ಖೇಲಾ ಚಿತ್ರದ ʼಪುಣ್ಯಾತ್ ಗಿತ್ತೀʼ ಹಾಡಿಗೆ ಭರ್ಜರಿ ಪ್ರತಿಕ್ರಿಯೆ

Date:

Advertisements

ಭರತ್ ಫಿಲಂಸ್ ಲಾಂಛನದಲ್ಲಿ ವಿ ಜೆ ಭರತ್ ನಿರ್ಮಿಸಿ, ನಿರ್ದೇಶಿಸುತ್ತಿರುವ ವಿಭಿನ್ನ ಕಥಾಹಂದರ ಹೊಂದಿರುವ “ಖೇಲಾ” ಚಿತ್ರದ ʼಪುಣ್ಯಾತ್‌ ಗಿತ್ತೀʼ ಹಾಡು ಬಿಡುಗಡೆಯಾಗಿದ್ದು, ಭರ್ಜರಿ ಪ್ರಶಂಸೆ ಗಿಟ್ಟಿಸುತ್ತಿದೆ.

ಖ್ಯಾತ ಗಾಯಕ ವೇಲ್ ಮುರುಗನ್ ಹಾಡಿರುವ ಈ ಹಾಡಿಗೆ ಪ್ರಮೋದ್ ಜೋಯಿಸ್ ಸಾಹಿತ್ಯ ಬರೆದಿದ್ದು, ಎಂ.ಎಸ್ ತ್ಯಾಗರಾಜ್ ಸಂಗೀತ ಸಂಯೋಜಿಸಿದ್ದಾರೆ. ʼಭರತ್‌ ಫಿಲಂಸ್‌ʼ ಯೂಟ್ಯೂಬ್‌ ಚಾನೆಲ್‌ನಲ್ಲಿ ಹಾಡು ಬಿಡುಗಡೆಯಾಗಿದ್ದು, ಈಗಾಗಲೇ 4 ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದಿದೆ.

ʼಶ್ರಾವಣಿ ಸುಬ್ರಹ್ಮಣ್ಯʼ ಹಾಗೂ ʼಮೈನಾʼ ಧಾರಾವಾಹಿಗಳ ಖ್ಯಾತಿಯ ವಿಹಾನ್ ಪ್ರಭಂಜನ್ ನಾಯಕನಾಗಿ ಹಾಗೂ ಆಶಿಕ ರಾವ್ ನಾಯಕಿಯಾಗಿ ನಟಿಸಿದ್ದು, ವಿಶೇಷ ಪಾತ್ರದಲ್ಲಿ ಸಂಗೀತ ಭಟ್, ಯುವರಾಜ್ ಗೌಡ ಸೇರಿದಂತೆ ಯುವ ಕಲಾವಿದರ ತಾರಾಗಣ ಚಿತ್ರಕ್ಕಿದೆ.

Advertisements

ಚಿತ್ರದ ಕುರಿತು, “ನಾನು ಕನ್ನಡದ ಹಿರಿಯ ನಿರ್ಮಾಪಕ ಹಾಗೂ ನಿರ್ದೇಶಕ ವಿಷ್ಣುಕಾಂತ್ ಅವರ ಪುತ್ರ. ಅಪ್ಪನ ಮಾರ್ಗದರ್ಶನದಲ್ಲಿ ಚೊಚ್ಚಲ ಚಿತ್ರವನ್ನು ನಿರ್ಮಿಸುವುದರ ಜೊತೆಗೆ ನಿರ್ದೇಶನವನ್ನೂ ಮಾಡಿದ್ದೇನೆ. ಪ್ರಮುಖವಾಗಿ ಇದೊಂದು ಪ್ರೇಮ ಕಥಾನಕವಾಗಿದ್ದರೂ, ತಾಯಿ-ಮಗನ ಬಾಂಧವ್ಯ, ಸಸ್ಪೆನ್ಸ್, ಥ್ರಿಲ್ಲರ್ ಜತೆ ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳು ನಮ್ಮ ಚಿತ್ರದಲ್ಲಿದೆ. ತಾಯಂದಿರ ದಿನದಂದು ಮೊದಲ ಹಾಡು ಬಿಡುಗಡೆಯಾಗಿತ್ತು. ಇಂದು “ಪುಣ್ಯಾತ್ ಗಿತ್ತೀ” ಹಾಡನ್ನು ಬಿಡುಗಡೆ ಮಾಡಿದ್ದೇವೆ. ಎಲ್ಲಾ ಹಾಡುಗಳು ಉತ್ತಮವಾಗಿ ಮೂಡಿ ಬಂದಿದೆ. ಚಿತ್ರದ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದ್ದು, ಒಂದು ಹಾಡು ಹಾಗು ಒಂದು ಫೈಟ್ ನ‌ ಚಿತ್ರೀಕರಣ ಮಾತ್ರ ಬಾಕಿ ಇದೆ” ಎಂದು ನಿರ್ಮಾಪಕ ಹಾಗೂ ನಿರ್ದೇಶಕ‌ ಭರತ್ ವಿ.ಜೆ ತಿಳಿಸಿದರು.

ಇದನ್ನೂ ಓದಿ: ʼಮಾದೇವʼ ಪ್ರಿ ರಿಲೀಸ್‌ ಇವೆಂಟ್; ‘ಎದೇಲಿ ತಂಗಾಳಿ’ ಹಾಡು ಬಿಡುಗಡೆ

“ತಾಯಂದಿರ ದಿನದಂದು ಬಿಡುಗಡೆಯಾದ ತಾಯಿ-ಮಗನ ಬಾಂಧವ್ಯದ ಹಾಡು ಈಗಾಗಲೇ ಜನಪ್ರಿಯವಾಗಿದೆ. ಇಂದು ಬಿಡುಗಡೆಯಾಗಿರುವ ʼಪುಣ್ಯಾತ್ ಗಿತ್ತೀʼ ಹಾಡು ಕೂಡ ಎಲ್ಲರ ಮೆಚ್ಚುಗೆ ಪಡೆಯುತ್ತಿದೆ.‌ ನಾನು ಈ ಚಿತ್ರದ ನಾಯಕ .‌ಚಿತ್ರದಲ್ಲಿ ಕಾಲೇಜು ಹುಡುಗ” ಎಂದು ನಾಯಕ ವಿಹಾನ್ ಪ್ರಭಂಜನ್ ಹೇಳಿದರು.

ಚಿತ್ರದಲ್ಲಿ ಐದು ಹಾಡುಗಳಿದ್ದು, ಈ ಹಾಡು ಸೇರಿದಂತೆ ಎರಡು ಹಾಡುಗಳನ್ನು ಪ್ರಮೋದ್ ಜೋಯಿಸ್ ಬರೆದಿದ್ದಾರೆ ಎಂದರು ಸಂಗೀತ ನಿರ್ದೇಶಕ ಎಂ.ಎಸ್.ತ್ಯಾಗರಾಜ್.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

Download Eedina App Android / iOS

X