ಅಬ್ದುಲ್ ರಹ್ಮಾನ್ ಹತ್ಯೆ ಖಂಡಿಸಿ ಟ್ವಿಟ್ಟರ್ ಅಭಿಯಾನ: ನಿರೀಕ್ಷೆಗೂ ಮೀರಿ ಉತ್ತಮ ಪ್ರತಿಕ್ರಿಯೆ

Date:

Advertisements

ಸಂಘಪರಿವಾರದ ಕಾರ್ಯಕರ್ತರು ಎನ್ನಲಾದ ದುಷ್ಕರ್ಮಿಗಳ ತಂಡದ ತಲವಾರು ದಾಳಿಗೆ ಬಲಿಯಾದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಯುವಕ ಅಬ್ದುಲ್ ರಹ್ಮಾನ್ ಹತ್ಯೆ ಖಂಡಿಸಿ ಶನಿವಾರ ಸಂಜೆ ಐದು ಗಂಟೆಗೆ ಹಮ್ಮಿಕೊಂಡಿದ್ದ ಟ್ವಿಟ್ಟರ್(ಈಗಿನ ಎಕ್ಸ್) ಅಭಿಯಾನಕ್ಕೆ ನಿರೀಕ್ಷೆಗೂ ಮೀರಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

‘ಕೋಸ್ಟಲ್ ಬ್ರದರ್ಸ್’ನಡಿ ಈ ಟ್ವಿಟ್ಟರ್ ನಡೆದಿದೆ. ಈ ಅಭಿಯಾನದಡಿ 20 ಸಾವಿರಕ್ಕೂ ಹೆಚ್ಚು ಟ್ವೀಟ್‌ಗಳನ್ನು ಮಾಡಲಾಗಿದ್ದು, 12 ಲಕ್ಷಕ್ಕೂ ಹೆಚ್ಚು ಮಂದಿಗೆ ಇದು ತಲುಪುವ ಮೂಲಕ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. #CoastalKarnataka, #MuslimsLivesMatters ಹ್ಯಾಷ್‌ಟ್ಯಾಗ್‌ನಡಿ ಟ್ವಿಟ್ಟರ್ ಟ್ರೆಂಡಿಂಗ್ ಆಗಿದೆ.

ಇದನ್ನು ಓದಿದ್ದೀರಾ? ಬಂಟ್ವಾಳ | ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣ: ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

Advertisements

ಪಿಕ್‌ಅಪ್ ಚಾಲಕ ಅಬ್ದುಲ್ ರಹ್ಮಾನ್ ಎಂಬವರ ಕೊಲೆ ಮತ್ತು ಅವರ ಜೊತೆಯಿದ್ದ ಕಲಂದರ್ ಶಾಫಿಯ ಕೊಲೆ ಯತ್ನವನ್ನು ಖಂಡಿಸಿ, ಮುಸ್ಲಿಂ ಎಂಬ ಏಕೈಕ ಕಾರಣಕ್ಕೆ ಭೀಕರವಾಗಿ ಕೊಲೆಗೈದ ಕೋಮುವಾದಿ ಸಂಘಟನೆಯ ಕಾರ್ಯಕರ್ತರನ್ನು ಬಂಧಿಸುವ ಜೊತೆಗೆ ಈ ಕೊಲೆಗೆ ಪ್ರಚೋದನೆ ನೀಡಿದ ನಾಯಕರನ್ನೂ ಬಂಧಿಸುವಂತೆ ಒತ್ತಾಯಿಸಿ ಈ ಟ್ವಿಟ್ಟರ್ ಅಭಿಯಾನ ನಡೆಸಲಾಗಿದೆ.

ಕೇವಲ ಮುಸ್ಲಿಂ ಎಂಬ ಕಾರಣಕ್ಕೆ ಈ ಹತ್ಯೆ ನಡೆದಿದೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ದ್ವೇಷ ಬಿತ್ತಿದವರ ವಿರುದ್ಧ ಕ್ರಮ ಯಾವಾಗ ಎಂದು ನೆಟ್ಟಿಗರು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಇಂತಹ ಕೋಮುವಾದಕ್ಕೆ ಕಡಿವಾಣ ಹಾಕಲೇಬೇಕು ಎಂದು ಟ್ವಿಟ್ಟಿಗರು ಒತ್ತಾಯಿಸಿದ್ದಾರೆ.

twitter

ಇದನ್ನು ಓದಿದ್ದೀರಾ? ದ.ಕ.ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರವು ವಿಶೇಷ ಗಮನಹರಿಸಲಿ: ಜಮಾಅತೆ ಇಸ್ಲಾಮೀ ಹಿಂದ್ ಆಗ್ರಹ

ಹಿರಿಯ ಪತ್ರಕರ್ತ ರವೀಶ್ ಕುಮಾರ್, ಅಭಿಸಾರ್ ಶರ್ಮ, ಯೂಟ್ಯೂಬರ್ ಧ್ರುವ್ ರಾಟಿ, ಆಲ್ಟ್‌-ನ್ಯೂಸ್‌ನ ಮೊಹಮ್ಮದ್ ಝುಬೈರ್ ಸೇರಿದಂತೆ ಹಲವು ಮಂದಿ ಈ ಟ್ವಿಟ್ಟರ್ ಅಭಿಯಾನದಲ್ಲಿ ಟ್ಯಾಗ್ ಮಾಡಲಾಗಿದೆ. ಈ ಅಭಿಯಾನಕ್ಕೆ ಬೆಂಬಲ ನೀಡಿರುವ ಝುಬೈರ್ ಅವರು ಪೋಸ್ಟ್‌ಗಳನ್ನು ರೀಪೋಸ್ಟ್ ಮಾಡಿದ್ದಾರೆ.

ಲೋಕಸಭೆ ವಿಪಕ್ಷ ನಾಯಕ ರಾಹುಲ್​ ಗಾಂಧಿ, ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ (ಸಂಘಟನೆ) ಮತ್ತು ರಣದೀಪ್ ಸಿಂಗ್ ಸುರ್ಜೆವಾಲಾ (ಕರ್ನಾಟಕ ಉಸ್ತುವಾರಿ), ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಪರಮೇಶ್ವರ್, ಸ್ಪೀಕರ್ ಯು.ಟಿ.ಖಾದರ್, ಸಚಿವ ಪ್ರಿಯಾಂಕಾ ಖರ್ಗೆ ಸೇರಿದಂತೆ ಹಲವು ಮಾಧ್ಯಮಗಳನ್ನು ಟ್ಯಾಗ್ ಮಾಡಲಾಗಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Download Eedina App Android / iOS

X