ಸಾಲಿಡಾರಿಟಿ ಯೂತ್ ಮೂವ್ಮೆಂಟ್ ವತಿಯಿಂದ ಜೂನ್ 1 ರಿಂದ 10ರವರೆಗೆ ‘ಬಕ್ರಿದ್ ವೇಳೆ ಸ್ವಚ್ಛತೆ ಕಾಪಾಡೋಣ’ ಎಂಬ ಶೀರ್ಷಿಕೆಯಡಿ ಬೆಂಗಳೂರಿನಲ್ಲಿ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಈ ಅಭಿಯಾನದ ಉದ್ದೇಶ ಜೂನ್ 5ರಂದು ಆಚರಿಸಲಾಗುವ ಪರಿಸರ ದಿನಾಚರಣೆಯ ಅಂಗವಾಗಿ, ಹಬ್ಬಗಳ ಆಚರಣೆಯ ಸಮಯದಲ್ಲಿ ಪರಿಸರಕ್ಕೆ ಹಾನಿಯಿಲ್ಲದ ರೀತಿಯಲ್ಲಿ ಹಾಗೂ ಸ್ವಚ್ಛತೆ ಕಾಪಾಡುತ್ತ ಹಬ್ಬವನ್ನು ಆಚರಿಸುವ ಸಂದೇಶವನ್ನು ಹಂಚಲಾಗುವುದು ಎಂದು ತಿಳಿಸಿದೆ.
ಅಭಿಯಾನದ ಮುಖ್ಯ ಅಂಶಗಳು: ಮಸೀದಿಗಳಲ್ಲಿ ಪೋಸ್ಟರ್ ಅಂಟಿಸುವುದು ಮತ್ತು ಜುಮಾ ಖುತ್ಬಾ ನಂತರ ಈ ಬಗ್ಗೆ ಘೋಷಣೆ ಮಾಡುವುದು, ಸಾಮಾಜಿಕ ಜಾಲತಾಣಗಳಲ್ಲಿ ಪರಿಸರ ಸಂರಕ್ಷಣೆ ಹಾಗೂ ಸ್ವಚ್ಛತೆಯ ಕುರಿತು ಪ್ರಭಾವಶಾಲಿ ವ್ಯಕ್ತಿಗಳ ಸಂದೇಶವಿರುವ ವಿಡಿಯೋ ಮತ್ತು ಪೋಸ್ಟರ್‌ಗಳನ್ನು ಹಂಚುವುದು, ಬಕ್ರೀದ್ ಸಮಯದಲ್ಲಿ ಬಿಬಿಎಂಪಿಯ ಸಹಕಾರದೊಂದಿಗೆ ತ್ಯಾಜ್ಯ ಸಂಗ್ರಹಣೆ ಹಾಗೂ ಸ್ವಚ್ಛತೆಯ ಕಾಯಕ, ದೇಶದಲ್ಲಿ ನಡೆಯುವಂತಹ ಎಲ್ಲ ಹಬ್ಬಗಳಲ್ಲಿ ಪರಿಸರ ಮತ್ತು ಸ್ವಚ್ಛತೆಗೆ ಪ್ರಾಮುಖ್ಯತೆ ನೀಡಬೇಕೆಂಬ ಸಂದೇಶವನ್ನು ಜನಸಾಮಾನ್ಯರಲ್ಲಿ ಹರಡುವ ಉದ್ದೇಶದಿಂದ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಈ ಸುದ್ದಿ ಓದಿದ್ದೀರಾ? ವಿಜಯಪುರ | ಪ್ರತಿಯೊಬ್ಬರೂ ಒಂದೊಂದು ಸಸಿ ನೆಟ್ಟು ಕಾಪಾಡಿ, ಪರಿಸರ ಸಂರಕ್ಷಿಸಿ: ಸಂಸದ ರಮೇಶ ಜಿಗಜಿಣಗಿ
ಈ ಅಭಿಯಾನದ ಪೋಸ್ಟರ್ ಬಿಡುಗಡೆ ಜೂನ್ 1ರಂದು ಬೆಂಗಳೂರಿನಲ್ಲಿ ನಡೆಯಿತು.
ಈ ಕಾರ್ಯಕ್ರಮದಲ್ಲಿ ಜೆಐಹೆಚ್ ರಾಷ್ಟ್ರೀಯ ಉಪಾಧ್ಯಕ್ಷ ಮೌಲಾನ ವಲಿವುಲ್ಲಾ ಸಯೀದಿ ಫಲಾಹಿ, ರಾಜ್ಯಾಧ್ಯಕ್ಷರ ಡಾ. ಸಾದ್ ಬೆಳ್ಗಾಮಿ ಹಾಗೂ ರಾಜ್ಯ ಕಾರ್ಯದರ್ಶಿಗಳು, ಸೋಲಿಡಾರಿಟಿ ಯೂತ್ ಮೂವ್ಮೆಂಟ್ ರಾಜ್ಯಾಧ್ಯಕ್ಷ ಡಾ.ನಸೀಮ್ ಅಹ್ಮದ್, ಬೆಂಗಳೂರು ನಗರಾಧ್ಯಕ್ಷ ಸುಹೈಲ್ ಇದ್ದರು.