ವಿರಾಟ್ ಕೊಹ್ಲಿ ಮಾಲೀಕತ್ವದ ಬೆಂಗಳೂರಿನ ಪಬ್ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲು

Date:

Advertisements

ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಮಾಲೀಕತ್ವದ ಬೆಂಗಳೂರಿನಲ್ಲಿರುವ ಒನ್ 8 ಕಮ್ಯೂನ್ ಪಬ್ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ನಿಯಮ ಉಲ್ಲಂಘಿಸಿ ಕಾರ್ಯನಿರ್ವಹಿಸಿದ ಆರೋಪದ ಮೇಲೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಎಂಜಿ ರಸ್ತೆ ಸಮೀಪ ಚಿನ್ನಸ್ವಾಮಿ ಸ್ಟೇಡಿಯಂ ಎದುರಿರುವ ರತ್ನಮ್ ಕಾಂಪ್ಲೆಕ್ಸ್​​ನ 6ನೇ ಮಹಡಿಯಲ್ಲಿ ಒನ್ 8 ಕಮ್ಯೂನ್ ಪಬ್ ಇದೆ. ಈ ಹಿಂದೆ 2024ರ ಜುಲೈ ತಿಂಗಳಲ್ಲಿಯೂ ಈ ಪಬ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಹಿಂದೆ ನಿಗದಿತ ಅವಧಿಗಿಂತಲೂ ಅಧಿಕ ಅವಧಿಯವರೆಗೂ ತೆರೆದಿರುವ ಕಾರಣ ಎಫ್‌ಐಆರ್‌ ದಾಖಲಿಸಲಾಗಿತ್ತು.

ಇದನ್ನು ಓದಿದ್ದೀರಾ? ಬೆಂಗಳೂರು | ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ವಿರುದ್ಧ ಎಫ್ಐಆರ್ ದಾಖಲು

Advertisements

ಅದಕ್ಕೂ ಮುನ್ನ ಬಿಬಿಎಂಪಿ ನೋಟಿಸ್ ನೀಡಿತ್ತು. ಅಗ್ನಿ ಸುರಕ್ಷತೆ ಅಳವಡಿಸಿಲ್ಲ ಮತ್ತು ಅಗ್ನಿಶಾಮಕ ದಳದ ಪ್ರಮಾಣ ಪತ್ರ ಪಡೆದಿಲ್ಲ ಎಂದಿರುವ ಬಿಬಿಎಂಪಿ, ಸುರಕ್ಷತಾ ಕ್ರಮಗಳನ್ನು ಅಳವಡಿಸದ ಕಾರಣ ಒನ್ 8 ಕಮ್ಯೂನ್​ ಪಬ್​ ಕಾನೂನು ಉಲ್ಲಂಘನೆ ಮಾಡಿದೆ ಎಂದು ನೋಟಿಸ್ ನೀಡಿತ್ತು.

ಇದೀಗ ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳು(ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ, ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ನಿಯಂತ್ರಣ)ಕಾಯ್ದೆ (COTPA Act) ಅಡಿ ಪ್ರಕರಣ ದಾಖಲಿಸಲಾಗಿದೆ.

ಪ್ರತ್ಯೇಕ ಸ್ಥಳ ಮೀಸಲಿಡದೆಯೇ ಧೂಮಪಾನಕ್ಕೆ ಅವಕಾಶ ನೀಡಿದ ಕಾರಣಕ್ಕೆ ಪಬ್‌ನ ಮ್ಯಾನೇಜರ್, ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮೇ 29ರಂದು ಪೊಲೀಸರು ಪಬ್‌ಗೆ ದಾಳಿ ನಡೆಸಿದ್ದು ಎನ್​ಸಿಆರ್ ದಾಖಲಿಸಿಕೊಂಡಿದ್ದರು. ಅದಾದ ಬಳಿಕ ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

Download Eedina App Android / iOS

X