ಬಳ್ಳಾರಿ | ಉದ್ಘಾಟನೆಯಾಗಿ ವರ್ಷ ಕಳೆದರೂ ಆರಂಭವಾಗದ ನೂತನ ಜಿಲ್ಲಾ ನ್ಯಾಯಾಲಯ

Date:

Advertisements

ರಾಜ್ಯದಲ್ಲಿ ಎರಡನೇ ಅತಿದೊಡ್ಡ ಜಿಲ್ಲಾ ನ್ಯಾಯಾಲಯ ಎಂಬ ಖ್ಯಾತಿ ಪಡೆದಿರುವ ಬಳ್ಳಾರಿಯ ನೂತನ ಜಿಲ್ಲಾ ನ್ಯಾಯಾಲಯ ಸಂಕೀರ್ಣ ಕಟ್ಟಡ ಉದ್ಘಾಟನೆ ಆಗಿ ವರ್ಷ ಕಳೆದರೂ ಕೂಡ ಹಳೆ ನ್ಯಾಯಾಲಯದ ಕಚೇರಿ ಮತ್ತು ಸಿಬ್ಬಂದಿ ಈವರೆಗೆ ನೂತನ ಕಟ್ಟಡಕ್ಕೆ ಸ್ಥಳಾಂತರವಾಗಿಲ್ಲ.

ನಗರದ ತಾಳೂರು ರಸ್ತೆಯಲ್ಲಿ ಲೋಕೋಪಯೋಗಿ ಇಲಾಖೆ ನೇತೃತ್ವದಲ್ಲಿ ಅಂದಾಜು 121 ಕೋಟಿ ರೂಪಾಯಿ ವೆಚ್ಚದಲ್ಲಿ ಸಂಪೂರ್ಣ ಹವಾ ನಿಯಂತ್ರಿತ ಜಿಲ್ಲಾ ನ್ಯಾಯಾಲಯ ನಿರ್ಮಾಣವಾಗಿದ್ದು, ಸಂಕೀರ್ಣ ಕಟ್ಟಡವನ್ನು 2022ರ ಜುಲೈ 26ರಂದು ರಾಜ್ಯದ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶ ರೀತುರಾಜ್ ಅವರು ಉದ್ಘಾಟಿಸಿದ್ದರು.

ಬಳ್ಳಾರಿ ನ್ಯಾಯಾಲಯ
ಬಳ್ಳಾರಿ ಜಿಲ್ಲಾ ನ್ಯಾಯಾಲಯ

ನ್ಯಾಯಾಲಯದ ಸಂಕೀರ್ಣ ಕಟ್ಟಡವನ್ನು ಪೂರ್ಣಗೊಳಿಸಲು ನಿಗದಿತ ಹಣಕ್ಕಿಂತ ಹೆಚ್ಚಿನ ಅನುದಾನ ಖರ್ಚು ಮಾಡಿದ್ದು, ಸರ್ಕಾರದಿಂದ ಅನುದಾನ ಬಿಡುಗಡೆ ಆದ ನಂತರ ಕಟ್ಟಡ ನಿರ್ಮಾಣಕ್ಕೆ ಮುಂದಾಗುತ್ತೇವೆಂದು ಹೇಳಿ ಗುತ್ತಿಗೆದಾರರು ಕಾಮಗಾರಿ ನಿಲ್ಲಿಸಲಾಗಿದೆ ಎಂದು ಹೇಳಲಾಗುತ್ತಿದೆ.

Advertisements

ಈ ಸುದ್ದಿ ಓದಿದ್ದೀರಾ? ತುಮಕೂರಿನಲ್ಲಿ ಐಫೋನ್ ತಯಾರಿಕಾ ಘಟಕ: 8,800 ಕೋಟಿ ರೂ. ಹೂಡಿಕೆ, 14,000 ಉದ್ಯೋಗ ಸೃಷ್ಟಿ

“ನೂತನ ಜಿಲ್ಲಾ ನ್ಯಾಯಾಲಯ ಕಟ್ಟಡದ ಕೆಲಸ ಪ್ರಗತಿಯಲ್ಲಿದ್ದು, ನ್ಯಾಯಾಲಯದ ಕಟ್ಟಡಕ್ಕೆ ಇನ್ನೂ ವಿದ್ಯುತ್ ಸಂಪರ್ಕ ಸೌಲಭ್ಯ ಒದಗಿಸಿಲ್ಲ. ಕಚೇರಿಗಳಿಗೆ ಬೇಕಾಗಿರುವ ಅಗತ್ಯ ಸಲಕರಣೆಗಳು ಹಳೆ ಕಟ್ಟಡದಲ್ಲಿರುವ ಪರಿಣಾಮ ವರ್ಷ ಕಳೆದರೂ ನ್ಯಾಯಾಲಯದ ಇಲಾಖೆ ಸಿಬ್ಬಂದಿ ಸ್ಥಳಾಂತರಕ್ಕೆ ಮುಂದಾಗುತ್ತಿಲ್ಲ” ಎಂದು ಹಿರಿಯ ವಕೀಲ ಕೋಟೇಶ್ವರ ರಾವ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ವರ್ಷ ಕಳೆದರೂ ನೂತನ ಜಿಲ್ಲಾ ನ್ಯಾಯಾಲಯ ಆರಂಭವಾಗಿಲ್ಲ. ಆವರಣದಲ್ಲಿ ಸ್ವಚ್ಚತೆ ಕೊರತೆ ಇದ್ದು, ಗಿಡ ಗಂಟೆಗಳು ಬೆಳೆದಿವೆ. ಅದನ್ನೂ ಕೂಡ ಸ್ವಚ್ಛ ಮಾಡುತ್ತಿಲ್ಲ” ಎಂದು ಸಾರ್ವಜನಿಕರು ಹೇಳಿದ್ದಾರೆ.

ಬಳ್ಳಾರಿ ಜಿಲ್ಲಾ ವಾಲಂಟಿಯರ್‌ ರಾಧಾಕೃಷ್ಣ ಅವರ ಮಾಹಿತಿ ಆಧರಿಸಿದ ವರದಿ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X