂ.ಜಿ.ರಸ್ತೆ) ಬಳಿ ನಡೆದಿದೆ. ಮೇ 23ರ ಸಂಜೆ 5.40ಕ್ಕೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಬಿಎಂಟಿಸಿ ಬಸ್​ ಚಾಲಕ ಮತ್ತು ಯುವತಿ ನಡುವೆ ಗಲಾಟೆಯಾಗಿದೆ. ಈ ಹಿನ್ನೆಲೆಯಲ್ಲಿ ಕ್ಷೀನ್ಸ್​ ಜಂಕ್ಷನ್​ನಲ್ಲಿ ಕಾರಿನಿಂದ ಇಳಿದ ಯುವತಿ ಬಿಎಂಟಿಸಿ ಬಸ್ ಚಾಲಕನನ್ನು ಪ್ರಶ್ನೆ ಮಾಡುತ್ತಿದ್ದರು. ಆದರೆ, ಚಾಲಕ ಯುವತಿಯ ಮೇಲೆ​ ಬಸ್​ ನುಗ್ಗಿಸಿದ್ದಾರೆ.

ಯುವತಿ ಕೂದಲೆಳೆ ಅಂತರದಲ್ಲಿ ತಪ್ಪಿಸಿಕೊಂಡಿದ್ದಾರೆ. ಸ್ವಲ್ಪ ಯಾಮಾರಿದ್ದರೂ ಯುವತಿಯ ಜೀವಕ್ಕೆ ಕುತ್ತು ಬರುತ್ತಿತ್ತು. ಚಾಲಕನ ಕೃತ್ಯ ಕಂಡು ಜನರು ಬೆಚ್ಚಿಬಿದ್ದಿದ್ದರು. ಇನ್ನು, ಯುವತಿಯ ಮೇಲೆ ಬಸ್​ ಹತ್ತಿಸಲು ಯತ್ನಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

Advertisements

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಡಬಲ್ ಇಂಜಿನ್ ಸರ್ಕಾರದಲ್ಲೂ ಬಿಹಾರ ಬಸವಳಿದಿದೆ

ಯುವತಿ ಮೇಲೆ ಬಿಎಂಟಿಸಿ ಬಸ್ ಹತ್ತಿಸಲು ಮುಂದಾಗಿದ್ದ ಚಾಲಕ ಪ್ರಶಾಂತ್ ಅವರನ್ನು ಅಮಾನತುಗೊಳಿಸಲಾಗಿದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ಮೇರೆಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

ಬೆಂಗಳೂರು ಮೆಟ್ರೋ: ನಾಳೆ ಹಳದಿ ಮಾರ್ಗದಲ್ಲಿ ಬೆಳಿಗ್ಗೆ 5ಕ್ಕೆ ಸಂಚಾರ ಆರಂಭ

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್‌ ಲಿಮಿಟೆಡ್‌ (ಬಿಎಂಆರ್‌ಸಿಎಲ್‌) ಹಳದಿ ಮಾರ್ಗದಲ್ಲಿ ಸೋಮವಾರ...

Download Eedina App Android / iOS

X