ಆಲಮಟ್ಟಿ ಅಣೆಕಟ್ಟು ಎತ್ತರ ಕುರಿತು ಚರ್ಚಿಸಲು ಪ್ರಧಾನಿ ಭೇಟಿಗೆ ಸಮಯ ಕೇಳುತ್ತೇವೆ: ಡಿ.ಕೆ. ಶಿವಕುಮಾರ್

Date:

Advertisements

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳದ ಬಗ್ಗೆ ಮಹಾರಾಷ್ಟ್ರ ಸಿಎಂ ಪತ್ರಕ್ಕೆ, ನಮ್ಮ ಮುಖ್ಯಮಂತ್ರಿಗಳು ಪತ್ರ ಬರೆದ ನಂತರ, ಈ ಬಗ್ಗೆ ಚರ್ಚಿಸಲು ಪ್ರಧಾನಮಂತ್ರಿ ಹಾಗೂ ಕೇಂದ್ರ ಜಲಶಕ್ತಿ ಸಚಿವರ ಭೇಟಿಗೆ ಸಮಯ ಕೇಳುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸುಮ್ಮನಹಳ್ಳಿ ಮಾಗಡಿ ರಸ್ತೆಯಲ್ಲಿರುವ ನಾಡಪ್ರಭು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಜಮೀನು ಹಾಗೂ ಇದೇ 27 ರಂದು ಕೆಂಪೇಗೌಡ ಜಯಂತಿ ಕಾರ್ಯಕ್ರಮ ನಡೆಸಲು ಉದ್ದೇಶಿಸಿರುವ ಡಾ. ಬಾಬು ಜಗಜೀವನ್ ರಾಮ್ ಸಂಶೋಧನಾ ಸಂಸ್ಥೆಯ ಸಭಾಂಗಣವನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಂಗಳವಾರ ವೀಕ್ಷಿಸಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.

“ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳ ವಿಚಾರವಾಗಿ ಮಹಾರಾಷ್ಟ್ರ ಸಿಎಂ ಪತ್ರಕ್ಕೆ ನಮ್ಮ ಮುಖ್ಯಮಂತ್ರಿಗಳು ಎರಡು ದಿನಗಳಲ್ಲಿ ಪತ್ರ ಬರೆಯಲಿದ್ದಾರೆ. ನಾನು ನನ್ನ ಅಭಿಪ್ರಾಯವನ್ನು ಈಗಾಗಲೇ ಕಳುಹಿಸಿಕೊಟ್ಟಿದ್ದೇನೆ. ಸಿಎಂ ಬರೆಯುವ ಪತ್ರವನ್ನು ಎಲ್ಲಾ ಸಂಸದರಿಗೆ ಕಳುಹಿಸಿಕೊಡುತ್ತೇನೆ. ನಂತರ ಈ ವಿಚಾರವಾಗಿ ಚರ್ಚಿಸಲು ಪ್ರಧಾನಮಂತ್ರಿ ಹಾಗೂ ಕೇಂದ್ರ ಜಲಶಕ್ತಿ ಸಚಿವರ ಭೇಟಿಗೆ ದಿನಾಂಕ ಕೇಳುತ್ತೇವೆ. ಈ ವಿಚಾರವಾಗಿ ನಾವೆಲ್ಲಾ ಸೇರಿ ಒತ್ತಾಯ ಮಾಡಲೇಬೇಕು” ಎಂದು ಅಭಿಪ್ರಾಯಪಟ್ಟರು.

