ಜೆಡಿಎಸ್‌ನವರು ತಮ್ಮ ನಿಲುವು ಏನು ಎಂಬುದನ್ನು ಕಳೆದ ವರ್ಷವೇ ಸಾಬೀತುಪಡಿಸಿದ್ದಾರೆ. ಸರ್ವಾಧಿಕಾರಿ ಧೋರಣೆ ವಿರೋಧಿಸುವ ಯಾರು ಬೇಕಾದರೂ ನಮ್ಮ ಕೈ ಜೋಡಿಸಬಹುದು. ಜೆಡಿಎಸ್‌ಗೆ ಪ್ರತ್ಯೇಕವಾಗಿ ಆಹ್ವಾನ ನೀಡುವ ಅಗತ್ಯತೆ ಇಲ್ಲ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಹೇಳಿದ್ದಾರೆ.
ವಿರೋಧ ಪಕ್ಷಗಳ ಸಭೆ ಹಿನ್ನೆಲೆಯಲ್ಲಿ ಖಾಸಗಿ ಹೋಟೆಲ್‌ನಲ್ಲಿ ಮಾತನಾಡಿರುವ ಅವರು, “ವಿಪಕ್ಷಗಳ ಒಕ್ಕೂಟಕ್ಕೆ ನಾಯಕರು ಯಾರು ಎಂಬ ಬಗ್ಗೆ ಈಗಲೇ ಚಿಂತಿಸಬೇಡಿ. ದೇಶದ ಪರಿಸ್ಥಿತಿಯ ಬಗ್ಗೆ ಯೋಚನೆ ಮಾಡೋಣ” ಎಂದಿದ್ದಾರೆ.
ಸೋನಿಯಾ ಗಾಂಧಿ ಆಗಮನ ನಮಗೆ ಶಕ್ತಿ ತುಂಬಿದೆ: ಡಿಕೆಶಿ
ವಿರೋಧ ಪಕ್ಷಗಳ ಸಭೆಗೆ ಸೋನಿಯಾ ಗಾಂಧಿ ಭಾಗಿಯಾಗುತ್ತಿರುವುದು ನಮಗೆ ಮತ್ತಷ್ಟು ಶಕ್ತಿ ಬಂದಿದೆ. ಇದೊಂದು ದೊಡ್ಡ ಪ್ರಾರಂಭ. ಎಲ್ಲ ವಿರೋಧ ಪಕ್ಷಗಳು ಒಂದಾಗಿರುವುದು ಯಶಸ್ವಿ ದಿನ. ದೇಶದ ಭವಿಷ್ಯವನ್ನು ಪುನರ್ ರೂಪಿಸುವುದು ಹೇಗೆ ಎಂಬ ಬಗ್ಗೆ ಚರ್ಚೆ ಮಾಡಲಿದ್ದೇವೆ” ಎಂದು ಡಿಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಿಳಿಸಿದರು.
ಆಡಳಿತ ಪಕ್ಷಕ್ಕೆ ಭಯ: ಜೈರಾಮ್
“ಸೋಮವಾರ ರಾಷ್ಟ್ರೀಯ ನಾಯಕರಿಗೆ ಔತಣಕೂಟ ಇದೆ. ನಾಳೆ ಬೆಳಗ್ಗೆ ಅಧಿಕೃತ ಸಭೆ ನಡೆಯಲಿದೆ. ಇದರಿಂದ ಪ್ರಧಾನಿ ಮೋದಿ ಹಾಗೂ ಆಡಳಿತ ಪಕ್ಷಕ್ಕೆ ಭಯ ಶುರುವಾಗಿದೆ. ನಮ್ಮ ಪಟ್ನಾ ಸಭೆ ಬಳಿಕ ಪ್ರಧಾನಿಗಳಿಗೆ ಎನ್‌ಡಿಎ ಮೈತ್ರಿಕೂಟದ ನೆನಪಾಗಿದೆ. ಇಷ್ಟು ದಿನ ಎನ್‌ಡಿಎ ನೆನಪೇ ಇರಲಿಲ್ಲ” ಎಂದು ಕಾಂಗ್ರೆಸ್‌ನ ನಾಯಕ ಜೈರಾಮ್ ರಮೇಶ್ ಲೇವಡಿ ಮಾಡಿದ್ದಾರೆ.