100 ವರ್ಷದ ಹಿಂದೆಯೇ ಕುರುಬರ ಸಹಕಾರ ಸಂಘ ಸ್ಥಾಪಿಸಿದ್ದು ಸಾಮಾಜಿಕ ನ್ಯಾಯದ ಕಾರ್ಯ: ಸಿದ್ದರಾಮಯ್ಯ

Date:

Advertisements

ನೂರು ವರ್ಷಗಳ ಹಿಂದೆಯೇ ಕುರುಬ ಸಮಾಜವನ್ನು ಸಂಘಟಿಸಿ ಸಹಕಾರ ಸಂಘ ಸ್ಥಾಪಿಸಿದ್ದು ಅತ್ಯಂತ ಮುಂದಾಲೋಚನೆಯ ಸಾಮಾಜಿಕ ನ್ಯಾಯದ ಕಾರ್ಯ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಗದಗದ ಕರ್ನಾಟಕ ಕುರುಬರ ಸಂಘ ಆಯೋಜಿಸಿದ್ದ ಕರ್ನಾಟಕ ಕುರುಬರ ಸಹಕಾರ ಪತ್ತಿನ ಸಂಘದ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, “ಅಂಬೇಡ್ಕರ್ ಅವರು ಕೊಟ್ಟಿರುವ ಶಿಕ್ಷಣ-ಸಂಘಟನೆ-ಹೋರಾಟ ಎನ್ನುವ ಮಂತ್ರವನ್ನು ಎಲ್ಲರೂ ಪಾಲಿಸಿಬೇಕು. ಸಂವಿಧಾನ ಜಾರಿಯಾಗಿ 75 ವರ್ಷವಾದರೂ ಸಂಪೂರ್ಣ ಶಿಕ್ಷಣ ಸಾಧ್ಯವಾಗಿಲ್ಲ. ಶಿಕ್ಷಣ-ಸಂಘಟನೆ-ಹೋರಾಟ ಅಂಬೇಡ್ಕರ್ ಅವರು ದೇಶದ ಹಿಂದುಳಿದವರಿಗೆ ಕೊಟ್ಟಿರುವ ಮಂತ್ರ. ಆದರೆ, ಸಂವಿಧಾನ ಜಾರಿಗೆ ಮೊದಲೇ ಮುಂದಾಲೋಚನೆಯಿಂದ ಪತ್ತಿನ‌ ಸಹಕಾರ ಸಂಘ ಸ್ಥಾಪಿಸಿರುವುದು ಅತ್ಯಂತ ಶ್ಲಾಘನೀಯ ಕಾರ್ಯ” ಎಂದರು.

“ಸಮಾಜದಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ ಶೂದ್ರ ವರ್ಗದ ಜನ‌ ಹಿಂದುಳಿಯಲು ಅವರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದೇ ಪ್ರಮುಖ ಕಾರಣ. ಶೂದ್ರರು, ದಲಿತರು ಮಾತ್ರ ಶಿಕ್ಷಣ ಪಡೆಯುವಂತಿರಲಿಲ್ಲ . ಅಂಬೇಡ್ಕರ್ ಅವರ ಜೀವಮಾನದ ಹೋರಾಟವೇ ಈ‌ ಅಸಮಾನತೆಯನ್ನು ಅಳಿಸುವುದಾಗಿತ್ತು. ಇದಕ್ಕೆ ಶಿಕ್ಷಣವೇ ಪ್ರಮುಖ‌ ಅಸ್ತ್ರ ಎಂದು ಅಂಬೇಡ್ಕರ್ ಮನಗಂಡಿದ್ದರು” ಎಂದು ಹೇಳಿದರು.

Advertisements

“ಶಿಕ್ಷಣ ದೊರಕದಿದ್ದರೆ ಸ್ವಾಭಿಮಾನಿಗಳಾಗಿ ಇರಲು ಸಾಧ್ಯವೇ ಇಲ್ಲ. ನನಗೆ ರಾಜಪ್ಪ ಎನ್ನುವ ಶಿಕ್ಷಕರು ಸಿಗದೇ ಹೋಗಿದ್ದರೆ ನನಗೆ ಶಿಕ್ಷಣವೂ ಸಿಗುತ್ತಿರಲಿಲ್ಲ, ನಾನು ಮುಖ್ಯಮಂತ್ರಿಯೂ ಆಗುತ್ತಿರಲಿಲ್ಲ. ಹಸು ಕಾಯ್ಕೊಂಡು ಇರಬೇಕಾಗಿತ್ತು. ಅದಕ್ಕೆ ನಮ್ಮ ಸರ್ಕಾರ ಶಿಕ್ಷಣ-ಆರೋಗ್ಯ-ಅನ್ನಕ್ಕೆ ಪ್ರಮುಖ ಆಧ್ಯತೆ ನೀಡುತ್ತಿದೆ. ಅಂಬೇಡ್ಕರ್, ಬಸವಣ್ಣ, ಮಹಾತ್ಮ ಗಾಂಧಿಯವರ ಆಶಯಗಳು ಈಡೇರಬೇಕಾದರೆ ಸರ್ವರಿಗೂ ಶಿಕ್ಷಣ ಸಿಗಬೇಕು. ಎಲ್ಲರಿಗೂ ಆರ್ಥಿಕ ಶಕ್ತಿ ಬರಬೇಕು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

Download Eedina App Android / iOS

X