Advertisements

ಸಮಾಜ ಕಲ್ಯಾಣ ಇಲಾಖೆ ಜಾಗ ಬದಲಿಗೆ ಸಂಪುಟ ಸಭೆಯಲ್ಲಿ ಪ್ರಸ್ತಾವನೆ

ಕೆಂಪೇಗೌಡ ಜಯಂತಿ ಕಾರ್ಯಕ್ರಮ ಸ್ಥಳ ವೀಕ್ಷಣೆ ಬಗ್ಗೆ ಕೇಳಿದಾಗ, “ಈ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಇಲ್ಲಿ ನಡೆಸಲು ತೀರ್ಮಾನಿಸಿದ್ದೇವೆ. ನಮ್ಮ ಸರ್ಕಾರ ಸಮೀಪದಲ್ಲೇ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಜಮೀನು ನಿಗದಿ ಮಾಡಿದೆ. ಈ ಜಾಗದಲ್ಲಿ ಜೂ.27ರಂದು ಶಂಕುಸ್ಥಾಪನೆ ಮಾಡಿ, ನಂತರ ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಇಲ್ಲಿ ಆಚರಿಸಲು ಮುಂದಾಗಿದ್ದೇವೆ. ಇಲ್ಲಿ ಕೆಂಪೇಗೌಡರ ಇತಿಹಾಸ ಸಾರುವ ವಸ್ತುಪ್ರದರ್ಶನ ಕೇಂದ್ರ ನಿರ್ಮಾಣ ಮಾಡಲಾಗುವುದು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜ್ಯ ಸರ್ಕಾರದ ‘ಗೃಹ ಆರೋಗ್ಯ’ ಮತ್ತೊಂದು ಗ್ಯಾರಂಟಿ ಯೋಜನೆಯೇ?

ಹೈಕಮಾಂಡ್ ಕರೆದರೆ ದೆಹಲಿಗೆ ಹೋಗುವೆ

ದೆಹಲಿ ಪ್ರವಾಸದ ಬಗ್ಗೆ ಕೇಳಿದಾಗ, “ಕೇಂದ್ರ ಸಚಿವಾಲಯಗಳು ಅಲ್ಲಿರುವ ಕಾರಣ ದೆಹಲಿಗೆ ತೆರಳಬೇಕಾಗುತ್ತದೆ. ಸಧ್ಯಕ್ಕೆ ನನಗೆ ದೆಹಲಿಯಲ್ಲಿ ಯಾವುದೇ ಕಾರ್ಯಕ್ರಮ ಇಲ್ಲ. ಸಿಎಂ ಅವರ ಕಾರ್ಯಕ್ರಮ ಇರಬಹುದು. ಹೈಕಮಾಂಡ್ ನನಗೆ ಭೇಟಿ ಮಾಡಲು ತಿಳಿಸಿದರೆ ನಾನು ಹೋಗುತ್ತೇನೆ. ಆದರೆ ನಾನು ಕೆಲವು ಕೇಂದ್ರ ಸಚಿವರನ್ನು ಭೇಟಿ ಮಾಡಬೇಕಿದ್ದು, ಅವರ ಸಮಯ ನಿಗದಿ ಮಾಡಿದ ನಂತರ ನಾನು ಪ್ರವಾಸ ಮಾಡುತ್ತೇನೆ” ಎಂದು ತಿಳಿಸಿದರು.

ನಿಗಮ ಮಂಡಳಿ ನೇಮಕ ಬಗ್ಗೆ ಕೇಳಿದಾಗ, “ಅದನ್ನು ಶೀಘ್ರದಲ್ಲೇ ಮಾಡುತ್ತೇವೆ. ಈಗಾಗಲೇ ಗ್ಯಾರಂಟಿ ಸಮಿತಿಯಲ್ಲಿ 4 ಸಾವಿರ ಕಾರ್ಯಕರ್ತರಿಗೆ ಅಧಿಕಾರ ನೀಡಿದ್ದೇವೆ. 8 ಸಾವಿರ ಜನ ಕಾರ್ಯಕರ್ತರನ್ನು ಬೇರೆ ಬೇರೆ ಸಮಿತಿ ಸದಸ್ಯರನ್ನಾಗಿ ಮಾಡಿದ್ದೇವೆ. ರಾಜ್ಯ ಮಟ್ಟದಲ್ಲಿ 500-600 ಜನಕ್ಕೆ ಮಾಡಬೇಕಿದೆ. ಈ ಪಟ್ಟಿ ಸಿದ್ಧವಾಗಿದ್ದು, ಸ್ಥಳೀಯ ನಾಯಕರ ಜತೆ ಚರ್ಚಿಸಿ ಪ್ರಕಟಿಸುತ್ತೇವೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X