ಸಾಮಾಜಿಕ ಜಾಲತಾಣಗಳಲ್ಲಿನ ಕೋಮು ಪ್ರಚೋದನಕಾರಿ ಪೋಸ್ಟ್‌ಗಳ ಬಗ್ಗೆ ನಿಗಾ ಇರಿಸಲು ಈಗಾಗಲೇ ಉಡುಪಿ ಜಿಲ್ಲೆಯಲ್ಲಿ ವಿಶೇಷ ಪೊಲೀಸ್ ತಂಡ ರಚಿಸಲಾಗಿದೆ. ಅಲ್ಲದೇ ಇಡೀ ಕರ್ನಾಟಕ ರಾಜ್ಯದಲ್ಲೂ ಹಲವು ತಂಡಗಳು ಈ ರೀತಿಯ ಕೋಮು ಪ್ರಚೋದಕ ಪೋಸ್ಟ್‌ಗಳ ಬಗ್ಗೆ ನಿಗಾ ಇರಿಸಿದೆ. ಆದುದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನಕಾರಿ ವಿಡಿಯೋ ಹಾಗೂ ಫೋಟೋಗಳನ್ನು ಶೇರ್ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರಗಿಸಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ತಿಳಿಸಿದ್ದಾರೆ.
ಇತ್ತೀಚೆಗೆ ನಡೆದ ಘಟನೆಯ ಹಿನ್ನೆಲೆಯಲ್ಲಿ ಈ ವಿಚಾರವನ್ನು ನಾವು ತುಂಬಾ ಗಂಭೀರವಾಗಿ ಪರಿಗಣಿಸಿ ದ್ದೇವೆ. ಆದುದರಿಂದ ಸಾಮಾಜಿಕ ಜಾಲ ತಾಣಗಳಲ್ಲಿ ಪೋಸ್ಟ್ ಮಾಡಲು ಹೋಗಬಾರದು. ಒಮ್ಮೆ ಪೊಲೀಸ್ ಕೇಸ್ ದಾಖಲಾದರೆ ಅವರಿಗೆ ಯಾವುದೇ ಖಾಸಗಿ, ಸರಕಾರಿ, ಸೈನ್ಯ ಅಥವಾ ಪೊಲೀಸ್ ಸೇರಿದಂತೆ ಯಾವುದೇ ಕೆಲಸ ಸಿಗುವುದಿಲ್ಲ. ಯುವ ಜನತೆ ಈ ರೀತಿ ಅಸಂಬದ್ಧ ಮಾಡಲು ಹೋಗಬಾ ರದು. ವಾಟ್ಸಾಪ್ ಗ್ರೂಪ್, ಫೇಸ್ ಬುಕ್‌ನಲ್ಲಿ ಎಲ್ಲವನ್ನು ನಾವು ವಾಚ್ ಮಾಡುತ್ತಿದ್ದೇವೆ. ಅದರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರಗಿಸಲಾಗುವುದು ಎಂದು ಎಸ್ಪಿ ಹೇಳಿಕೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.