ಬೀದರ್‌ | ಎಂಎಲ್‌ಸಿ ರವಿಕುಮಾರ್‌, ಛಲವಾದಿ ನಾರಾಯಣಸ್ವಾಮಿ ರಾಜೀನಾಮೆಗೆ ಕಾಂಗ್ರೆಸ್‌ ಆಗ್ರಹ

Date:

Advertisements

ಮೇಲ್ಮನೆ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸಚಿವ ಪ್ರಿಯಾಂಕ್‌ ಖರ್ಗೆ ವಿರುದ್ಧ ಹಾಗೂ ಎಂಎಲ್‌ಸಿ ಎನ್.ರವಿಕುಮಾರ್‌ ಅವರು ಕಲಬುರ್ಗಿ ಜಿಲ್ಲಾಧಿಕಾರಿಗಳ ವಿರುದ್ಧ ನೀಡಿದ ಕೀಳುಮಟ್ಟದ ಹಾಗೂ ಅಸಂವಿಧಾನಾತ್ಮಕ ಹೇಳಿಕೆಗಳನ್ನು ಖಂಡಿಸಿ ಸೋಮವಾರ ಬೀದರ್‌ನಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.

ನಗರದ ಡಾ. ಬಿ ಆರ್ ಅಂಬೇಡ್ಕರ್‌ ವೃತ್ತದಲ್ಲಿ ಸಂಸದ ಸಾಗರ್‌ ಖಂಡ್ರೆ ನೇತೃತ್ವದಲ್ಲಿ ಜಮಾಯಿಸಿದ ಜಿಲ್ಲಾ ಕಾಂಗ್ರೆಸ್ ಸಮಿತಿಯ ಮುಖಂಡರು ಬಿಜೆಪಿ ಹಾಗೂ ಎಂಎಲ್ಸಿಗಳಾದ ಛಲವಾದಿ ನಾರಾಯಣಸ್ವಾಮಿ ಹಾಗೂ ಎನ್.ರವಿಕುಮಾರ್ ವಿರುದ್ಧ ಘೋಷಣೆ ಕೂಗಿದರು.

ಸಂಸದ ಸಾಗರ್‌ ಖಂಡ್ರೆ ಮಾತನಾಡಿ, ʼಜವಾಬ್ದಾರಿ ಸ್ಥಾನದಲ್ಲಿರುವ ಪ್ರತಿಪಕ್ಷ ನಾಯಕರಿಂದ ಈ ರೀತಿಯ ವೈಯಕ್ತಿಕ ಟೀಕೆಗಳು ಹಾಗೂ ಅಸಂವಿಧಾನಾತ್ಮಕ ಪದಗಳ ಬಳಕೆ ಶೋಭೆ ತರುವುದಲ್ಲ. ಸರ್ಕಾರ ತಪ್ಪು ಮಾಡಿದರೆ, ಆ ತಪ್ಪುಗಳನ್ನು ಚರ್ಚೆಗೆ ತರಬೇಕು, ಸರಿದಾರಿಗೆ ತರಬೇಕು ಅದು ಪ್ರತಿಪಕ್ಷದ ಪ್ರಮುಖ ಹೊಣೆಗಾರಿಕೆ. ಆದರೆ ವೈಯಕ್ತಿಕ ನಿಂದನೆ ಮಾಡುವ ಪ್ರವೃತ್ತಿ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆʼ ಎಂದು ಆಕ್ಷೇಪ ವ್ಯಕ್ತಪಡಿಸಿದರು.

Advertisements

ಮುಖಂಡರಾದ ಭೀಮಸೇನರಾವ್‌ ಸಿಂಧೆ ಮಾತನಾಡಿ, ʼಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಗರಡಿಯಲ್ಲಿ ಬೆಳೆದ ನಾರಾಯಣಸ್ವಾಮಿ ಅವರು ಈಗ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿ ಈ ರೀತಿ ವೈಯಕ್ತಿಕ ಟೀಕೆ ಮಾಡುವುದು ಖಂಡನೀಯವಾಗಿದೆ. ಸಚಿವ ಪ್ರಿಯಾಂಕ್‌ ಖರ್ಗೆ ಹಾಗೂ ಕಲಬುರಗಿ ಜಿಲ್ಲಾಧಿಕಾರಿಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ವಿಧಾನ ಪರಿಷತ್‌ ಸದಸ್ಯರಾದ ಎನ್.ರವಿಕುಮಾರ್‌ ಹಾಗೂ ಛಲವಾದಿ ನಾರಾಯಣಸ್ವಾಮಿ ಅವರನ್ನು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕುʼ ಎಂದು ಆಗ್ರಹಿಸಿದರು.

ವಿಧಾನ ಪರಿಷತ್‌ ಸದಸ್ಯ ಡಾ.ಚಂದ್ರಶೇಖರ್‌ ಪಾಟೀಲ್‌, ನಗರಸಭೆ ಅಧ್ಯಕ್ಷ ಮುಹಮ್ಮದ್‌ ಗೌಸ್‌, ಬೀದರ್‌ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ್‌ ಚಿಮಕೋಡೆ, ಮಾಜಿ ಎಂಎಲ್ಸಿ ಅರವಿಂದಕುಮಾರ್‌ ಅರಳಿ ಸೇರಿದಂತೆ ಪ್ರಮುಖರಾದ ಅಭಿಷೇಕ ಪಾಟೀಲ್‌, ಸಚಿನ್‌ ಮಲ್ಕಾಪುರೆ, ಗೀತಾ ಪಂಡಿತ ಚಿದ್ರಿ, ರಾಜಶ್ರೀ ಶ್ರೀಕಾಂತ್‌ ಸ್ವಾಮಿ ಸೇರಿದಂತೆ ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X