ಕಾಂಗ್ರೆಸ್‌ ಸೇರಲು ಬೊಮ್ಮಾಯಿಗೆ ಆಹ್ವಾನ ನೀಡಿದ ಎಂ ಬಿ ಪಾಟೀಲ್

Date:

Advertisements

ವಿಧಾನಸಭೆ ಚುನಾವಣೆ ಮುಗಿದು ಎರಡು ತಿಂಗಳು ಕಳೆದರೂ ಬಿಜೆಪಿ ಈವರೆಗೂ ವಿಪಕ್ಷ ನಾಯಕನ ಆಯ್ಕೆ ಮಾಡಿಲ್ಲ. ಈ ವಿಚಾರವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ನಿರಂತರವಾಗಿ ಟೀಕಿಸುತ್ತಲೇ ಇದೆ. ಕಾಂಗ್ರೆಸ್​ ನಾಯಕರು ಅಧಿವೇಶನದಲ್ಲಿಯೂ ಈ ವಿಚಾರವಾಗಿ ಬಿಜೆಪಿ ನಾಯಕರ ಕಾಲೆಳೆಯುತ್ತಿದ್ದಾರೆ.

ಈಗ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್​ ಟ್ವೀಟ್​​ ಮಾಡಿ “ಶೀಘ್ರದಲ್ಲೇ ವಿಪಕ್ಷ ನಾಯಕರಾಗಲಿರುವ ಮಾಜಿ ಸಿಎಂ ಎಚ್​ ಡಿ ಕುಮಾರಸ್ವಾಮಿ ಅವರಿಗೆ ಅಭಿನಂದನೆಗಳು. ಇನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್​ ಸೇರುವ ಬಗ್ಗೆ ಯೋಚಿಸಬೇಕು” ಎಂದು ಕಾಂಗ್ರೆಸ್‌ಗೆ ಆಹ್ವಾನ ನೀಡಿದ್ದಾರೆ.

“ಶೀಘ್ರದಲ್ಲೇ ವಿಪಕ್ಷ ನಾಯಕರಾಗಲಿರುವ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಅವರಿಗೆ ಅಭಿನಂದನೆಗಳು. ಅಂತಿಮವಾಗಿ ಬಿಜೆಪಿ ಬಸವರಾಜ ಬೊಮ್ಮಾಯಿಯವರನ್ನು ಮೂಲೆಗುಂಪು ಮಾಡಲು ನಿರ್ಧರಿಸಿದಂತಿದೆ. ಬೊಮ್ಮಾಯಿಯವರಿಗೂ ಸಹ ಬಿಎಸ್​ ಯಡಿಯೂರಪ್ಪ, ಜಗದೀಶ್​ ಶೆಟ್ಟರ್​ ಅವರಿಗೆ ಬಂದಂತಹ ಪರಿಸ್ಥಿತಿಯೇ ಬರಲಿದೆ” ಎಂದು ಎಚ್ಚರಿಕೆ ನೀಡಿದ್ದಾರೆ.

Advertisements

“ಬಿಜೆಪಿ ಎಂಬುದು ಕುಸಿಯುತ್ತಿರುವ ಕಾರ್ಡ್​ಗಳ ಮನೆಯಾಗಿದೆ. ಬೊಮ್ಮಾಯಿಯವರು ಕಾಂಗ್ರೆಸ್ ಸೇರುವ ಬಗ್ಗೆ ಯೋಚಿಸಬೇಕು. ಅವರು ಈ ಹಿಂದಿನಂತೆ ಹಾಗೂ ಹಿರಿಯ ಬೊಮ್ಮಾಯಿಯವರಂತೆ (ಎಸ್​ ಆರ್​ ಬೊಮ್ಮಾಯಿ) ಜಾತ್ಯತೀತ ಸಿದ್ಧಾಂತಕ್ಕೆ ಮರಳಿದರೆ ಕಾಂಗ್ರೆಸ್ ಹೈಕಮಾಂಡ್ ಪರಿಗಣಿಸಬಹುದು” ಎಂದು ಹೇಳಿದ್ದಾರೆ.

2024ರ ಲೋಕಸಭೆ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮೈತ್ರಿ ಮಾಡಿಕೊಳ್ಳುವ ಸೂಚನೆ ನೀಡುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ವಿಧಾನಮಂಡಲದ ಉಭಯ ಸದನಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ವಿವಿಧ ವಿಷಯಗಳಲ್ಲಿ ಪರಸ್ಪರ ಬೆಂಬಲ ವ್ಯಕ್ತಪಡಿಸಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X