ಹಿಂದೂಪರ ಕಾರ್ಯಕರ್ತರಿಗೆ ಕಿರುಕುಳದ ಆರೋಪ : ರಾಜ್ಯ ಪೊಲೀಸ್‌ ದೂರು ಪ್ರಾಧಿಕಾರಕ್ಕೆ ಸಚಿವೆ ಶೋಭಾ ದೂರು

Date:

Advertisements

“ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಹಿಂದೂಪರ ಕಾರ್ಯಕರ್ತರಿಗೆ ಪೊಲೀಸರು ವಿನಾಕಾರಣ ಕಿರುಕುಳ ನೀಡುತ್ತಿದ್ದಾರೆ” ಎಂದು ರಾಜ್ಯ ಪೊಲೀಸ್‌ ದೂರು ಪ್ರಾಧಿಕಾರಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ದೂರು ನೀಡಿದ್ದಾರೆ.

ನಿನ್ನಯಷ್ಟೇ ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ದ್ವೇಷಭಾಷಣ ಸಂಬಂಧ ಎಫ್‌ಐಆರ್‌ ದಾಖಲಿಸಲಾಗಿದೆ. ಅರುಣ್‌ ಕುಮಾರ್‌ ಪುತ್ತಿಲ ಸೇರಿದಂತೆ ಹಲವರ ವಿರುದ್ಧ ಗಡಿಪಾರು ನೋಟಿಸ್‌ ಹೊರಡಿಸಲಾಗಿದೆ. ಪೊಲೀಸರ ಈ ಕ್ರಮವನ್ನು ಬಿಜೆಪಿ ಮುಖಂಡರು ಖಂಡಿಸಿದ್ದಾರೆ. ಈ ಮಧ್ಯೆ ಶೋಭಾ ದೂರು ನೀಡಿದ್ದಾರೆ.

“ಕಾಂಗ್ರೆಸ್ ಸರ್ಕಾರದ ಒತ್ತಡಕ್ಕೆ ಮಣಿದ ಪೊಲೀಸರು ಹಿಂದೂ ಪರ ಸಂಘಟನೆಗಳು, ಸಾಮಾಜಿಕ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದ್ದಾರೆ. ವ್ಯಾಪಾರಿಗಳು ಮತ್ತು ನಾಗರಿಕರ ಮೇಲೂ ವ್ಯವಸ್ಥಿತವಾಗಿ ದಾಳಿ ಮಾಡಲಾಗುತ್ತಿದೆ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Advertisements

“ಪೊಲೀಸ್ ಅಧಿಕಾರಿಗಳು ಹಿಂದೂ ಪರ ಸಂಘಟನೆಗಳು, ಸಾಮಾಜಿಕ ಕಾರ್ಯಕರ್ತರ ಮನೆಗಳಿಗೆ ತಡರಾತ್ರಿ ಭೇಟಿ ನೀಡುತ್ತಿದ್ದಾರೆ. ಅವರ ನಿವಾಸಗಳ ಫೋಟೊ ತೆಗೆದುಕೊಂಡು ಹೋಗುತ್ತಿದ್ದಾರೆ. ಯಾವುದೇ ವಾರಂಟ್‌ಗಳು ಇಲ್ಲದೆಯೂ ಜಿಪಿಎಸ್​ ಮುಖಾಂತರ ಫೋಟೋ ಸೆರೆಹಿಡಿಯುತ್ತಿದ್ದಾರೆ. ಪೊಲೀಸರ ಈ ಕ್ರಮಗಳು ಕಾನೂನು ಬಾಹಿರವಾಗಿದೆ. ಇದು ಮೂಲಭೂತ ಹಕ್ಕುಗಳ ಸ್ಪಷ್ಟವಾದ ಉಲ್ಲಂಘನೆಯಾಗಿದೆ. ತಕ್ಷಣವೇ ತಾವು ಮಧ್ಯಪ್ರವೇಶ ಮಾಡಬೇಕು. ಪೊಲೀಸರ ಕಾನೂನು ಬಾಹಿರ ಕ್ರಮದ ವಿರುದ್ಧ ತನಿಖೆ ನಡೆಸಬೇಕು” ಎಂದು ಪ್ರಾಧಿಕಾರದ ಮುಖ್ಯಸ್ಥ ನ್ಯಾ. ಸುಧೀಂದ್ರ ರಾವ್ ಅವರಿಗೆ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X