ಜೈಶಂಕರ್, ಡೆರಿಕ್ ಓಬ್ರಿಯಾನ್‌ ಸೇರಿ ರಾಜ್ಯಸಭೆಗೆ ಅವಿರೋಧ ಆಯ್ಕೆಯಾಗಲಿರುವ 11 ಮಂದಿ

Date:

Advertisements

ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ತೃಣಮೂಲ ಕಾಂಗ್ರೆಸ್ ನಾಯಕ ಡೆರಿಕ್ ಓಬ್ರಿಯಾನ್ ಸೇರಿದಂತೆ 11 ನಾಯಕರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ.

ಜುಲೈ 24 ರಂದು ಪಶ್ಚಿಮ ಬಂಗಾಳದಲ್ಲಿ ಆರು, ಗುಜರಾತ್‌ನಲ್ಲಿ ನಾಲ್ಕು ಮತ್ತು ಗೋವಾದಲ್ಲಿ ಒಂದು ಸ್ಥಾನಕ್ಕೆ ಮತದಾನ ನಡೆಯುವುದಿಲ್ಲ. ಆರು ತೃಣಮೂಲ ಕಾಂಗ್ರೆಸ್ ಮತ್ತು ಐದು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ.

ಅವಿರೋಧವಾಗಿ ಆಯ್ಕೆಯಾದ ಇತರ ತೃಣಮೂಲ ಕಾಂಗ್ರೆಸ್ ನಾಯಕರೆಂದರೆ ಸುಖೇಂದು ಶೇಖರ್ ರಾಯ್, ಡೋಲಾ ಸೇನ್, ಸಾಕೇತ್ ಗೋಖಲೆ, ಸಮೀರುಲ್ ಇಸ್ಲಾಂ ಮತ್ತು ಪ್ರಕಾಶ್ ಬಾರಿಕ್. ಬಿಜೆಪಿಯ ಎಸ್ ಜೈಶಂಕರ್ ಗುಜರಾತಿನಿಂದ ಸ್ಪರ್ಧಿಸಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿ, ಜೆಡಿಎಸ್ ಮತ್ತು ಪ್ರಾದೇಶಿಕ ಅಸ್ಮಿತೆ

245 ಸದಸ್ಯರ ರಾಜ್ಯಸಭೆಯಲ್ಲಿ ಏಳು ಸ್ಥಾನಗಳು ಜುಲೈ 24ರ ನಂತರ ತೆರವಾಗಲಿವೆ. ಜಮ್ಮು ಮತ್ತು ಕಾಶ್ಮೀರದಲ್ಲಿ ನಾಲ್ಕು ಸ್ಥಾನಗಳು, ಎರಡು ನಾಮನಿರ್ದೇಶಿತ ಸ್ಥಾನಗಳು ಮತ್ತು ಉತ್ತರ ಪ್ರದೇಶದಲ್ಲಿ ಒಂದು ಸ್ಥಾನ ಖಾಲಿ ಇರಲಿದೆ.

ಆಡಳಿತಾರೂಢ ಬಿಜೆಪಿಯು ರಾಜ್ಯಸಭೆಯಲ್ಲಿ ಬಹುಮತವಿಲ್ಲದ 93 ಸದಸ್ಯರನ್ನು ಹೊಂದಿದೆ. ಇದರಿಂದ ರಾಜ್ಯಸಭೆಯಲ್ಲಿ ಒಟ್ಟು ಸ್ಥಾನಗಳು 238ಕ್ಕೆ ಇಳಿಕೆಯಾಗಲಿದ್ದು, ಬಹುಮತಕ್ಕೆ ಬೇಕಾದ ಸಂಖ್ಯೆ 120 ಅಗತ್ಯವಿದೆ.

ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು 105 ಸದಸ್ಯರನ್ನು ಹೊಂದಿದ್ದು, ಐವರು ನಾಮನಿರ್ದೇಶಿತ ಮತ್ತು ಇಬ್ಬರು ಸ್ವತಂತ್ರ ಸಂಸದರ ಬೆಂಬಲವನ್ನೂ ಬಿಜೆಪಿ ಗೆಲ್ಲಲಿದೆ. ಹಾಗಾಗಿ ಸರ್ಕಾರದ ಪರವಾಗಿ ಇರುವ ಸದಸ್ಯರ ಸಂಖ್ಯೆ 112 ಆಗಲಿದ್ದು, ಬಹುಮತಕ್ಕೆ ಎಂಟು ಸ್ಥಾನಗಳು ಕಡಿಮೆ ಇರಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X